Connect with us

ರಾಜಕೀಯ

ಭಾರತವನ್ನು ಅಮೆರಿಕನ್ ರಥದ ಇನ್ನೊಂದು ಗಾಲಿಯಾಗಿಸುತ್ತಿರುವ ಮೋದಿ

Published

on

 

  • ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ.

ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮ ಗೋಷ್ಠಿಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ವಿನಂತಿಸಿಕೊಂಡಿದ್ದಾರೆ ಎಂದು ಹೇಳಲಾದ ಚಿತ್ರವು ತಳಮಳಕಾರೀ ಪರಿಣಾಮವನ್ನು ಉಂಟು ಮಾಡಿದೆ. ಗೋಷ್ಠಿಯಲ್ಲಿ ಅವರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉಪಸ್ಥಿತರಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಮೋದಿ ಕೇಳಿದ್ದಾರೋ ಇಲ್ಲವೋ ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ ಮೋದಿಯವರ ವಿದೇಶಾಂಗ ನೀತಿ ಎಷ್ಟು ಆಭಾಸಕಾರಿಯಾಗಿ ಪರಿಣಮಿಸಿದೆ ಎನ್ನುವುದನ್ನು ಈ ಪ್ರಕರಣ ಬಹಿರಂಗಪಡಿಸುತ್ತದೆ ಎನ್ನುವುದು ಗಮನಾರ್ಹವಾಗಿದೆ.

ಪಾಕಿಸ್ತಾನ ಕುರಿತ ಅಮೆರಿಕದ ಧೋರಣೆಯಲ್ಲಿ ಯಾವ ರೀತಿಯ ಬದಲಾವಣೆ ಉಂಟಾಗಿದೆ ಎಂಬುದನ್ನು ಇಮ್ರಾನ್ ಖಾನ್‌ರ ಅಮೆರಿಕ ಭೇಟಿಯು ದೃಢಪಡಿಸುತ್ತದೆ. ಅಫಘಾನಿಸ್ತಾನದಿಂದ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲು ಟ್ರಂಪ್ ಬಯಸಿರುವ ಹಿನ್ನೆಲೆಯಲ್ಲಿ ತಾಲಿಬಾನ್ ಮಾತುಕತೆಗೆ ಬರುವ ವಿಚಾರದಲ್ಲಿ ಪಾಕಿಸ್ತಾನದ ಪಾತ್ರ ನಿರ್ಣಾಯಕವಾಗಲಿದೆ. ಇಮ್ರಾನ್ ಖಾನ್‌ರ ಭೇಟಿಯು ತಾಲಿಬಾನ್ ಜೊತೆಗೆ ಶಾಂತಿ ಮಾತುಕತೆಯಲ್ಲಿ ಆಗಿರುವ ಪ್ರಗತಿಗೆ ಸಿಕ್ಕಿರುವ ಮಾನ್ಯತೆಯಂತೆ ಆಗಿದೆ. ಇದರ ಶ್ರೇಯಸ್ಸನ್ನು ಪಾಕಿಸ್ತಾನಕ್ಕೆ ಸಲಲಿಸಲಾಗಿದೆ.. ಈ ಇಡೀ ಪ್ರಕ್ರಿಯೆಯಲ್ಲಿ ಭಾರತವನ್ನು ಹೊರಗಿಡಲಾಗಿದೆ ಎನ್ನುವುದೇ ಏಕೈಕ ಸಮಸ್ಯೆಯಾಗಿದೆ.

