ರಾಜಕೀಯ
ಭಾರತವನ್ನು ಅಮೆರಿಕನ್ ರಥದ ಇನ್ನೊಂದು ಗಾಲಿಯಾಗಿಸುತ್ತಿರುವ ಮೋದಿ
- ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ.
ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮ ಗೋಷ್ಠಿಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ವಿನಂತಿಸಿಕೊಂಡಿದ್ದಾರೆ ಎಂದು ಹೇಳಲಾದ ಚಿತ್ರವು ತಳಮಳಕಾರೀ ಪರಿಣಾಮವನ್ನು ಉಂಟು ಮಾಡಿದೆ. ಗೋಷ್ಠಿಯಲ್ಲಿ ಅವರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉಪಸ್ಥಿತರಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಮೋದಿ ಕೇಳಿದ್ದಾರೋ ಇಲ್ಲವೋ ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ ಮೋದಿಯವರ ವಿದೇಶಾಂಗ ನೀತಿ ಎಷ್ಟು ಆಭಾಸಕಾರಿಯಾಗಿ ಪರಿಣಮಿಸಿದೆ ಎನ್ನುವುದನ್ನು ಈ ಪ್ರಕರಣ ಬಹಿರಂಗಪಡಿಸುತ್ತದೆ ಎನ್ನುವುದು ಗಮನಾರ್ಹವಾಗಿದೆ.
ಪಾಕಿಸ್ತಾನ ಕುರಿತ ಅಮೆರಿಕದ ಧೋರಣೆಯಲ್ಲಿ ಯಾವ ರೀತಿಯ ಬದಲಾವಣೆ ಉಂಟಾಗಿದೆ ಎಂಬುದನ್ನು ಇಮ್ರಾನ್ ಖಾನ್‌ರ ಅಮೆರಿಕ ಭೇಟಿಯು ದೃಢಪಡಿಸುತ್ತದೆ. ಅಫಘಾನಿಸ್ತಾನದಿಂದ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲು ಟ್ರಂಪ್ ಬಯಸಿರುವ ಹಿನ್ನೆಲೆಯಲ್ಲಿ ತಾಲಿಬಾನ್ ಮಾತುಕತೆಗೆ ಬರುವ ವಿಚಾರದಲ್ಲಿ ಪಾಕಿಸ್ತಾನದ ಪಾತ್ರ ನಿರ್ಣಾಯಕವಾಗಲಿದೆ. ಇಮ್ರಾನ್ ಖಾನ್‌ರ ಭೇಟಿಯು ತಾಲಿಬಾನ್ ಜೊತೆಗೆ ಶಾಂತಿ ಮಾತುಕತೆಯಲ್ಲಿ ಆಗಿರುವ ಪ್ರಗತಿಗೆ ಸಿಕ್ಕಿರುವ ಮಾನ್ಯತೆಯಂತೆ ಆಗಿದೆ. ಇದರ ಶ್ರೇಯಸ್ಸನ್ನು ಪಾಕಿಸ್ತಾನಕ್ಕೆ ಸಲಲಿಸಲಾಗಿದೆ.. ಈ ಇಡೀ ಪ್ರಕ್ರಿಯೆಯಲ್ಲಿ ಭಾರತವನ್ನು ಹೊರಗಿಡಲಾಗಿದೆ ಎನ್ನುವುದೇ ಏಕೈಕ ಸಮಸ್ಯೆಯಾಗಿದೆ.
ತನ್ನೆಲ್ಲ ವಿಚಾರಗಳನ್ನು ಅಮೆರಿಕಕ್ಕೆ ಬಿಟ್ಟುಕೊಟ್ಟ ಮೋದಿ ಸರಕಾರ ಈಗ ಹಠಾತ್ತನೆ ಒಂದು ಮುಜುಗರದ ಪರಿಸ್ಥಿತಿಗೆ ಸಿಲುಕಿ ಕೊಂಡಿದೆ. ಟ್ರಂಪ್‌ಗಾದರೋ ಅಫಘಾನಿಸ್ತಾನದಿಂದ ಹೊರಹೋಗುವುದು ಮತ್ತು ಕಾಶ್ಮೀರ ಸಮಸ್ಯೆ ಒಂದಕ್ಕೊಂದು ತಳಕು ಹಾಕಿಕೊಂಡಿದೆ- ಪಾಕಿಸ್ತಾನ ಬಯಸುವುದು ಕೂಡ ಇದನ್ನೇ.
