Connect with us

ದಿನದ ಸುದ್ದಿ

ಇಂದು ಅಂತಾರಾಷ್ಟ್ರೀಯ ಯೋಗ ದಿನ : ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ, ನರೇಂದ್ರ ಮೋದಿ ಸಮ್ಮುಖ ಸಾವಿರಾರು ಜನರಿಂದ ಯೋಗ ಪ್ರದರ್ಶನ

Published

on

ಸುದ್ದಿದಿನ ಡೆಸ್ಕ್ : ಇಂದು ಅಂತಾರಾಷ್ಟ್ರೀಯ ಯೋಗ ದಿನ. 8ನೇ ಅಂತಾರಾಷ್ಟ್ರೀಯ ಯೋಗ ದಿವನ್ನು ದೇಶದ ವಿವಿಧ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕದ ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಿದರು.

ಅಜಾದಿ ಕಾ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ನಡೆಯುತ್ತಿದ್ದು, ದೇಶದ 75 ಐತಿಹಾಸಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಮಾನವೀಯತೆಗಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಯೋಗ ದಿನ ಆಚರಿಸಲಾಗುತ್ತಿದೆ. ಮೈಸೂರು ಅರಮನೆ ಆವರಣದಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಾರ್ವಜನಿಕರಿಗೆ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯ ತಿಳಿಸಿದರು.

ಯೋಗ ಮತ್ತು ಆಧ್ಯಾತ್ಮಿಕತೆ ಮತ್ತು ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರಿನಲ್ಲಿ ಈ ಬಾರಿ ಯೋಗ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮೈಸೂರಿಗೆ ನನ್ನ ಪ್ರಣಾಮಗಳನ್ನು ತಿಳಿಸುತ್ತೇನೆ ಎಂದರು.

ಯೋಗ ಈಗ ನಮ್ಮೆಲ್ಲರ ಜೀವನಕ್ಕೆ ವಿಶ್ವಾಸ ಮೂಡಿಸುತ್ತಿದೆ. ಇಡೀ ವಿಶ್ವಕ್ಕೆ ಯೋಗದ ಮಹತ್ವ ಈಗ ಭಾರತದಿಂದ ಗೊತ್ತಾಗಿದೆ. ಮಾನವೀಯತೆಗಾಗಿ ವಿಶ್ವದ ಎಲ್ಲೆಡೆಯಲ್ಲೂ ಯೋಗ ಆಚರಿಸಲಾಗುತ್ತಿದೆ. ಯೋಗದ ಸಂದೇಶ ಸಾರಲು ನೆರವಾದ ವಿಶ್ವಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ನಂತರ ಪ್ರಧಾನಿ ನರೇಂದ್ರ ಮೋದಿ ಸೇರಿ ಸಾವಿರಾರು ಮಂದಿ ಯೋಗ ಪ್ರದರ್ಶನ ನೀಡಿದರು. ಇದಕ್ಕೂ ಮುನ್ನ ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದರು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, , ಸಚಿವರಾದ ಎಸ್‌ಟಿ ಸೋಮಶೇಖರ್, ಡಾ ಕೆ ಸುಧಾಕರ್, ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ, ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್, ಯದುವೀರ್ ಹಾಜರಿದ್ದರು. ಪ್ರಧಾನಿ ಅವರು ಪಾಲ್ಗೊಂಡಿದ್ದ ಈ ಸಮಾರಂಭದಲ್ಲಿ ವಿದ್ಯಾರ್ಥಿಗಳು, ದಿನಗೂಲಿ ನೌಕರರು, ವಿಶೇಷ ಚೇತನರು ಸಹ ಭಾಗಿಯಾಗಿದ್ದರು.

ಮೈಸೂರು ಯೋಗದ ರಾಜಧಾನಿಯೆಂದೇ ಕರೆಯಲ್ಪಡುತ್ತಿದ್ದು, ಮೈಸೂರು ಅರಮನೆಯ ದಾಖಲೆಗಳ ಪ್ರಕಾರ ಎರಡು ಶತಮಾನಕ್ಕೂ ಮೀರಿದ ಯೋಗದ ಇತಿಹಾಸವನ್ನು ಈ ನಗರ ಹೊಂದಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ವಿದ್ವತ್ ಪೂರ್ಣ ಪುಸ್ತಕ ಶ್ರೀತತ್ವ ನಿಧಿಯಲ್ಲಿ ಯೋಗದ 122 ಆಸನಗಳ ವಿವರಣೆಯನ್ನು ನೀಡಿದ್ದರು.

