Connect with us

ಲೈಫ್ ಸ್ಟೈಲ್

ಭಾರತದ ಸ್ವಾತಂತ್ರ್ಯಕ್ಕಿಂದು ಅಮೃತ ಮಹೋತ್ಸವ

Published

on

  • ಹನುಮಂತ ದಾಸರ ಹೊಗರನಾಳ

ಗತ್ತಿನ ಅತ್ಯಂತ ವೈವಿಧ್ಯಮಯ, ಹಾಗೂ ಸಂಪದ್ಭರಿತವಾದ, ಕಲೆ ಸಾಹಿತ್ಯ ಸಂಸ್ಕೃತಿ ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ವಿಭಿನ್ನ ಕ್ಷೇತ್ರಗಳಲ್ಲಿ ವಿಶೇಷ ಸ್ಥಾನಮಾನವನ್ನು ಹೊಂದಿದ ದೇಶ ಭಾರತ. ಇಂತಹ ಅಸಾಮಾನ್ಯ ರಾಷ್ಟ್ರದ ಶಾಂತಿ ಸಂಪತ್ತನ್ನು ಕೊಳ್ಳೇ ಹೊಡೆಯಲು ಬ್ರಿಟಿಷರು ಭಾರತವನ್ನು 200 ವರ್ಷಗಳ ವರೆಗೆ ಆಳಿ ಅಪಾರ ಸಂಪತ್ತನ್ನು ದೋಚಿದರು.

ಮೂಲ ಭಾರತೀಯರನ್ನು ತಮ್ಮ ಸೇವಕರನ್ನಾಗಿ ಮಾಡಿಕೊಂಡು ನಮ್ಮ ನೆಲದಲ್ಲೇ ಬೆಳೆಯುವ ಫಸಲಿಗೆ ತೆರಿಗೆ ಪಡೆದು ನಾವು ಬದುಕುವ ಕೆಲ ಹಕ್ಕನ್ನೇ ಕಿತ್ತುಕೊಂಡು ಬ್ರಿಟಿಷರ ಪ್ರತೀ ನಿಯಮಗಳಿಗೆ ಶರಣಾಗಿ ಅವರ ದಬ್ಬಾಳಿಕೆಗೆ ಗುರಿಯಾಗಿ ಬದುಕು ಸಾಗಿಸಿದ ದೇಶ ಕೊನೆಗೊಂದು ದಿನ ದೇಶಕ್ಕಾಗಿ ಜೀವ ಹೋದರೂ ಚಿಂತೆಯಿಲ್ಲ ನಮ್ಮ ಭಾರತ ಮಾತೆಗಾಗಿ ಭಾರತೀಯ ನೆಲಕ್ಕಾಗಿ ನಮ್ಮ ಪ್ರಾಣವನ್ನು ತ್ಯಾಗ ಮಾಡಿ ಬ್ರಿಟಿಷರನ್ನು ಭಾರತೀಯ ಭವ್ಯ ಭೂಮಿಯಿಂದ ಓಡಿಸಬೇಕು ನಮ್ಮ ಭಾರತ ಮಾತೆಯನ್ನು ಅವರಿಂದ ಬಿಡುಗಡೆಗೊಳಿಸಿಕೊಳ್ಳಬೇಕೆಂಬ ಕಠೋರವಾದ ನಿರ್ಧಾರಗಳು ಪ್ರತಿಯೊಬ್ಬ ಭಾರತೀಯ ವೀರರಲ್ಲಿ ಹುಟ್ಟತೊಡಗಿದವು.

ಅಂತೆಯೇ ಅಂತಹ ಕಠೋರ ನಿರ್ಧಾರಗಳಿಗೆ ಅಣಿಯಾಗಿ ಬ್ರಿಟಿಷರ ವಿರುದ್ಧ ಹಲವಾರು ದಂಗೆಗಳು ಜರುಗಿದವು ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿಸಲು ಹಲವಾರು ಚಳುವಳಿಗಳು ಕೂಡ ನಡೆದವು. ಹೀಗೆ ದಂಗೆಗಳು ಚಳುವಳಿಗಳನ್ನು ಹಮ್ಮಿಕೊಂಡು ಬ್ರಿಟಿಷರ ಎದುರಿಗೆ ಎದೆಗೊಟ್ಟು ನಿಂತು ಹೋರಾಡಿದ ಕ್ಷಣಗಳೇ ಸ್ವಾತಂತ್ರ್ಯ ದಂಗೆಗಳು.

ಹನುಮಂತ ದಾಸರ ಹೊರಗನಾಳ

ಈ ಸ್ವಾತಂತ್ರ್ಯ ದಂಗೆಗಳ ಮೂಲಕ ಭಾರತೀಯ ವೀರನಾಯಕರ ಧೈರ್ಯ ಶೌರ್ಯ ಹೊತ್ತ ತೀವ್ರಗಾಮಿಗಳ ಮತ್ತು ಶಾಂತಿ ಸಮ್ಮತಿ ಭಾವನೆಯ ಮಂದಗಾಮಿಗಳ ಆತ್ಮಾಭಿಮಾನ ಮತ್ತು ದೇಶಭಕ್ತಿಗಾಗಿ ರಕ್ತವನ್ನೇ ಚೆಲ್ಲಲು ಸಿದ್ಧವಾಗಿರುವ ಭಾರತೀಯ ಮಹಾನ್ ನಾಯಕರರ ಹೋರಾಟಗಳನ್ನು ಅರಿತ ಬ್ರಿಟಿಷರು ಕೊನೆಗೆ ” ಭಾರತವನ್ನು ಬಿಟ್ಟು ತೊಲಗಿ ” ಎಂಬ ಕಠೋರ ವಾಕ್ಯದಂತೆ ರಾತ್ರೋರಾತ್ರಿ ಬ್ರಿಟಿಷರು ಭಾರತ ಬಿಟ್ಟು ಹೊರಡುವ ಮೂಲಕ ಮಧ್ಯೆ ರಾತ್ರಿ ಭಾರತೀಯರಿಗೆ ಸ್ವಾತಂತ್ರ್ಯ ದೊರಕುವಂತಾಯಿತು.

ಆದರೇ ಅಷ್ಟೊತ್ತಿಗಾಗಲೇ ಭಾರತದ ಪ್ರಮುಖ ಸಂಪತ್ತನ್ನು ದೋಚಿ ನಡೆಯುವುದಷ್ಟೇ ಅಲ್ಲದೇ ಅವರು ಶಿಕ್ಷಣಕ್ಕೆ ಸಂಬಂಧಿಸಿದ ಹೊಸ ನೀತಿ ನಿಯಮಗಳನ್ನು ಜಾರಿಗೊಳಿಸಿದ್ದು , ಇಂಗ್ಲಿಷ್ ಶಿಕ್ಷಣವನ್ನು ಹುಟ್ಟುಹಾಕಿದ್ದು ಬ್ರಿಟಿಷರು ಭಾರತಕ್ಕೆ ಕೊಟ್ಟ ಕೊಡುಗೆಯಾಗಿವೆ ಎಂಬುದಕ್ಕೆ ಅವರ ವಾಸ್ತುಶಿಲ್ಪದ ಕಟ್ಟಡಗಳೇ ಕಾರಣ.

ಹೀಗೆ ಮುಂದುವರೆದ ಭಾರತ ವೀರ ನಾಯಕರ ತ್ಯಾಗ ಬಲಿದಾನಗಳಿಂದ, ದಂಗೆ ಚಳುವಳಿ ಹೋರಾಟಗಳಿಗೆ ಫಲ ದೊರೆಯುವಂತೆ 15 ಆಗಸ್ಟ್ 1947ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು, ದೇಶದ ತುಂಬೆಲ್ಲಾ ಸ್ವಾತಂತ್ರ್ಯ ಜಯಕಾರಗಳ ಕಹಳೆ ಮೊಳಗತೊಡಗಿದವು, ಮನೆ ಮನೆಯಲ್ಲಿ ಮನ ಮನದಲ್ಲಿ ಮಹೋತ್ಸವಗಳು ಮೊಳಗಿದವು, ಎಲ್ಲೆಡೆಯಲ್ಲಿ ಜಯಕಾರಗಳ ಕೂಗು ಮುಗಿಲಿಗೆ ಮುಟ್ಟುವಂತಿತ್ತು.

ಮುಂದೆ 9 ಡಿಸೇಂಬರ್ 1947 ರಿಂದ 26 ನವೆಂಬರ್ 1949 ರವರೆಗೆ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು 26 ಜನೆವರಿ 1950 ರಂದು ಅಂಗೀಕರಿಸಲ್ಪಡುತ್ತದೆ. ಅದೇ ದಿನವನ್ನು ಪ್ರತೀ ವರ್ಷ ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ.
ಭಾರತ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ಬದುಕನ್ನು ಕಟ್ಟಿಕೊಳ್ಳಲು ಸರ್ಕಾರವನ್ನು ರಚನೆ ಮಾಡುತ್ತದೆ.