ತನ್ನೆಲ್ಲ ವಿಚಾರಗಳನ್ನು ಅಮೆರಿಕಕ್ಕೆ ಬಿಟ್ಟುಕೊಟ್ಟ ಮೋದಿ ಸರಕಾರ ಈಗ ಹಠಾತ್ತನೆ ಒಂದು ಮುಜುಗರದ ಪರಿಸ್ಥಿತಿಗೆ ಸಿಲುಕಿ ಕೊಂಡಿದೆ. ಟ್ರಂಪ್‌ಗಾದರೋ ಅಫಘಾನಿಸ್ತಾನದಿಂದ ಹೊರಹೋಗುವುದು ಮತ್ತು ಕಾಶ್ಮೀರ ಸಮಸ್ಯೆ ಒಂದಕ್ಕೊಂದು ತಳಕು ಹಾಕಿಕೊಂಡಿದೆ- ಪಾಕಿಸ್ತಾನ ಬಯಸುವುದು ಕೂಡ ಇದನ್ನೇ.

ಕಳೆದ ಐದು ವರ್ಷಗಳಲ್ಲಿ ಮೋದಿಯವರು ಒಂದೊಂದೇ ಹೆಜ್ಜೆಯಾಗಿ ಅಮೆರಿಕದ ಭೌಗೊಳಿಕ-ರಾಜಕೀಯ ಕಾರ್ಯತಂತ್ರಕ್ಕೆ ಭಾರತವನ್ನು ಜೋಡಿಸಿದ್ದರು. ಅವರು ಅಮೆರಿಕದ ಇಂಡೊ-ಪೆಸಿಫಿಕ್ ವ್ಯೂಹಕ್ಕೆ ಬಲಿಬಿದ್ದರು; ಮಿಲಿಟರಿ ಸಾಗಾಣಿಕೆ ಒಪ್ಪಂದಕ್ಕೆ ಸಹಿಹಾಕುವ ಮೂಲಕ ಅಮೆರಿಕದ ಸೇನಾ ಕಾರ್ಯಾಚರಣೆಗಳಿಗೆ ಭಾರತದ ನೆಲೆಗಳನ್ನು ಬಳಸಿಕೊಳ್ಳುವ ಹಕ್ಕನ್ನು ಅಮೆರಿಕಕ್ಕೆ ಅವರು ಕೊಟ್ಟರು. ಅಮೆರಿಕದ ದೊಡ್ಡ ರಕ್ಷಣಾ ಪಾಲುದಾರನಾಗುವ ಮೂಲಕ ಮೋದಿ ಸರಕಾರವು ಭಾರತದ ಮಿಲಿಟರಿಯು ಅಮೆರಿಕದ ಸಶಸ್ತ್ರ ಪಡೆಗಳೊಂದಿಗೆ ಸಿಲುಕಿಕೊಳ್ಳುವ ಇತರ ಒಡಂಬಡಿಕೆಗಳಿಗೂ ಸಹಿ ಹಾಕಲು ಮುಂದಾಯಿತು.

ಒಂದು ಅಡಿಯಾಳು ಮಿತ್ರನಾಗಿ ಅಮೆರಿಕಕ್ಕೆ ಭಾರತ ಬಾಲಾಕೋಟ್‌ನಲ್ಲಿ ನಡೆದ ತನ್ನ ಪ್ರತೀಕಾರದ ವೈಮಾನಿಕ ದಾಳಿಯ ಬಗ್ಗೆ ಮಾಹಿತಿ ಒದಗಿಸಿತು. ಭಾರತೀಯ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ನಂತರ ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡಲಾಗುವುದು ಎಂದು ಮೊದಲು ಪ್ರಕಟಿಸಿದ್ದು ಟ್ರಂಪ್. ತನ್ನ ಆಡಳಿತ ತೀವ್ರ ಒತ್ತಡ ಹೇರಿದ್ದರಿಂದಲೇ ಹಫೀಜ್ ಸಯೀದ್‌ನನ್ನು ಬಂಧಿಸಲಾಯಿತು ಎಂದೂ ಟ್ರಂಪ್ ಹೇಳಿಕೊಂಡಿದ್ದಾರೆ.

ಈ ರೀತಿಯಾಗಿ ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ.

