ಕ್ರೀಡೆ
ಐರ್‍ಲೆಂಡ್ ವಿರುದ್ಧದ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾರತೀಯ ತಂಡ ಪ್ರಕಟ
ಸುದ್ದಿದಿನ ಡೆಸ್ಕ್ : ಐರ್‍ಲೆಂಡ್ ವಿರುದ್ಧ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಎರಡು ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ- ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದೆ.
ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ, ವೇಗಿ ಭುವನೇಶ್ವರ್ ಕುಮಾರ್ ಉಪನಾಯಕರಾಗಿ ಕಾರ್ಯನಿರ್ವಹಿಸುವರು.
ರಾಹುಲ್ ತ್ರಿಪಾಠಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬ್ಯಾಟ್ಸಮನ್ ಗಳಾದ ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸಾಮ್ಸನ್ ಕೂಡ ತಂಡಕ್ಕೆ ಮರಳಿದ್ದಾರೆ. ಭಾರತ ತಂಡ ಇದೇ 26 ಹಾಗೂ 28 ರಂದು ಡಬ್ಲಿನ್ ನಲ್ಲಿ ಐರ್‍ಲೆಂಡ್ ತಂಡವನ್ನು ಎದುರಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243