ದಿನದ ಸುದ್ದಿ
ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ವಿಕಲಚೇತನರಿಗೆ ಸೂಚನೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿರುವ ಎಲ್ಲ 18ವರ್ಷ ಮೇಲ್ಪಟ್ಟ ವಿಕಲಚೇತನರು ಕೋವಿಡ್-19ಗೆ ಸಂಬಂಧಿಸಿದಂತೆ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ಕೋವಿನ್ ಆಪ್ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ಕೋವಿನ್ ಆಪ್‍ನಲ್ಲಿ ನೋಂದಣಿ ಮಾಡಿಕೊಂಡು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಹಿರಿಯ ಮೇಲ್ವಿಚಾರಕರನ್ನು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನೇಮಿಸಿರುವ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಆರ್‍ಡಬ್ಲ್ಯೂ (ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು).
ಇದನ್ನೂ ಓದಿ | ದಾವಣಗೆರೆ | ವೈದ್ಯಕೀಯ, ಅರೆ ವೈದ್ಯಕೀಯ 63 ಸಿಬ್ಬಂದಿಗಳ ನೇಮಕ : ಮೇ. 10 ರಂದು ನೇರಸಂದರ್ಶನ
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಆರ್‍ಡಬ್ಲ್ಯೂ (ನಗರ ಪುನರ್ವಸತಿ ಕಾರ್ಯಕರ್ತರು, ಪರಶುರಾಮ- 7353150170, ಕಮಲಮ್ಮ – 9980581755), ಮತ್ತು ಪ್ರತಿ ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯೂ (ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲ್ಲೂಕು ಪಂಚಾಯಿತಿ, ದಾವಣಗೆರೆ ದೂರವಾಣಿ ಸಂಖ್ಯೆ: 9590829024, ಹರಿಹರ – 9886366809/9844955315/ಯು.ಆರ್.ಡಬ್ಲ್ಯೂ -7406079109, ಹೊನ್ನಾಳಿ – 9886366809, ಜಗಳೂರು – 9902105734, ಚನ್ನಗಿರಿ – 9945738141, ನ್ಯಾಮತಿ – 9886366809) ರವರಿಂದ ಮಾಹಿತಿ ಪಡೆದು ಎಲ್ಲ ವಿಕಲಚೇತನರು ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243