ದಿನದ ಸುದ್ದಿ

25 ವರ್ಷಗಳಲ್ಲಿ ಭಾರತ 20 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದೆ : ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಂದಿನ 25 ವರ್ಷಗಳಲ್ಲಿ ಭಾರತ 20 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ದೇಶವಾಗಲಿದೆ ಎಂದು ಪ್ರಧಾನಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿ ಅಂದಾಜು ಮಾಡಿದೆ.

ದೇಶ 7 ರಿಂದ 7.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ತಿಳಿಸಿದೆ. ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್ ದೆಬ್ರಾಯ್ ಮಾತನಾಡಿ 2047ರ ವೇಳೆಗೆ ಭಾರತ ಮೇಲ್ಮಟ್ಟದ ಮಧ್ಯಮ ಆರ್ಥಿಕ ವಲಯದ ದೇಶವಾಗಲಿದೆ. 10 ಸಾವಿರ ಡಾಲರ್ ವಾರ್ಷಿಕ ತಲಾದಾಯ ಹೊಂದಲಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಭಾರತ, ವಿಶ್ವದ 6ನೇ ಅತಿ ದೊಡ್ಡ ಆರ್ಥಿಕ ಬೆಳವಣಿಗೆ ಸಾಧಿಸುತ್ತಿರುವ ದೇಶವಾಗಿದ್ದು, ಜಿಡಿಪಿಗೆ 2.7 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಮೂಲಕ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version