ಸ್ವಾತಂತ್ರ್ಯ ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರಪ್ರಸಾದ್(1950-1962) ಹಾಗೂ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು( 15 ಆಗಸ್ಟ್ 1947 – 27 ಮೇ 1964) ರವರ ಅಧಿಕಾರ ಮತ್ತು ಆಡಳಿತದ ದಿನದಿಂದ ಇಂದಿಗೆ ಸ್ವಾತಂತ್ರ್ಯ ಭಾರತಕ್ಕೆ 75 ವರ್ಷ ತುಂಬುತಲಿದೆ. ಈ ಸಂಭ್ರಮವು ಪ್ರಸ್ತುತ ಹಾಗೂ ವಿಶೇಷ ಬುಡಕಟ್ಟು ಜನಾಂಗದಿಂದ ರಾಷ್ಟ್ರಪತಿ ಹುದ್ದೆಗೇರಿದ ಶ್ರೀಮತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತಧಿಕಾರದಲ್ಲಿ ಸ್ವಾತಂತ್ರ್ಯತ್ಸವದ ” ಅಜಾದಿ ಕಾ ಅಮೃತ್ ಮಹೋತ್ಸವ ” ಎಂಬ ಶೀರ್ಷಿಕೆಯಡಿಯಲ್ಲಿ ಸ್ವಾತಂತ್ರ್ಯತ್ಸವವನ್ನು ಆಚರಣೆ ಮಾಡಲು ಶ್ರೀ ನರೇಂದ್ರ ಮೋದಿ ಅವರು ಕರೆ ನೀಡಿರುವುದು ತುಂಬಾ ಸಂತೋಷದ ಸಂಗತಿ.

ಹಾಗೆಯೇ ಭಾರತಕ್ಕೆ ಅಸಾಧ್ಯವೆನಿಸಿದ್ದ ಪ್ರತಿಯೊಂದು ಕ್ಷಣಗಳನ್ನೊಮ್ಮೆ ತಿರುಗಿ ನೋಡಿದಾಗ ನಮಗೆ ನಮ್ಮ ಮೇಲೆ ತುಂಬಾ ಸಂತೋಷ ಉಂಟಾಗುವಂತಾಗಿದೆ. ಇಂದು ಇಡೀ ವಿಶ್ವವೇ ನಮ್ಮನ್ನು ತಲೆ ಎತ್ತಿ ನೋಡುವಂತಹ ಸಮಯ ನಮ್ಮದಾಗಿದೆ. ಅಷ್ಟೇ ಅಲ್ಲದೇ ಈ 75ನೇ ಸ್ವಾತಂತ್ರತ್ಯೋತ್ಸವ ಆಚರಣೆ ಮುಂದಿನ 25 ವರ್ಷಗಳ ಅಂದರೆ ಮುಂದಿನ ಶತಮಾನಕ್ಕೆ (100 ವರ್ಷಗಳು )ಪೂರಕವಾಗುವಂತಿರಬೇಕು.

ಈ ಅಜಾದಿ ಕಾ ಅಮೃತ ಮಹೋತ್ಸವವು ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತು ದೇಶದ ಏಕತೆಗಾಗಿ ದುಡಿದ ವೀರ ನಾಯಕರಿಗೆ, ದೇಶವನ್ನು ವಿಶ್ವ ಮಟ್ಟಕ್ಕೆ ಪರಿಚಯಿಸುತ್ತಿರುವ ಪ್ರತಿಯೊಂದು ಕ್ಷೇತ್ರದ ಮಾಹಾನ್ ಸಾಧಕರಿಗೆ ಗೌರವ ಸಲ್ಲಬೇಕಿದೆ ಮತ್ತು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾನ್ ನಾಯಕರುಗಳ ಕನಸನ್ನು ನನಸು ಮಾಡುವಲ್ಲಿ ನಾವು ನಿರತರಾಗಬೇಕಿದೆ ಹಾಗೂ ಈ ಅಮೃತ ಮಹೋತ್ಸವವೂ ಕೂಡ ಅವರ ಉಸಿರಿಗೆ ಸಲ್ಲಬೇಕಿದೆ.

