ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ದಿನಾಚರಣೆ
ಸುದ್ದಿದಿನ,ದಾವಣಗೆರೆ : ಆ.29 ರಂದು ನಡೆದ ರಾಷ್ಟ್ರೀಯ ಕ್ರೀಡಾ ದಿನಾಚಣೆಯ ( International Sports Day ) ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ನಾತಕ ಮತ್ತು ಸ್ನಾತಕೋತ್ತರ ಪದವಿ) ( GFGC : Davangere ) ನಲ್ಲಿ ಕ್ರೀಡಾ ದಿನಾಚಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೂಡಾ ಅಧ್ಯಕ್ಷರಾದ ಕೆ.ಎಂ ಸುರೇಶ್ ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್ .ಆರ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಆರ್ ನಾಗರಾಜ್ ರವರು ಆಗಮಿಸಿದ್ದರು.
ಈ ವೇಳೆ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೇಖಾ ಎಂ ಆರ್, ಪ್ರೊ. ನಾರಾಯಣಸ್ವಾಮಿ ಕೆ, ಗೀತಾದೇವಿ.ಟಿ, ಪತ್ರಾಂಕಿತ ವ್ಯವಸ್ಥಾಪಕರಾದ ಪ್ರೊ.ಗಿರಿಸ್ವಾಮಿ .ಎಚ್, ಪ್ರೊ.ಭೀಮಣ್ಣ ಸುಣಗಾರ, ಪ್ರೊ.ಸದಾಶಿವಪ್ಪ ಜಿ.ಸಿ, ಪ್ರೊ.ಜ್ಯೋತಿ ಟಿ.ಬಿ, ಪ್ರೊ.ಯಶೋಧ .ಆರ್, ಪ್ರೊ.ವೆಂಕಟೇಶ ಬಾಬು, ಪ್ರೊ. ಷಣ್ಮುಖ ಬಿ ಮತ್ತು ಬೋಧಕ /ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ | ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಆಗಮಿಸಿದ್ದ ಗಣ್ಯರು ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮಾಡುವುದರ ಮೂಲಕ ಕ್ರೀಡಾ ದಿನಕ್ಕೆ ಹೊಸ ಮೆರುಗನ್ನು ತಂದರು. ವೆಂಕಟೇಶ್ .ಟಿ (ಕಬ್ಬಡಿ). ಮಲ್ಲಪ್ಪ ಬಿ. ಎಚ್, ಕಾಶೀನಾಥ್.ಬಿ, ಆಕಾಶ್ .ಡಿ. ವಾಣಿ ಎ.ಎನ್ (ಕುಸ್ತಿ). ಸುನಿಲ್ ಟಿ. (ಹಾಕಿ). ಸಾನಿಯಾ ಎಸ್ ಎಸ್ (ಕ್ರಾಸ್ ಕಂಟ್ರಿ). ಅಂಕುಶ್ ಪೂಜಾರ್, ಪ್ರಜ್ವಲ್ ಡಿ.ಕೆ , ಜಗದೀಶ್ ಆರ್ (ಟೇಬಲ್ ಟೆನ್ನಿಸ್). ಸಾನಿಯಾ ಎಸ್ ಎಸ್(ಅಥ್ಲೆಟಿಕ್). ನವೀನ್ ಸಿ.ಎಚ್, ಎಂ.ಕೆ ಅದಿಕ್‍ಬಾಲ್ (ಬ್ಯಾಡ್ಮಿಂಟನ್). ಮಹಾಂತೇಶ್ ಆರ್ , ರಮೇಶ್ ಜೆ (ಚೆಸ್). ಸೌಂದರ್ಯ ರಾಯ್ಕರ್, ಮುಕ್ತಿ, ಅನು ಬಂಡಗರ್, ಅದಿತಿ ಯು, ಅನಿಲ್ ಕುಮಾರ್ ಆರ್.ಎಚ್ (ಪವರ್ ಲಿಫ್ಟಿಂಗ್). ಅನುಪ್ ಕುಮಾರ್ ಎಚ್.ಎಲ್ (ಕ್ರಿಕೆಟ್). ಪವನ್ ಕುಮಾರ್(ಬಾಡಿ ಬಿಲ್ಡಿಂಗ್) ಹಾಗೂ ವಿಶೇಷವಾಗಿ ಪವರ್ ಲಿಫ್ಟಿಂಗ್ ಕೋಚ್ ಆದ ಕಾರ್ತಿಕ್ ರವರನ್ನು ಸನ್ಮಾನಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


