ದಿನದ ಸುದ್ದಿ
ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ತೋಟಗಾರಿಕೆ ಇಲಾಖೆಯು ಚಿತ್ರದುರ್ಗ ಜಿಲ್ಲೆಯ ಹಿರೆಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020-22 ನೇ ಸಾಲಿನಲ್ಲಿ 2021 ರ ಮೇ 03 ರಿಂದ 2022 ರ ಫೆಬ್ರವರಿವರೆಗೆ 10 ತಿಂಗಳ ಅವಧಿಗೆ ವಸತಿ ಸಹಿತವಾಗಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಪುರುಷ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮತ್ತು ಮಹಿಳಾ ಶಿಬಿರಾರ್ಥಿಗಳಿಗೆ ಮೈಸೂರು ಜಿಲ್ಲೆಯ ರಂಗಸಮುದ್ರದಲ್ಲಿರುವ ಪ್ರತ್ಯೇಕ ಮಹಿಳಾ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು.
ತರಬೇತಿಗೆ ದಾವಣಗೆರೆ ಜಿಲ್ಲೆಗೆ ಪುರುಷ ವಿಭಾದಲ್ಲಿ ಇತರೆ 05 ಮತ್ತು ಪರಿಶಿಷ್ಟ ಜಾತಿ 02 ಒಟ್ಟು 07 ಹಾಗೂ ಮಹಿಳಾ ವಿಭಾಗದಲ್ಲಿ ಇತರೆ 02 ಮತ್ತು ಪರಿಶಿಷ್ಟ ಜಾತಿ 01 ಒಟ್ಟು 03 ಗುರಿ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ ಹಾಗೂ ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ.
ಇದನ್ನೂ ಓದಿ | ದಾವಣಗೆರೆ | ಮಾ. 24 ರಂದು ವಿಶ್ವ ಕ್ಷಯರೋಗ ದಿನ
ಅರ್ಜಿಗಳನ್ನು ತೋಟಗಾರಿಕೆ ಉಪ ನಿರ್ದೇಶಕರು(ಜಿ.ಪಂ) ದಾವಣಗೆರೆ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ದಾವಣಗೆರೆ ಇವರ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in
ನಲ್ಲಿ ಮಾರ್ಚ್ 24 ರಿಂದ ಏಪ್ರಿಲ್ 17 ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದು.
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ30, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ರೂ.15 ನ್ನು ಇಂಡಿಯನ್ ಪೋಸ್ಟಲ್ ಆರ್ಡರ್(ಐಪಿಓ)/ಡಿಮ್ಯಾಂಡ್ ಡ್ರಾಫ್ಟ್(ಡಿಡಿ) ಅನ್ನು Deputy Director of Horticulture (ZP), Davanagere ಇವರ ಹೆಸರಿನಲ್ಲಿ ಪಡೆದು ಉಪನಿರ್ದೇಶಕರ ಕಛೆರಿ/ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾವ), ದಾವಣಗೆರೆ ಇವರು ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮೊನ್ನಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