1930ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜಮನೆತದ ಸದಸ್ಯರು ಮತ್ತು ಸಾರ್ವಜನಿಕರಿಗೆ ಯೋಗ ಕಲಿಸಲು ಪ್ರಪ್ರಥಮ ಯೋಗ ಶಾಲೆ ಆರಂಭಿಸಿದ್ದರು. ತಿರುಮಲೈ ಕೃಷ್ಣಮಾಚಾರ್ಯ ಅವರು ಮೈಸೂರಿನವರಾಗಿದ್ದು, ಅವರನ್ನು ಆಧುನಿಕ ಯೋಗದ ಪಿತಾಮಹ ಎಂದು ಪರಿಗಣಿಸಲಾಗಿದೆ. ಇವರು ಹಠಯೋಗವನ್ನು ಪರಿಚಯಿಸಿದ್ದಲ್ಲದೇ ಮೊದಲ ಹಠಯೋಗ ಶಾಲೆಯನ್ನು ಪ್ರಾರಂಭಿಸಿದ ಹೆಗ್ಗಳಿಕೆ ಹೊಂದಿದ್ದಾರೆ.

ಪ್ರಸಿದ್ಧ ಯೋಗಪಟು ಬಿ.ಕೆ.ಎಸ್.ಅಯ್ಯಂಗಾರ್, ಅಷ್ಟಾಂಗ ಯೋಗದ ಪಟ್ಟಾಭಿಜೋಯಿಸ್ ಮತ್ತಿತರರು ಮೈಸೂರಿನ ಯೋಗ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಜಗತ್ತಿನ ಪ್ರಮುಖ ಯೋಗ ಶಿಕ್ಷಕರು ಈಗಲೂ ಮೈಸೂರಿನಲ್ಲಿ ಯೋಗ ತರಬೇತಿ ನೀಡುತ್ತಿದ್ದಾರೆ. ಇಂತಹ ನಗರದಲ್ಲಿ ಯೋಗ ದಿನಾಚರಣೆಯನ್ನು ಈ ಬಾರಿ ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ.

ವಿದೇಶಗಳಲ್ಲಿ ಭಾರತೀಯ ಮಿಷನ್‌ಗಳು ಅಂತಾರಾಷ್ಟ್ರೀಯ ಯೋಗ ದಿನ ಆಯೋಜಿಸಿವೆ. ದೇಶದ ವಿವಿಧ ಪಾರಂಪರಿಕ ತಾಣಗಳಲ್ಲಿ ನಡೆಯಲಿರುವ ಯೋಗ ಪ್ರದರ್ಶನಗಳಲ್ಲಿ ಕೇಂದ್ರದ ಹಲವಾರು ಸಚಿವರು ಭಾಗಿಯಾಗಲಿದ್ದಾರೆ.

ಅನುರಾಗ್ ಸಿಂಗ್ ಠಾಕೂರ್ ಅವರು ಹಿಮಾಚಲ ಪ್ರದೇಶದ ನಲಗಢ್ ಅರಮನೆ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಧರ್ಮೇಂದ್ರ ಪ್ರಧಾನ್ ಕಾಂಗ್ರಾ ಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕೊನಾರ್ಕ್ ಸೂರ್ಯ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿನ ಕಾರ್ಯಕ್ರಮದಲ್ಲಿ ಮಹೇಂದ್ರ ಪಾಂಡೆ, ಗುಜರಾತ್‌ನ ಐಕ್ಯತ ಪ್ರತಿಮೆ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಮನ್ಸೂಖ್ ಮಾಂಡವೀಯ, ಹರಿದ್ವಾರದ ಹರ್ ಕೀ ಪೌರಿಯಲ್ಲಿ ಗಿರಿರಾಜ ಸಿಂಗ್, ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜ್ಯೋತಿರಾಧಿತ್ಯ ಸಿಂಧ್ಯಾ ಭಾಗಿಯಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending