ದಿನದ ಸುದ್ದಿ

ಭಾರತದ ಸ್ಟಾರ್ಟ್‌ಅಪ್ ಗಳು ವಿಶ್ವದ ಭವಿಷ್ಯಕ್ಕೆ ಮುನ್ನುಡಿ : ಪ್ರಧಾನಮಂತ್ರಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಯೋಗ ಹಾಗೂ ಯುವಜನತೆ ಭಾರತದ ಹೆಗ್ಗುರುತು. ದೇಶದ ಸ್ಟಾರ್ಟ್‌ಅಪ್‌ಗಳನ್ನು ತನ್ನ ಭವಿಷ್ಯ ಎಂಬುದಾಗಿ ಜಗತ್ತು ನೋಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ನಾಟಕದ ಮೈಸೂರಿನ ಗಣಪತಿ ಸಚ್ಚಿದಾನಂದ ಸ್ವಾಮಿ ಅವರ 80 ನೇ ಜನ್ಮ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ಪ್ರಧಾನಿ ವಿಡಿಯೋ ಸಂದೇಶ ನೀಡಿದರು.

ದೇಶದ ಉದ್ಯಮ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮ ಜಾಗತಿಕ ಬೆಳವಣಿಗೆಯ ಹೊಸ ಭರವಸೆಯಾಗಿ ಹೊರಹೊಮ್ಮುತ್ತಿದೆ. ಈ ದಿಸೆಯಲ್ಲಿಯೂ ಆಧ್ಯಾತ್ಮಿಕ ಕೇಂದ್ರಗಳು ಸ್ಫೂರ್ತಿಯ ಕೇಂದ್ರಗಳಾಗಬೇಕು ಎಂದು ಕರೆ ನೀಡಿದರು.

ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಯ ಆಶ್ರಮದ ಕಾರ್ಯವನ್ನು ಶ್ಲಾಘಿಸಿದ ಅವರು, ನೀರು ಮತ್ತು ನದಿ ಸಂರಕ್ಷಣೆಗಾಗಿಯೂ ಕೆಲಸ ಮಾಡುವಂತೆ ಮನವಿ ಮಾಡಿದರು.

ದೇಶದ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ ೭೫ ಅಮೃತ ಸರೋವರಗಳನ್ನು ಅಭಿವೃದ್ಧಿಪಡಿಸುವ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಕೊಡುಗೆ ನೀಡಬೇಕು ಎಂದು ಹೇಳಿದರು.

ಸ್ವಚ್ಛ ಭಾರತ್ ಅಭಿಯಾನದಲ್ಲಿ ಆಶ್ರಮದ ಕೊಡುಗೆಗೆ ಪ್ರಧಾನಿ ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version