ಕಳೆದ ಐದು ವರ್ಷಗಳಲ್ಲಿ ಮೋದಿಯವರು ಒಂದೊಂದೇ ಹೆಜ್ಜೆಯಾಗಿ ಅಮೆರಿಕದ ಭೌಗೊಳಿಕ-ರಾಜಕೀಯ ಕಾರ್ಯತಂತ್ರಕ್ಕೆ ಭಾರತವನ್ನು ಜೋಡಿಸಿದ್ದರು. ಅವರು ಅಮೆರಿಕದ ಇಂಡೊ-ಪೆಸಿಫಿಕ್ ವ್ಯೂಹಕ್ಕೆ ಬಲಿಬಿದ್ದರು; ಮಿಲಿಟರಿ ಸಾಗಾಣಿಕೆ ಒಪ್ಪಂದಕ್ಕೆ ಸಹಿಹಾಕುವ ಮೂಲಕ ಅಮೆರಿಕದ ಸೇನಾ ಕಾರ್ಯಾಚರಣೆಗಳಿಗೆ ಭಾರತದ ನೆಲೆಗಳನ್ನು ಬಳಸಿಕೊಳ್ಳುವ ಹಕ್ಕನ್ನು ಅಮೆರಿಕಕ್ಕೆ ಅವರು ಕೊಟ್ಟರು. ಅಮೆರಿಕದ ದೊಡ್ಡ ರಕ್ಷಣಾ ಪಾಲುದಾರನಾಗುವ ಮೂಲಕ ಮೋದಿ ಸರಕಾರವು ಭಾರತದ ಮಿಲಿಟರಿಯು ಅಮೆರಿಕದ ಸಶಸ್ತ್ರ ಪಡೆಗಳೊಂದಿಗೆ ಸಿಲುಕಿಕೊಳ್ಳುವ ಇತರ ಒಡಂಬಡಿಕೆಗಳಿಗೂ ಸಹಿ ಹಾಕಲು ಮುಂದಾಯಿತು.
ಒಂದು ಅಡಿಯಾಳು ಮಿತ್ರನಾಗಿ ಅಮೆರಿಕಕ್ಕೆ ಭಾರತ ಬಾಲಾಕೋಟ್‌ನಲ್ಲಿ ನಡೆದ ತನ್ನ ಪ್ರತೀಕಾರದ ವೈಮಾನಿಕ ದಾಳಿಯ ಬಗ್ಗೆ ಮಾಹಿತಿ ಒದಗಿಸಿತು. ಭಾರತೀಯ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ನಂತರ ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡಲಾಗುವುದು ಎಂದು ಮೊದಲು ಪ್ರಕಟಿಸಿದ್ದು ಟ್ರಂಪ್. ತನ್ನ ಆಡಳಿತ ತೀವ್ರ ಒತ್ತಡ ಹೇರಿದ್ದರಿಂದಲೇ ಹಫೀಜ್ ಸಯೀದ್‌ನನ್ನು ಬಂಧಿಸಲಾಯಿತು ಎಂದೂ ಟ್ರಂಪ್ ಹೇಳಿಕೊಂಡಿದ್ದಾರೆ.
ಈ ರೀತಿಯಾಗಿ ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ.
ಭಾರತವು ಅಮೆರಿಕದ ಆದೇಶಗಳಿಗೆ ಮಣಿದು ಇರಾನ್ ಮತ್ತು ವೆನಿಜುವೆಲಾದಿಂದ ತೈಲ ಖರೀದಿಯನ್ನು ನಿಲ್ಲಿಸಿದೆ. ಇಷ್ಟೆಲ್ಲಾ ವಿಧೇಯತೆಯಿಂದ ಹಿಂಬಾಲಿಸಿದ ನಂತರವೂ ಅಫಘಾನಿಸ್ತಾನದಲ್ಲಿ ಪರಿವರ್ತನೆಯ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಹತ್ವದ ಪಾತ್ರವನ್ನು ಟ್ರಂಪ್ ವಹಿಸುತ್ತಿರುವ ದೃಶ್ಯ ನಿಜಕ್ಕೂ ಬಹಳ ನೋವಿನ ಸಂಗತಿಯಾಗಿರಬೇಕು.
ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ. ಟ್ರಂಪ್ ಹೇಳಿಕೆಯನ್ನು ಎದುರಿಸುವ ಸಲುವಾಗಿ ಭಾರತೀಯ ಅಧಿಕೃತ ಮೂಲಗಳು ಒಸಾಕಾದಲ್ಲಿ ಟ್ರಂಪ್-ಮೋದಿ ಭೇಟಿಯ ಸಂದರ್ಭದಲ್ಲಿ ಇರಾನ್, ೫ಜಿ, ವಾಣಿಜ್ಯ ಮತ್ತು ರಕ್ಷಣೆ- ಹೀಗೆ ನಾಲ್ಕು ವಿಷಯಗಳನ್ನು ಮಾತ್ರ ಚರ್ಚಿಸಲಾಗಿತ್ತು ಎಂದು ತಿಳಿಸಿವೆ. ಈ ಅಜೆಂಡಾವೇ ಸಂಬಂಧವು ಯಾವ ಕಡೆಗೆ ವಾಲಿದೆ ಎಂಬುದನ್ನು ತೋರಿಸುತ್ತದೆ-ಎಲ್ಲವೂ ಅಮೆರಿಕದ ಪರವೇ ವಾಲಿದೆ.
ಭಾರತ ತೈಲ ಆಮದು ಸೇರಿದಂತೆ ಇರಾನ್ ಜತೆಗಿನ ಎಲ್ಲಾ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎನ್ನುವುದು ಅಮೆರಿಕದ ಬಯಕೆಯಾಗಿದೆ. ಚೀನಾ ಕಂಪೆನಿ ಹುವೆಯ್ ಅನ್ನು ಭಾರತ ಒಳಗೊಳಿಸಬಾರದು ಹಾಗೂ ಭಾರತದಲ್ಲಿ ೫ಜಿ ಜಾಲ ಅಭಿವೃದ್ಧಿ ಪಡಿಸುವಲ್ಲಿ ಅದಕ್ಕೆ ಯಾವುದೇ ಪಾತ್ರವನ್ನು ವಹಿಸಬಾರದು ಎನ್ನುವುದು ಅಮೆರಿಕದ ಇಚ್ಛೆಯಾಗಿದೆ. ವಾಣಿಜ್ಯ ವಿಚಾರದಲ್ಲಿ ಹೇಳುವುದಾದರೆ ಟ್ರಂಪ್ ಈಗಾಗಲೇ ಭಾರತದ ವಿರುದ್ಧ ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗೂ ಭಾರತವು ಸುಂಕದರಗಳನ್ನು ಇಳಿಸಬೇಕು ಮತ್ತು ಹೆಚ್ಚೆಚ್ಚು ಅಮೆರಿಕದ ವಸ್ತುಗಳನ್ನು ಖರೀದಿಸಬೇಕು ಎಂಬುದು ಅಮೆರಿಕದ ಬಯಕೆಯಾಗಿದೆ. ಅಂತಿಮವಾಗಿ, ರಕ್ಷಣಾ ಅಜೆಂಡಾವೆಂದರೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಮತ್ತು ರಕ್ಷಣಾ ಸಾಮಗ್ರಿಗಳನ್ನು ಖರೀದಿಸಬೇಕೆಂದೇ ಅದರ ಅರ್ಥವಿದ್ದಿರಬೇಕು.
ಈ ಏಕಮುಖ ರಸ್ತೆಯಲ್ಲಿ ಸಾಗಿದ ಮೇಲೆ, ಭಾರತವು ಅಮೆರಿಕದ ರಥದ ಎರಡು ಚಕ್ರಗಳಲ್ಲಿ ಒಂದು ಚಕ್ರವಾಗುವ ಸಂಭವವನ್ನು ಮೋದಿ ಎದುರಿಸಬೇಕಾಗಿ ಬಂದಿದೆ. ಪಾಕಿಸ್ತಾನ ಅದರ ಇನ್ನೊಂದು ಗಾಲಿಯಾಗಿದೆ. ತಾಲಿಬಾನ್ ಅಫಘಾನಿಸ್ತಾನವನ್ನು ವಶಪಡಿಸಿಕೊಂಡ ಮೇಲೆ ಅದರ ಪ್ರತ್ಯಾಘಾತವನ್ನು ಕೂಡ ಅವರು ಎದುರಿಸಬೇಕಾಗುತ್ತದೆ.
–ಪ್ರಕಾಶ್ ಕಾರಟ್
ಅನು:ವಿಶ್ವ
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

