ದಿನದ ಸುದ್ದಿ
ಮೇ 17 ರ ವರೆಗೆ ಲಾಕ್ ಡೌನ್ ವಿಸ್ತರಣೆ : ಏನಿರುತ್ತೆ..? ಏನಿರಲ್ಲ..?
ಸುದ್ದಿದಿನ,ನವದೆಹಲಿ : ಕೋವಿಡ್ – 19 ಅಟ್ಟಹಾಸ ಹಿನ್ನೆಲೆ ಭಾರತದಾದ್ಯಂತ ಲಾಕ್‌ಡೌನ್‌ಅನ್ನು ಮೇ.4ರಿಂದ 17ರ ವರೆಗೆ (ಮತ್ತೆರಡು ವಾರ) ವಿಸ್ತರಣೆ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶವನ್ನು ಶುಕ್ರವಾರ ಹೊರಡಿಸಿದೆ.
ಕೇಂದ್ರ ಗೃಹ ಸಚಿವಾಲಯವು ಕೊರೋನಾ ಲಾಕ್ ಡೌನ್ ಅನ್ನು ವಿಸ್ತರಿಸಿದ್ದು ಆರೆಂಜ್ ಮತ್ತು ಗ್ರೀನ್ ಝೋನ್ ಗಳಾಗಿ ವಿಂಗಡಿಸಿದೆ. ಈ ಝೋನ್ ಗಳಲ್ಲಿ ಸಡಿಲಿಕೆಗಳನ್ನು ನೀಡಿದ್ದು ರೆಡ್ ಜೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮಾರ್ಗಸೂಚಿ ಆದೇಶವು ಮುಂದುವರೆಯಲಿದೆ ಎಂದು ಹೇಳಿದೆ.
ಚಟುವಟಿಕೆಗಳ ನಿಯಂತ್ರಣಕ್ಕೆ ‘ಎಂಹೆಚ್‌ಎ’ಯು ನೀಡಿರುವ ಹೊಸ ಮಾರ್ಗಸೂಚಿಗಳು
- ಸಾರಿಗೆ ಸಂಚಾರಕ್ಕೆ ಸಂಪೂರ್ಣ ನಿರ್ಬಂಧವಿದೆ. ವಿಮಾನ, ರೈಲುಗಳ ಸಂಚಾರವೂ ಇರುವುದಿಲ್ಲ. ಗ್ರೀನ್ ಝೋನ್ ವಲಯದಲ್ಲಿ ಈಗಾಗಲೇ ಘೋಷಿಸಲಾಗಿರುವ ವಿನಾಯಿತಿಗಳು ಮುಂದುವರಿಯುತ್ತವೆ.
- ಶಾಲಾ-ಕಾಲೇಜುಗಳಿಗೆ ಎಂದಿನಂತೆ ಲಾಕ್ ಡೌನ್ ಮುಗಿಯುವವರೆಗೂ ರಜೆಯನ್ನು ಘೋಷಿಸಲಾಗಿದೆ.
- ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ ಮೊದಲಾದವುಗಳ ಮಾರಾಟಕ್ಕೆ ಅಡೆತಡೆ ಇರುವುದಿಲ್ಲ.
- ಮಕ್ಕಳು ಮತ್ತು ವಯೋವೃದ್ಧರು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಉಳಿದವರು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಹೊರ ಬರಬಹುದು.
- ಎಲ್ಲಾ ಆಸ್ಪತ್ರೆಯ ಒಪಿಡಿಗಳನ್ನು ತೆರೆಯಲು ಸೂಚಿಸಲಾಗಿದೆ.
- ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶವಿದೆ. ಬೈಕಿನಲ್ಲಿ ಒಬ್ಬರು ಮಾತ್ರ ಸಂಚಾರ ಮಾಡಬಹುದಾಗಿದೆ. ಆರೆಂಜ್ ಝೋನ್ ನಲ್ಲಿ ಕ್ಯಾಬ್ ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
- ಗ್ರೀನ್ ಝೋನ್ ನಲ್ಲಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಶೇಕಡಾ 50 ಸೀಟುಗಳನ್ನು ಮಾತ್ರ ಭರ್ತಿ ಮಾಡಬಹುದಾಗಿದೆ.
- ಮೂರೂ ವಲಯಗಳಲ್ಲಿ ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಮಾತ್ರ ಅವಕಾಶವಿದ್ದು, ಪಬ್ ಕ್ಲಬ್, ಚಿತ್ರಮಂದಿರ, ಮಾಲ್ ಗಳನ್ನು ತೆರೆಯುವುದಕ್ಕೆ ನಿರ್ಬಂಧ.
ಸುದ್ದಿದಿನ.ಕಾಂ|ವಾಟ್ಸಾಪ್|9980346243