Connect with us

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ : ಆ.29 ರಂದು ನಡೆದ ರಾಷ್ಟ್ರೀಯ ಕ್ರೀಡಾ ದಿನಾಚಣೆಯ ( International Sports Day ) ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ನಾತಕ ಮತ್ತು ಸ್ನಾತಕೋತ್ತರ ಪದವಿ) ( GFGC : Davangere ) ನಲ್ಲಿ ಕ್ರೀಡಾ ದಿನಾಚಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದೂಡಾ ಅಧ್ಯಕ್ಷರಾದ ಕೆ.ಎಂ ಸುರೇಶ್ ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್ .ಆರ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಆರ್ ನಾಗರಾಜ್ ರವರು ಆಗಮಿಸಿದ್ದರು.

ಈ ವೇಳೆ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೇಖಾ ಎಂ ಆರ್, ಪ್ರೊ. ನಾರಾಯಣಸ್ವಾಮಿ ಕೆ, ಗೀತಾದೇವಿ.ಟಿ, ಪತ್ರಾಂಕಿತ ವ್ಯವಸ್ಥಾಪಕರಾದ ಪ್ರೊ.ಗಿರಿಸ್ವಾಮಿ .ಎಚ್, ಪ್ರೊ.ಭೀಮಣ್ಣ ಸುಣಗಾರ, ಪ್ರೊ.ಸದಾಶಿವಪ್ಪ ಜಿ.ಸಿ, ಪ್ರೊ.ಜ್ಯೋತಿ ಟಿ.ಬಿ, ಪ್ರೊ.ಯಶೋಧ .ಆರ್, ಪ್ರೊ.ವೆಂಕಟೇಶ ಬಾಬು, ಪ್ರೊ. ಷಣ್ಮುಖ ಬಿ ಮತ್ತು ಬೋಧಕ /ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ | ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ 

ಆಗಮಿಸಿದ್ದ ಗಣ್ಯರು ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮಾಡುವುದರ ಮೂಲಕ ಕ್ರೀಡಾ ದಿನಕ್ಕೆ ಹೊಸ ಮೆರುಗನ್ನು ತಂದರು. ವೆಂಕಟೇಶ್ .ಟಿ (ಕಬ್ಬಡಿ). ಮಲ್ಲಪ್ಪ ಬಿ. ಎಚ್, ಕಾಶೀನಾಥ್.ಬಿ, ಆಕಾಶ್ .ಡಿ. ವಾಣಿ ಎ.ಎನ್ (ಕುಸ್ತಿ). ಸುನಿಲ್ ಟಿ. (ಹಾಕಿ). ಸಾನಿಯಾ ಎಸ್ ಎಸ್ (ಕ್ರಾಸ್ ಕಂಟ್ರಿ). ಅಂಕುಶ್ ಪೂಜಾರ್, ಪ್ರಜ್ವಲ್ ಡಿ.ಕೆ , ಜಗದೀಶ್ ಆರ್ (ಟೇಬಲ್ ಟೆನ್ನಿಸ್). ಸಾನಿಯಾ ಎಸ್ ಎಸ್(ಅಥ್ಲೆಟಿಕ್). ನವೀನ್ ಸಿ.ಎಚ್, ಎಂ.ಕೆ ಅದಿಕ್‍ಬಾಲ್ (ಬ್ಯಾಡ್ಮಿಂಟನ್). ಮಹಾಂತೇಶ್ ಆರ್ , ರಮೇಶ್ ಜೆ (ಚೆಸ್). ಸೌಂದರ್ಯ ರಾಯ್ಕರ್, ಮುಕ್ತಿ, ಅನು ಬಂಡಗರ್, ಅದಿತಿ ಯು, ಅನಿಲ್ ಕುಮಾರ್ ಆರ್.ಎಚ್ (ಪವರ್ ಲಿಫ್ಟಿಂಗ್). ಅನುಪ್ ಕುಮಾರ್ ಎಚ್.ಎಲ್ (ಕ್ರಿಕೆಟ್). ಪವನ್ ಕುಮಾರ್(ಬಾಡಿ ಬಿಲ್ಡಿಂಗ್) ಹಾಗೂ ವಿಶೇಷವಾಗಿ ಪವರ್ ಲಿಫ್ಟಿಂಗ್ ಕೋಚ್ ಆದ ಕಾರ್ತಿಕ್ ರವರನ್ನು ಸನ್ಮಾನಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending