ದಿನದ ಸುದ್ದಿ

ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2019 ರ ಜ.1 ರಿಂದ ಡಿ.31 ರೊಳಗೆ ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು ಮತ್ತು ಸ್ವರಚಿತವಾಗಿರಬೇಕು ಹಾಗೂ ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ ಫೆಬ್ರವರಿ 07 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು.

ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ:080-22113146 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version