ಕ್ರೀಡೆ
ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಏಕದಿನ ಪಂದ್ಯ ಗೆದ್ದು , 3-0 ಯಿಂದ ಸರಣಿ ಕೈವಶ ಮಾಡಿಕೊಂಡ ಭಾರತ

ಸುದ್ದಿದಿನ ಡೆಸ್ಕ್ : ಫೋರ್ಟ್ ಆಫ್ ಸ್ಪೇನ್ ನಲ್ಲಿ ತಡರಾತ್ರಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ, 119 ರನ್ ಗಳಿಂದ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಸುಲಭ ಜಯ ಸಾಧಿಸಿದೆ.
ಇದರೊಂದಿಗೆ ಭಾರತ 3-0 ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ, 24 ಓವರ್ ಗಳಲ್ಲಿ 1ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದಾಗ ಮಳೆ ಆಟಕ್ಕೆ ಅಡ್ಡಿಪಡಿಸಿತು.
ನಂತರ ಪಂದ್ಯ ಮುಂದುವರೆದಾಗ ನಿಗದಿತ ಓವರ್‌ಗಳ ಸಂಖ್ಯೆಯನ್ನು 40ಕ್ಕೆ ಕಡಿತಗೊಳಿಸಲಾಯಿತು. ಆದರೆ, ಭಾರತ 36 ಓವರ್ ಗಳಲ್ಲಿ 3ವಿಕೆಟ್ ನಷ್ಟಕ್ಕೆ 225 ರನ್‌ಗಳಿಸಿದಾಗ 2ನೇ ಬಾರಿಗೆ ಮಳೆ ಆಟಕ್ಕೆ ಅಡ್ಡಿಯುಂಟು ಮಾಡಿತು. ಭಾರತ ಪರ ಆರಂಭಿಕ ಶುಭ್ ಮನ್ ಗಿಲ್ ಅಜೇಯ 98 ಹಾಗೂ ನಾಯಕ ಶಿಖರ್ ಧವನ್ 58ರನ್‌ಗಳಿಸಿದರು.
ಬಳಿಕ ವೆಸ್ಟ್ ಇಂಡೀಸ್ ತಂಡಕ್ಕೆ ಡಕ್ ವರ್ಥ್ ಲೂಯಿಸ್ ನಿಯಮದಡಿ 35 ಓವರ್‌ಗಳಲ್ಲಿ 257 ರನ್‌ಗಳ ಗುರಿ ನೀಡಲಾಯಿತು. ಆದರೆ, ಆತಿಥೇಯರು 26 ಓವರ್‌ಗಳಲ್ಲಿ ಕೇವಲ 137 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಭಾರತಕ್ಕೆ ನಿರಾಯಾಸ ಗೆಲುವು ದೊರೆಯಿತು. ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಯಜುವೇಂದ್ರ ಚಹಾಲ್ 4 ಹಾಗೂ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಲಾ 2, ಅಕ್ಷರ್ ಪಟೇಲ್ ಮತ್ತು ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ಪಡೆದರು.
𝗧𝗵𝗮𝘁 𝗪𝗶𝗻𝗻𝗶𝗻𝗴 𝗙𝗲𝗲𝗹𝗶𝗻𝗴! 🏆
Congratulations #TeamIndia on winning the #WIvIND ODI series! 👏 👏
Over to T20Is now! 👍 👍 pic.twitter.com/kpMx015pG1
— BCCI (@BCCI) July 27, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೇಸಿಗೆ ವಾಲಿಬಾಲ್ ತರಬೇತಿ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.
ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