ದೇಶದ ಹುತಾತ್ಮರಿಗೆ ಹಾಗೂ ಹೋರಾಟಗಾರರಿಗೆ ಅವರ ಕನಸಿನ ಭಾರತದ ಕನಸನ್ನು ನಾವು ನನಸು ಮಾಡುವಲ್ಲಿ ಮುಂದೆ ಸಾಗಬೇಕಿದೆ ಮತ್ತು 2047 ರ ಸ್ವಾತಂತ್ರತ್ಯೋತ್ಸವ ಹಬ್ಬವನ್ನು ಆಚರಿಸುವ ಹೊತ್ತಿಗೆ ಭಾರತವನ್ನು ಮತ್ತಷ್ಟು ಎತ್ತರದ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಿದೆ, ವಿಶ್ವಕ್ಕೆ ಭಾರತದ ಪ್ರತಿಷ್ಠೆಯನ್ನು ತೋರಿಸಬೇಕಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರ, ಹೋರಾಟಕ್ಕೆ ಸಾಕ್ಷಿಯಾದವರನ್ನು ಮತ್ತು ಹೋರಾಟದಲ್ಲಿ ಭಾಗಿಯಾದವರನ್ನು ಗುರುತಿಸದೇ ಇರುವಂತಹ ಮಹಾನ್ ವ್ಯಕ್ತಿಗಳನ್ನು ಹಾಗೂ ರಾಷ್ಟ್ರ ಸಮಾಜಕ್ಕಾಗಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಈ ಅಮೃತ ಮಹೋತ್ಸವಕ್ಕೆ ಸ್ಫೂರ್ತಿಯಾಗಬೇಕಿದೆ. ಹಾಗೂ ವಿಶೇಷವಾಗಿ ಸ್ವಾತಂತ್ರ್ಯತ್ಸವದ ದಿನದಂದು ಜನಿಸಿ ಗಣರಾಜ್ಯೋತ್ಸವ ದಿನದಂದು ಬ್ರಿಟಿಷರಿಂದ ಗಲ್ಲಿಗೆ ಶರಣಾದ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾದ ವೀರಯೋಧ ಸಂಗೊಳ್ಳಿ ರಾಯಣ್ಣನನ್ನು ಸ್ಮರಿಸಬೇಕಿದೆ.

ರಾಷ್ಟ್ರ ನಿರ್ಮಾಣಕ್ಕಾಗಿ ಅವಶ್ಯವಾಗಿ ಬೇಕಾಗಿರುವ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯ ಹಾಗೂ ವಿಭಿನ್ನ ಅಭಿರುದ್ಧಿಪರ ಯೋಜನೆಗಳನ್ನು ಜಾರಿಗೆಗೊಳಿಸುವ ಮೂಲಕ ಜಾತಿ ವ್ಯವಸ್ಥೆ, ಧರ್ಮ ವ್ಯವಸ್ಥೆ, ಲಿಂಗ ತಾರತಮ್ಯ, ಅಸಮಾನತೆ, ನಿರುದ್ಯೋಗ, ಮಹಿಳಾ ದೌರ್ಜನ್ಯ ಹೀಗೆ ಮುಂತಾದ ರಾಷ್ಟ್ರ ಪ್ರಗತಿಗೆ ಮುಳ್ಳಾದ ಸಮಸ್ಯೆಗಳನ್ನು ಬೇರು ಸಮೇತ ಕಿತ್ತು ಒಗೆಯುವಂತಹ ಪರಿಹಾರಗಳನ್ನು ರೂಪಿಸಬೇಕು ಜೊತೆಗೆ ಸಂವಿಧಾನವನ್ನು ಗೌರವಿಸಿ ಸಂವಿಧಾನದ ಪ್ರತಿಯೊಂದು ಆಶಯಕ್ಕೆ ಬದ್ಧರಾಗಬೇಕು, ಒಳ್ಳೆಯ ವಿಚಾರಗಳನ್ನು ಯುವಕರ ಮನದಲ್ಲಿ ಬಿತ್ತುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಯುವಕರಲ್ಲಿ ಉತ್ತೇಜನ ತುಂಬುವತಾಗಬೇಕು, ರಾಷ್ಟ್ರ ನಿರ್ಮಾಣಕ್ಕೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಮಹಾನ್ ನಾಯಕರ ಕನಸಿನ ಭಾರತಕ್ಕೆ ಅವರಿವರೆನ್ನದೆ ನಾವೆಲ್ಲರೂ ಕೈ ಜೋಡಿಸಿ ವಿಶ್ವವೇ ಭಾರತದತ್ತ ತಲೆಎತ್ತಿ ನೋಡುವಂತಹ ಕಾರ್ಯ ಮಾಡಬೇಕಿದೆ ಹಾಗೂ ಈ 75ನೇ ಸ್ವಾತಂತ್ರ್ಯತ್ಸವದ ಅಮೃತ ಮಹೋತ್ಸವ ದಿನದಿಂದಲೇ 100 ವರ್ಷದ ಸ್ವಾತಂತ್ರ್ಯತ್ಸವದ ಸಂಭ್ರಮಕ್ಕಾಗಿ ನಾವು ಮತ್ತಷ್ಟು ಈಗಿಂದಲೇ ರೂಪುರೇಷಗಳನ್ನು ಹಾಕಿಕೊಳ್ಳಬೇಕಿದೆ ಆಗಲೇ ಭಾರತಕ್ಕೆ ಅಸಾಧ್ಯವೆಂಬುದು ಯಾವ ಪದವೂ ಇಲ್ಲ ಎಂದು ಇಡೀ ವಿಶ್ವಕ್ಕೆ ತೋರಿಸಲು ಸಾಧ್ಯವಾಗುತ್ತದೆ.

