ಕ್ರೀಡೆ
ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳ ಆಹ್ವಾನ

ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.
ಪ್ರಸ್ತಾವನೆ ಸಲ್ಲಿಸಬಯಸುವ ಕ್ರೀಡಾಪಟುಗಳು(ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಭಾರತೀಯ ನಾಗರೀಕರಾಗಿರಬೇಕು ಅಥವಾ ಕರ್ನಾಟಕದಲ್ಲಿ ಕನಿಷ್ಟ ಹತ್ತು ವರ್ಷಗಳ ಕಾಲ ಸಾಮಾನ್ಯ ನಿವಾಸಿಯಾಗಿದ್ದು ಹಿಂದಿನ 3 ಕ್ಯಾಲೆಂಡರ್ ವರ್ಷಗಳಲ್ಲಿ ನಿರಂತರವಾಗಿ ರಾಜ್ಯವನ್ನು ಪ್ರತಿನಿಧಿಸಿರುವ ಯುವ ಕ್ರೀಡಾಪಟುಗಳಾಗಿರಬೇಕು. ಅಂತರರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ಅಂತರ ರಾಜ್ಯ/ಅಂತರ ವಿಶ್ವವಿದ್ಯಾನಿಲಯ/ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಅರ್ಹ ಕ್ರೀಡಾಪಟುಗಳು ಫೆ.3 ರ ಒಳಗಾಗಿ ಪ್ರಸ್ತಾವನೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಈ ಕಚೇರಿಯನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!

ಸುದ್ದಿದಿನ,ಅಹಮದಾಬಾದ್: ಭಾರತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು 3-1 ಅಂತರದಲ್ಲಿ ಗೆದ್ದ ಸಂಭ್ರಮದಲ್ಲಿರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ದಿಗ್ಗಜ ನಾಯಕರ ದಾಖಲೆಯನ್ನು ಮುರಿದಿದ್ದಾರೆ.
ಭಾರತ ತಂಡವು ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಇನ್ನಿಂಗ್ಸ್ ಮತ್ತು 25 ರನ್ ಗಳ ಜಯ ಸಾಧಿಸುತ್ತಿದ್ದಂತೆ. ನಾಯಕನಾಗಿ ಕೊಹ್ಲಿ ತವರಿನಲ್ಲಿ 23 ನೇ ಗೆಲುವಿನ ನಗೆಯನ್ನು ಬೀರಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ನಾಯಕರಾದ ಸ್ಟೀವ್ ವ್ಹಾ ಮತ್ತು ವೆಸ್ಟ್ ಇಂಡೀಸ್ ನ ಕ್ಲೈವ್ ಲಾಯ್ಡ್ ದಾಖಲೆಯ ಮುರಿದು ಮುಂದಿದ್ದಾರೆ.
ವಿರಾಟ್ ಕೊಹ್ಲಿ ತವರಿನಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ನಲ್ಲಿ 23ನೇ ಗೆಲುವು ದಾಖಲಿಸುವುದರ ಮೂಲಕ ಸ್ಟೀವ್ ವ್ಹಾ ದಾಖಲೆ ಮುರಿದು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡರೆ ಮೊದಲ ಸ್ಥಾನದಲ್ಲಿ 30 ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ನಾಯಕ ಗ್ರೇಮ್ ಸ್ಮಿತ್ ರಾರಾಜಿಸುತ್ತಿದ್ದಾರೆ. 29 ಗೆಲುವಿನೊಂದಿಗೆ ರಿಕಿ ಪಾಟಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. ತವರಿನಲ್ಲಿ 10 ಟೆಸ್ಟ್ ಸರಣಿ ಗೆಲುವಿನೊಂದಿಗೆ ಕೊಹ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನ ಸರಿದೂಗಿಸಿದ್ದಾರೆ.
We worked really hard for this, happy to be in the finals. Looking forward. 🏆#TeamIndia pic.twitter.com/cTzFkVheRl
— Virat Kohli (@imVkohli) March 6, 2021
ನಾಯಕನಾಗಿ ವೆಸ್ಟ್ ಇಂಡೀಸ್ ನಾಯಕ ಕೈವ್ ಲಾಯ್ಡ್ 74 ಟೆಸ್ಟ್ ಪಂದ್ಯಗಳಲ್ಲಿ 36 ಗೆಲುವನ್ನು ದಾಖಲಿಸಿದ್ದರು. ಆದರೆ ಈಗ ವಿರಾಟ್ ಕೊಹ್ಲಿ ಕೇವಲ 60 ಪಂದ್ಯಗಳಲ್ಲಿ 36 ಟೆಸ್ಟ್ ಗೆಲುವು ದಾಖಲಿಸುವ ಮೂಲಕ ಲಾಯ್ಡ್ ಅವರ ದಾಖಲೆಯನ್ನು ಪುಡಿಗುಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!

ಸುದ್ದಿದಿನ ಡೆಸ್ಕ್: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಗುರುವಾರ ಮತ್ತೆ ಕ್ರಿಕೆಟ್ಗೆ ಮರಳಲಿದ್ದಾರೆ. ರಾಜ್ಯದ ನ್ಯೂ ಸೌತ್ ವೇಲ್ಸ್ನ ಏಕದಿನ ಪಂದ್ಯದಲ್ಲಿ ಅವರು ತೊಡೆಸಂದು ಒತ್ತಡದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಜನವರಿಯಲ್ಲಿ ಗಬ್ಬಾದಲ್ಲಿ ನಡೆದ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ನಂತರ ಅನುಭವಿ ಎಡಗೈ ಆಟಗಾರ ಡೇವಿಡ್ ಆಡಲಿಲ್ಲ.ಕಾರಣ ನವೆಂಬರ್ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದರು.
ಇದನ್ನೂ ಓದಿ | ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
ಕಳೆದ ತಿಂಗಳು ಈ ತೊಡೆಯ ಗಾಯವು ಬೇಗ ಗುಣವಾಗುವುದು ಕಷ್ಟ ಎಂದು ಗುಣವಾಗುವುದು ಕಷ್ಟ ಎಂದು ಅವರು ಹೇಳಿದ್ದರು. ಆದರೆ ನ್ಯೂ ಸೌತ್ ವೇಲ್ಸ್ ತರಬೇತುದಾರ ಫಿಲ್ ಜಾಕ್ವೆಸ್ ಅವರು ಗುರುವಾರ ದೇಶೀಯ ಮಾರ್ಷ್ ಏಕದಿನ ಕಪ್ನಲ್ಲಿ ದಕ್ಷಿಣ ಆಸ್ಟ್ರೇಲಿಯಾವನ್ನು ಎದುರಿಸಲು ಯೋಗ್ಯರಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 2021ನೇ ಮಾಹೆಯಲ್ಲಿ ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ (Sports Science) 8 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರಿಗೆ ವೈಜ್ಞಾನಿಕವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಲಿದ್ದಾರೆ.
ಜಿಲ್ಲೆಯಲ್ಲಿ ಮಾ.05 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುವುದು. 08 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರು ತಮ್ಮ ಜನ್ಮ ದಿನಾಂಕ, ಆಧಾರ್ ಕಾರ್ಡ್ ದಾಖಲೆ ಸಲ್ಲಿಸಬೇಕು. ಪ.ಜಾತಿ/ಪ.ಪಂ ಕ್ಕೆ ಸೇರಿದ ಕ್ರೀಡಾಪಟುಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಮಾ.03 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಕಚೇರಿ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ | ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480, ಮೊ.ಸಂ: 9480796263, 7019565606ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ4 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ದಿನದ ಸುದ್ದಿ6 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ಬಹಿರಂಗ7 days ago
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
-
ಕ್ರೀಡೆ6 days ago
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!
-
ದಿನದ ಸುದ್ದಿ4 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ನಿತ್ಯ ಭವಿಷ್ಯ7 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ದಿನದ ಸುದ್ದಿ5 days ago
ಮಾಧ್ಯಮ ಉದ್ಯಮವಾಗಿರುವ ಈ ಕಾಲಘಟ್ಟದಲ್ಲಿ ಜನರೇ ಜನಾಭಿಪ್ರಾಯ ರೂಪಿಸುವ ಹೊಣೆ ಹೊರಬೇಕು : ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