Connect with us

ದಿನದ ಸುದ್ದಿ

ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯ ತೋಟಗಾರಿಕೆ ಅಧಿಕಾರಿಯವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending