Connect with us

ದಿನದ ಸುದ್ದಿ

ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ

Published

on

ಸುದ್ದಿದಿನ,ಮಾಗಡಿ: ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದುಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಇಲ್ಲಿನ ಕೋಟೆಯಲ್ಲಿ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತಿಯಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರು ಕಟ್ಟಿಸಿರುವ ಇಲ್ಲಿನ ಐತಿಹಾಸಿಕ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿ, ಸಂರಕ್ಷಿಸಲಾಗುವುದು’ ಎಂದು ಭರವಸೆ ನೀಡಿದರು.

ಕೆಂಪೇಗೌಡರ ವೀರಸಮಾಧಿ ಇರುವ ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿ ಪರಂಪರೆಯ ಸಂರಕ್ಷಣೆಯನ್ನು ಸರಕಾರ ಮಾಡುತ್ತಿದೆ. ಜತೆಗೆ, ನಾಡಪ್ರಭುವಿಗೆ ಸೇರಿದ ಸಾವನದುರ್ಗ, ಹುಲಿಯೂರುದುರ್ಗ ಮುಂತಾದ ಸ್ಥಳಗಳನ್ನು ಕೂಡ ಆಕರ್ಷಕವಾಗಿ ಅಭಿವೃದ್ಧಿ ಮಾಡಲಾಗುವುದು. ಜತೆಗೆ, ಇದೇ 27ರಂದು ಕೆಂಪೇಗೌಡರ ಜಯಂತಿಯನ್ನು ವಿಧಾನಸೌಧದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು
ಅವರು ತಿಳಿಸಿದರು.

ಕೆಂಪೇಗೌಡರಿಗೆ ಸೂಕ್ತ ಗೌರವ ನೀಡುವ ಉದ್ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೃಹತ್ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದು ಅವರು ನುಡಿದರು.

ರಾಮನಗರ ಜಿಲ್ಲೆಯಲ್ಲಿ ಸಾವಿರಾರು ಕೆರೆಗಳನ್ನು ಪುನಶ್ಚೇತನ ಗೊಳಿಸುವ ಮತ್ತು ಅವುಗಳಿಗೆ ನೀರು ತುಂಬುವ ಕೆಲಸ ಮಾಡಲಾಗುವುದು. ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಜೀವ ತುಂಬಲಾಗುವುದು ಎಂದು ಅವರು ಹೇಳಿದರು.

ಕೆಂಪೇಗೌಡರ ದೂರದೃಷ್ಟಿ ಯಿಂದಾಗಿ ಬೆಂಗಳೂರು ನಗರವು ಇಂದು ವಿಶ್ವ ಮಟ್ಟದಲ್ಲಿ ಗಮನ ಸೆಳೆದಿದೆ. ಇಂತಹ ಕೀರ್ತಿ ಭಾರತದ ಬೇರಾವ ನಗರಗಳಿಗೂ ಇಲ್ಲ ಎಂದು ಅಶ್ವತ್ಥ ನಾರಾಯಣ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು.

ಅದ್ಧೂರಿ ಕಾರ್ಯಕ್ರಮವನ್ನು ಅಯೋಜಿಸಿದ್ದ ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರು ಸ್ವಾಗತ ಕೋರಿದರು.

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending