ದಿನದ ಸುದ್ದಿ

ಭಾರತ | ಕೋವಿಡ್ ಲಸಿಕೆ ನೀಡಿಕೆ ಪ್ರಮಾಣ ; ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಹೆಚ್ಚು : ಸಚಿವ ಪಿಯೂಶ್ ಗೋಯಲ್

Published

on

ಸುದ್ದಿದಿನ ಡೆಸ್ಕ್: ಭಾರತದಲ್ಲಿ ಕೋವಿಡ್ ಲಸಿಕೆ ನೀಡಿಕೆ ಪ್ರಮಾಣ ಜಗತ್ತಿನ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಹೆಚ್ಚಾಗಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

ಮುಂಬೈನಲ್ಲಿ ಭಾನುವಾರ ನೇಷನ್ ಟು ಪ್ರೊಟೆಕ್ಟ್ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಇದೊಂದು ಹೆಮ್ಮೆಯ ವಿಷಯವಾಗಿದೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದರು.

ವಿಶ್ವ ಆರೋಗ್ಯ ಸಂಘಟನೆಯ ವಿಧಾನ ; ಭಾರತ ಆಕ್ಷೇಪ

ಕೋವಿಡ್-19 ಮರಣಗಳಿಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಘಟನೆಯ ವಿಧಾನದ ಬಗ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ.

ಅಮೆರಿಕಾದ ದೈನಿಕವೊಂದು ಭಾರತದಲ್ಲಿನ ಕೋವಿಡ್ ಮರಣ ಕುರಿತು ಪ್ರಕಟಿಸಿರುವ ವರದಿ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟೀಕರಣ ನೀಡಿದೆ.

ಭಾರತ ನಿರಂತರವಾಗಿ ತನ್ನ ಆಳವಾದ ಮಾಹಿತಿ ವಿನಿಮಯ ವ್ಯವಸ್ಥೆಯ ಮೂಲಕ ಸಂಗ್ರಹಿಸಿದ ವಿವರಗಳನ್ನು ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಹಂಚುಕೊಳ್ಳುತ್ತಿದೆ ಎಂದು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version