ದಿನದ ಸುದ್ದಿ

ಚೀನಾ ಪಡೆ ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿ : ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಅರುಣಾಚಲಪ್ರದೇಶದ ತವಾಂಗ್ ವಲಯದಲ್ಲಿ ಭಾರತ ಮತ್ತು ಚೀನಾ ಸೇನಾಪಡೆಗಳ ನಡುವೆ ಮುಖಾಮುಖಿ ಘರ್ಷಣೆಯಲ್ಲಿ ಯಾವುದೇ ಭಾರತೀಯ ಸೈನಿಕರಿಗೆ ಗಂಭೀರ ಸ್ವರೂಪದ ಗಾಯಗಳು ಅಥವಾ ಸಾವು-ನೋವು ಸಂಭವಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿಂದು ಈ ಕುರಿತು ಹೇಳಿಕೆ ನೀಡಿದ ಅವರು, ವಾಸ್ತವ ಗಡಿ ನಿಯಂತ್ರಣ ರೇಖೆಯ ಬಳಿ ಚೀನಾದ ಸೇನಾಪಡೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು, ಸದ್ಯ ಯತಾಸ್ಥಿತಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಚೀನಾ ಆಗಾಗ ತನ್ನ ಸೇನಾ ಪಡೆಗಳನ್ನು ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನ ಮಾಡುತ್ತಿದೆ ಅದಕ್ಕೆ ಭಾರತೀಯ ಸೇನೆ ಅವಕಾಶ ಮಾಡುಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರಂದು ನಡೆದ ಘರ್ಷಣೆಗೆ ಸಂಬಂಧಿಸಿದಂತೆ ನಿನ್ನೆ 2 ಕಡೆಯ ಸೇನೆಯ ಕಮಾಂಡರ್ ಮಟ್ಟದಲ್ಲಿ ಧ್ವಜಸಭೆ ನಡೆದಿದು, ಈ ಸಭೆಯಲ್ಲಿ ಚೀನಾ ತನ್ನ ಅತಿಕ್ರಮಣವನ್ನು ತಳ್ಳಿಹಾಕಿದೆ. ರಾಜತಾಂತ್ರಿಕತೆ ಮೂಲಕ ಗಡಿಸಂಸ್ಥೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮುಂದುವರೆಯಲಿದೆ ಎಂದು ತಿಳಿಸಿದರು. ಈ ನಡುವೆ ಸಚಿವರ ಉತ್ತರದಿಂದ ತೃಪ್ತರಾಗದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದರು.

ರಾಜ್ಯಸಭೆಯಲ್ಲೂ ಕೂಡ ಸಚಿವ ರಾಜನಾಥ್ ಸಿಂಗ್ ಇದೇ ಉತ್ತರವನ್ನು ನೀಡಿದರು. ಪ್ರತಿಪಕ್ಷಗಳ ಸದಸ್ಯರು ಉತ್ತರದ ಮೇಲೆ ಕೆಲವು ಸ್ಪಷ್ಟನೆಗಳನ್ನು ಕೇಳಲು ಮುಂದಾದರೂ ಸಭಾಪತಿ ಪೀಠದಲ್ಲಿದ್ದ ಉಪಸಭಾಪತಿ ಹರಿವಂಶ್ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆಗ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಎಡಪಕ್ಷಗಳು ಸೇರಿದಂತೆ ವಿವಿಧ ಪಕ್ಷಗಳು ಸಭಾತ್ಯಾಗ ಮಾಡಿದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version