ದಿನದ ಸುದ್ದಿ
ಭಾರತ | ಕಳೆದ 24 ಗಂಟೆಗಳಲ್ಲಿ 3,980 ಜನರು ಕೊರೋನಾದಿಂದ ಸಾವು

ಸುದ್ದಿದಿನ, ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,980 ಜನರು ಕೊರೋನಾದಿಂದ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,12,262 ಮಂದಿ ಮಾರಣಾಂತಿಕ ಸೋಂಕಿಗೆ ತುತ್ತಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳನ್ನು ತಿಳಿಸಿದೆ.
ಭಾರತದ ಕೋವಿಡ್ -19 ಸಾವಿನ ಸಂಖ್ಯೆ ಈಗ 2.30 ಲಕ್ಷಕ್ಕೂ ಹೆಚ್ಚಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 2,10,77,410 ಕ್ಕೆ ಏರಿದೆ.
ಇದನ್ನೂ ಓದಿ | ಮೊಡವೆಗಳು : ವಿಧಗಳು, ಚಿಕಿತ್ಸೆ ಮತ್ತು ತಡೆಗಟ್ಟುವಿಕೆ
ಗುರುವಾರ ಬೆಳಿಗ್ಗೆ 8 ಗಂಟೆಗೆ ಇಲಾಖೆ ವೆಬ್ಸೈಟ್ ನಲ್ಲಿ ನವೀಕರಿಸಿದ ಮಾಹಿತಿಯ ಪ್ರಕಾರ, ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳ ಶೇಕಡಾ 16.87 ರಷ್ಟನ್ನು ಒಳಗೊಂಡಂತೆ 35,66,398 ಕ್ಕೆ ಏರಿದೆ, ಆದರೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು ಶೇಕಡಾ 82.03 ಕ್ಕೆ ದಾಖಲಾಗಿದೆ.
ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,72,80,844 ಕ್ಕೆ ಏರಿದರೆ, ಪ್ರಕರಣದ ಸಾವಿನ ಪ್ರಮಾಣ ಇನ್ನೂ ಶೇಕಡಾ 1.09 ಕ್ಕೆ ಇಳಿದಿದೆ.
India reports 4,12,262 new #COVID19 cases, 3,29,113 discharges and 3,980 deaths in the last 24 hours, as per Union Health Ministry
Total cases: 2,10,77,410
Total recoveries: 1,72,80,844
Death toll: 23,01,68
Active cases: 35,66,398Total vaccination: 16,25,13,339 pic.twitter.com/W1kQnSucGe
— ANI (@ANI) May 6, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