ದಿನದ ಸುದ್ದಿ
ಭಾರತದ ಕೊರೋನಾ ಮರಣ ಪ್ರಮಾಣ ವಿಶ್ವದಲ್ಲಿಯೇ ಅತಿ ಕಡಿಮೆ..!
ಸುದ್ದಿದಿನ ಡೆಸ್ಕ್ : ಭಾರತದ ಕೊರೋನಾ ಮರಣ ಪ್ರಮಾಣ ವಿಶ್ವದಲ್ಲಿಯೇ ಅತಿ ಕಡಿಮೆ ಇದ್ದು, ಶೇ.1.58ರಷ್ಟಿದೆ. ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳು ಕೇವಲ ಶೇ 22.2ರಷ್ಟು ಮಾತ್ರ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಚೇತರಿಸಿಕೊಂಡ ಪ್ರಕರಣಗಳು ಸಕ್ರಿಯ ಪ್ರಕರಣಗಳಿಗಿಂತ 3.4 ಪಟ್ಟು ಹೆಚ್ಚಾಗಿದೆ ಮತ್ತು ಚೇತರಿಕೆ ಪ್ರಮಾಣವು ಶೇ 75 ಕ್ಕಿಂತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243