ಭಾರತವು ಅಮೆರಿಕದ ಆದೇಶಗಳಿಗೆ ಮಣಿದು ಇರಾನ್ ಮತ್ತು ವೆನಿಜುವೆಲಾದಿಂದ ತೈಲ ಖರೀದಿಯನ್ನು ನಿಲ್ಲಿಸಿದೆ. ಇಷ್ಟೆಲ್ಲಾ ವಿಧೇಯತೆಯಿಂದ ಹಿಂಬಾಲಿಸಿದ ನಂತರವೂ ಅಫಘಾನಿಸ್ತಾನದಲ್ಲಿ ಪರಿವರ್ತನೆಯ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಹತ್ವದ ಪಾತ್ರವನ್ನು ಟ್ರಂಪ್ ವಹಿಸುತ್ತಿರುವ ದೃಶ್ಯ ನಿಜಕ್ಕೂ ಬಹಳ ನೋವಿನ ಸಂಗತಿಯಾಗಿರಬೇಕು.

ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ. ಟ್ರಂಪ್ ಹೇಳಿಕೆಯನ್ನು ಎದುರಿಸುವ ಸಲುವಾಗಿ ಭಾರತೀಯ ಅಧಿಕೃತ ಮೂಲಗಳು ಒಸಾಕಾದಲ್ಲಿ ಟ್ರಂಪ್-ಮೋದಿ ಭೇಟಿಯ ಸಂದರ್ಭದಲ್ಲಿ ಇರಾನ್, ೫ಜಿ, ವಾಣಿಜ್ಯ ಮತ್ತು ರಕ್ಷಣೆ- ಹೀಗೆ ನಾಲ್ಕು ವಿಷಯಗಳನ್ನು ಮಾತ್ರ ಚರ್ಚಿಸಲಾಗಿತ್ತು ಎಂದು ತಿಳಿಸಿವೆ. ಈ ಅಜೆಂಡಾವೇ ಸಂಬಂಧವು ಯಾವ ಕಡೆಗೆ ವಾಲಿದೆ ಎಂಬುದನ್ನು ತೋರಿಸುತ್ತದೆ-ಎಲ್ಲವೂ ಅಮೆರಿಕದ ಪರವೇ ವಾಲಿದೆ.

ಭಾರತ ತೈಲ ಆಮದು ಸೇರಿದಂತೆ ಇರಾನ್ ಜತೆಗಿನ ಎಲ್ಲಾ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎನ್ನುವುದು ಅಮೆರಿಕದ ಬಯಕೆಯಾಗಿದೆ. ಚೀನಾ ಕಂಪೆನಿ ಹುವೆಯ್ ಅನ್ನು ಭಾರತ ಒಳಗೊಳಿಸಬಾರದು ಹಾಗೂ ಭಾರತದಲ್ಲಿ ೫ಜಿ ಜಾಲ ಅಭಿವೃದ್ಧಿ ಪಡಿಸುವಲ್ಲಿ ಅದಕ್ಕೆ ಯಾವುದೇ ಪಾತ್ರವನ್ನು ವಹಿಸಬಾರದು ಎನ್ನುವುದು ಅಮೆರಿಕದ ಇಚ್ಛೆಯಾಗಿದೆ. ವಾಣಿಜ್ಯ ವಿಚಾರದಲ್ಲಿ ಹೇಳುವುದಾದರೆ ಟ್ರಂಪ್ ಈಗಾಗಲೇ ಭಾರತದ ವಿರುದ್ಧ ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗೂ ಭಾರತವು ಸುಂಕದರಗಳನ್ನು ಇಳಿಸಬೇಕು ಮತ್ತು ಹೆಚ್ಚೆಚ್ಚು ಅಮೆರಿಕದ ವಸ್ತುಗಳನ್ನು ಖರೀದಿಸಬೇಕು ಎಂಬುದು ಅಮೆರಿಕದ ಬಯಕೆಯಾಗಿದೆ. ಅಂತಿಮವಾಗಿ, ರಕ್ಷಣಾ ಅಜೆಂಡಾವೆಂದರೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಮತ್ತು ರಕ್ಷಣಾ ಸಾಮಗ್ರಿಗಳನ್ನು ಖರೀದಿಸಬೇಕೆಂದೇ ಅದರ ಅರ್ಥವಿದ್ದಿರಬೇಕು.

ಈ ಏಕಮುಖ ರಸ್ತೆಯಲ್ಲಿ ಸಾಗಿದ ಮೇಲೆ, ಭಾರತವು ಅಮೆರಿಕದ ರಥದ ಎರಡು ಚಕ್ರಗಳಲ್ಲಿ ಒಂದು ಚಕ್ರವಾಗುವ ಸಂಭವವನ್ನು ಮೋದಿ ಎದುರಿಸಬೇಕಾಗಿ ಬಂದಿದೆ. ಪಾಕಿಸ್ತಾನ ಅದರ ಇನ್ನೊಂದು ಗಾಲಿಯಾಗಿದೆ. ತಾಲಿಬಾನ್ ಅಫಘಾನಿಸ್ತಾನವನ್ನು ವಶಪಡಿಸಿಕೊಂಡ ಮೇಲೆ ಅದರ ಪ್ರತ್ಯಾಘಾತವನ್ನು ಕೂಡ ಅವರು ಎದುರಿಸಬೇಕಾಗುತ್ತದೆ.

ಪ್ರಕಾಶ್ ಕಾರಟ್
ಅನು:ವಿಶ್ವ

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತರ ಉದ್ಘಾಟನೆಗಳು

ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

Published

on

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್‍ಗಾರ್ಡ್‍ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್‍ಗಳನ್ನು ಒದಗಿಸಲಾಗುವುದು.

ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಅಂದಾಜು 500 ಲಕ್ಷ ಮೊತ್ತದ ಕಳಪೆ ಕಾಮಗಾರಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಶ್ರೀ ಶಿವಮೂರ್ತಿ, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಾವಣಗೆರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಕಾಮಗಾರಿಯನ್ನು ಅಂದಾಜು 500 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಸದರಿ ಕಾಮಗಾರಿ ನಡೆದು ಒಂದು ವರ್ಷದ ಒಳಗಾಗಿ ರಸ್ತೆಯು ಹಾಳಾಗಿರುತ್ತದೆ. ಹೀಗಾಗಿ ಸದರಿ ಕಾಮಗಾರಿಗೆ ಸಂಬAಧಿಸಿದ ದಾಖಲೆಗಳನ್ನು ಮಾಹಿತಿಹಕ್ಕು ಅಡಿಯಲ್ಲಿ ಪಡೆದು ಪರಿಶೀಲನೆ ಮಾಡಿದಾಗ, ಅಂತಿಮ ಬಿಲ್ಲನ್ನು ಮಂಜೂರು ಮಾಡುವ ಪೂರ್ವದಲ್ಲಿಯೇ ಸದರಿ ಕಾಮಗಾರಿಯು ಹದಗೆಟ್ಟಿರುವ ಮಾಹಿತಿ ಪಡೆದು, ಮಾಹಿತಿಹಕ್ಕು ಅಡಿಯಲ್ಲಿ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲನೆ ಮಾಡಿದಾಗ ಕಳಪೆ ಕಾಮಗಾರಿ ನಡೆದಿರುವುದು ಕಂಡು ಬಂದ ಕಾರಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರು ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ದಾವಣಗೆರೆ ಇವರಿಗೆ ನಮ್ಮ ದೂರು ಅರ್ಜಿಯನ್ನು ವರ್ಗಾಹಿಸಿ, ‘ಸದರಿ ವಿಷಯದ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ಹಿಂಬರಹ ನೀಡುವಂತೆ’ ತಿಳಿಸಿರುತ್ತಾರೆ. ಆದರೆ 3 ತಿಂಗಳು ಕಳೆದರೂ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಮೂರ್ತಿ ಇವರು ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending