ದಿನದ ಸುದ್ದಿ
ಸಂವಿಧಾನದ ತಿದ್ದುಪಡಿಗಳು
ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದಸ್ಥಿತಿಗತಿಗಳನ್ನುಗಮನದಲ್ಲಿರಿಸಿಕೊಂಡುಸಂವಿಧಾನ ವನ್ನು ರಚಿಸಲಾಯಿತು. ಬದಲಾಗುತಿರುವಕಾಲಮಾನಹೊಸ ಪರಿಸ್ಥಿತಿ,ಸ್ಥಿತಿಗತಿ ಹಾಗೂಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತೆರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ ಪ್ರಗತಿಹಾಗೂ ನ್ಯಾಯ ಪರವಾಗಿರುವ ತತ್ವಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು.
ಸಂವಿಧಾನ ತಿದ್ದುಪಡಿ ಮಾಡುವ ಬಗ್ಗೆ
ಪಂಡಿತ್ ಜವಾಹರಲಾಲ್ ನೆಹರೂ ಅವರ
ಅಭಿಪ್ರಾಯ ಹೀಗಿದೆ:
“ಅತ್ಯಂತ ಕಠಿಣವಾದ ಮತ್ತು ಸ್ಥಿರ ವಾದ
ಏನನ್ನಾದರೂ ಮಾಡಲು ಪ್ರಯತ್ನಿಸಿದರೆ ಅದು
ದೇಶದ ಪ್ರಗತಿಯನ್ನು ಮತ್ತು ಸಮಾಜದ ಅಭಿವೃದ್ಧಿ ಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಸಂವಿಧಾನವನ್ನು ಅತಿ ಕಠಿಣವಾಗಿ ರೂಪಿಸಲು ಸಾಧ್ಯವಿಲ್ಲ! ತೀವ್ರಗತಿಯಲ್ಲಿ ಬದಲಾಗುತ್ತಿರುವ ಪ್ರಪಂಚದಲ್ಲಿಇಂದು ಪ್ರಸ್ತುತವೆನಿಸುವುದು ನಾಳೆ ಆಪ್ರಸ್ತುತವೆನಿಸು ತ್ತದೆ. ಸಂವಿಧಾನದಲ್ಲಿ ತಿದ್ದುಪಡಿಗೆ ಅವಕಾಶ ನೀಡುವುದು ಎಂದರೆ ಕಾಲಕಾಲಕ್ಕೆಬದಲಾಗುತ್ತಿರುವ.ಸಮಾಜದೊಂದಿಗೆ ಸಂವಿಧಾನವು ಬದಲಾಗಿ
ಇಂದಿನ ಸಮಾಜಕ್ಕೆ ಪ್ರಸ್ತುತವಾದ ಸಂವಿಧಾನ
ಎನಿಸಿಕೊಳ್ಳುವುದಾಗಿರುತ್ತದೆ.”
ಈ ಎಲ್ಲ ಎಚ್ಚರ ಗಳನ್ನು ಗಮನದಲ್ಲಿಟ್ಟು
ಕೊಂಡು ಕಳೆದ 68 ವರ್ಷಗಳಲ್ಲಿ ನಮ್ಮಸಂವಿಧಾನವನ್ನು 10 ಬಾರಿ ತಿದ್ದುಪಡಿ ಮಾಡಲಾಗಿದೆ. ಇವುಗಳಲ್ಲಿ ಪ್ರಮುಖವಾದ ತಿದ್ದುಪಡಿಗಳೆಂದರೆ:
- 1ನೇ ತಿದ್ದುಪಡಿ, 1951: ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ
ವರ್ಗಗಳ ಅಭಿವೃದ್ಧಿಗಾಗಿ ವಿಶೇಷ ನಿಯಮಗಳನ್ನು ರಚಿಸುವ ಅಧಿಕಾರವನ್ನು
ರಾಜ್ಯ ಸರ್ಕಾರಗಳಿಗೆ ನೀಡಲಾಯಿತು. - 5ನೇ ತಿದ್ದುಪಡಿ, 1956: ರಾಜ್ಯಗಳ ಏಕೀಕರಣ ಮಾಡಲಾಯಿತು.
- 42 ನೇ ತಿದ್ದುಪಡಿ, 1976: ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಕೆಳಕಂಡ ಬದಲಾವಣೆಗಳನ್ನು ತರಲಾಯಿತು;
- ಅ. ಸಂವಿಧಾನದ ಪ್ರಸ್ತಾವನೆ ಸಮಾಜವಾದಿ, ಧರ್ಮನಿರಪೇಕ್ಷ ಜಾತ್ಯತೀತ
ಎಂಬ ಎರಡು ಹೊಸ ಪದಗಳನ್ನು ಹಾಗೂ ದೇಶದ ಏಕತೆಯ ಜೊತೆಗೆ
ಸಮಗ್ರತೆಯನ್ನು ಸೇರಿಸಲಾಯಿತು. - ಆ, ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸಂವಿಧಾನಕ್ಕೆ ಸೇರಿಸಲಾಯಿತು.
- ಈ. ಎಲ್ಲರಿಗೂ ಸಮಾನ ನ್ಯಾಯ ದೊರಕಿಸುವುದು ಹಾಗೂ ದುರ್ಬಲರಿಗೆ ಉಚಿತ ಕಾನೂನು ನೆರವು ನೀಡುವುದು.
- ಈ, ಉದ್ದಿಮೆಗಳು ವ್ಯವಸ್ಥಾಪನೆಯಲ್ಲಿ ಕಾರ್ಮಿಕರ ಪಾಲ್ಗೊಳ್ಳಲು ಅವಕಾಶ
ನೀಡಲಾಯಿತು, - ಉ. ಪರಿಸರ, ಅರಣ್ಯ ಮತ್ತು ವನ್ಯಜೀವಿಗಳ ಮೊದಲಾದ ಪ್ರಾಕೃತಿಕ ಸಂಪತ್ತಿನ
ಸಂರಕ್ಷಣೆಗೆ ಆದ್ಯತೆ ನೀಡಲಾಯಿತು - ಊ. ದೇಶದ ಯಾವುದೇ ಭಾಗದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲು
ಅವಕಾಶ ನೀಡಲಾಯಿತು. - ಋ, ಗಂಭೀರ ಪರಿಸ್ಥಿತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿಗಳು
ರಾಜ್ಯಗಳಲ್ಲಿ ತನ್ನ ಸೇನೆಯನ್ನು ನಿಯೋಜಿಸುವ ಅಧಿಕಾರ ವನ್ನು ಕೇಂದ್ರ
ಸರ್ಕಾರಕ್ಕೆ ನೀಡಲಾಯಿತು.
44 ನೇ ತಿದ್ದುಪಡಿ, 1978
(1) 42 ನೇ ತಿದ್ದುಪಡಿ ಕೆಲವು ಅತಿರೇಕ ಗಳನ್ನು ರದ್ದು ಗೊಳಿಸಿ ಹಿಂದೆ ಇದ್ದ ಪರಿಸ್ಥಿತಿಯನ್ನು ಮರು ಸ್ಥಾಪಿಸಲಾಯಿತು.
(2) ಆಸ್ತಿಯ ಹಕ್ಕನ್ನು ಮೂಲಭೂತ ಹಕ್ಕುಗಳ ಪಟ್ಟಿಯಿಂದ ತೆಗೆದು ಹಾಕಲಾಯಿತು.
(3) ಅನುಚ್ಛೇದ 20 ಮತ್ತು 21ರಲ್ಲಿ ತಿಳಿಯಪಡಿಸಿರುವ ಮೂಲಭೂತ ಹಕ್ಕುಗಳನ್ನು ರಾಷ್ಟ್ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ರದ್ದುಗೊಳಿಸದಂತೆ ಮಾಡಲಾಯಿತು.
52 ನೇ ತಿದ್ದುಪಡಿ, 1985
ಚುನಾಯಿತ ಪ್ರತಿನಿಧಿಗಳ ಪಕ್ಷಾಂತರವನ್ನುಕಾನೂನು ಬಾಹಿರ ಗೊಳಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನು, 10ನೇ ಅನುಸೂಚಿಗೆ ಸೇರಿಸಲಾಯಿತು.
61ನೇ ತಿದ್ದುಪಡಿ, 1989
ಮತದಾನದ ವಯಸ್ಸನ್ನು 21 ರಿಂದ 18 ವರ್ಷಗಳಿಗೆ
ಇಳಿಸಲಾಯಿತು.
73ನೇ ತಿದ್ದುಪಡಿ, 1992
ಪಂಚಾಯತ್‌ರಾಜ್ ವ್ಯವಸ್ಥೆ ಜಾರಿಗೆ ತರಲಾಯಿತು.
86ನೇ ತಿದ್ದುಪಡಿ, 2002
6 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣದ ಹಕ್ಕು ನೀಡಲಾಯಿತು.
(‘ಸಂವಿಧಾನ ಓದು’: ನ್ಯಾ.ಎಚ್.ಎನ್.ನಾಗಮೋಹನ ದಾಸ್ ,ಅವರ ಪುಸ್ತಕದಿಂದ ಈ ಲೇಖನವನ್ನು ತೆಗೆದುಕೊಳ್ಳಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