(ಲೇಖಕರು : ಹನುಮಂತ ದಾಸರ ಹೊಗರನಾಳ.
ಮೊ : 9945246234)

ದಿನದ ಸುದ್ದಿ

ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!

Published

on

ರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ದೈನಂದಿನ ಜೀವನದಲ್ಲಿ ತೆಂಗಿನ ಎಣ್ಣೆ ಉಪಯೋಗಿಸಿ ಅದರ ಪ್ರಯೋಜನಗಳನ್ನು ಪಡೆಯಿರಿ :

ತೆಂಗಿನೆಣ್ಣೆಯಲ್ಲಿ ಲಾರಿಕ್ ಆಮ್ಲದಂಶವನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯ ಬಳಕೆಯಿಂದ ಶಕ್ತಿ ದೊರಕುತ್ತದೆ ಮತ್ತು ತೂಕ ನಿರ್ವಹಣೆಯಲೂ ಸಹಾಯಮಾಡುತ್ತದೆ.

ಹೃದಯದ ಆರೋಗ್ಯ: ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ HDL (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಲಿಪಿಡ್ ಆರೋಗ್ಯವನ್ನು ಸುಧಾರಿಸಬಹುದು ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕಾರಿ ಆರೋಗ್ಯ: ತೆಂಗಿನ ಎಣ್ಣೆಯು ಕೊಬ್ಬು-ಕರಗಬಲ್ಲ ಜೀವಸತ್ವಗಳು ಮತ್ತು ಖನಿಜಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಇರಿಟಬಲ್ ಬೋವೆಲ್ ಸಿಂಡ್ರೋಮ್ (IBS) ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉರಿಯೂತದ ಗುಣಲಕ್ಷಣಗಳು: ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲ ರಕ್ಷಣೆ: ತೆಂಗಿನೆಣ್ಣೆ ತಿನ್ನುವುದರಿಂದ ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಗತ್ಯವಾದ ಪೋಷಕಾಂಶಗಳು ಮತ್ತು ತೇವಾಂಶವನ್ನು ಒದಗಿಸುತ್ತದೆ. ತೆಂಗಿನ ಎಣ್ಣೆಯು ನಿಮ್ಮ ಕೂದಲಿಗೆ ಆಳವಾಗಿ ತೂರಿಕೊಂಡು, ಒಳಗಿನಿಂದ ಅವುಗಳನ್ನು ಪೋಷಿಸುತ್ತದೆ ಮತ್ತು ಆರೋಗ್ಯವನ್ನು ಹೊರಸೂಸುವ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆಯ ಪೋಷಕಾಂಶಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಅದೇ ಸಮಯದಲ್ಲಿ ಕೂದಲು ಒಡೆಯುವಿಕೆ ಮತ್ತು ವಿಭಜಿತ ತುದಿಗಳನ್ನು ತಡೆಯುತ್ತದೆ.

ರೋಗನಿರೋಧಕ ಬೆಂಬಲ: ತೆಂಗಿನೆಣ್ಣೆಯು ಲಾರಿಕ್ ಆಮ್ಲ ಮತ್ತು ಕ್ಯಾಪ್ರಿಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ದೇಹವು ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಿರ್ವಹಣೆ: ತೆಂಗಿನ ಎಣ್ಣೆಯು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸಮತೋಲಿತ ಆಹಾರದಲ್ಲಿ ಬಳಸಿದಾಗ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು: ತೆಂಗಿನಕಾಯಿಯಲ್ಲಿ ಲಾರಿಕ್ ಆಮ್ಲವಿದೆ ಆದ್ದರಿಂದ ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ನಿಮ್ಮ ಅಡಿಗೆ ಮನೆಯ ಸಂಗಾತಿಯಾಗಲಿ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending