ದಿನದ ಸುದ್ದಿ
ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ
ಸುದ್ದಿದಿನ,ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2018-19 ನೇ ಸಾಲಿಗೆ 20 ವರ್ಷ ಮೇಲ್ಪಟ್ಟು 60 ವರ್ಷದೊಳಗಿರುವ ಅರ್ಹ ದೈಹಿಕ ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ವಾಹನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2019 ರ ಜನವರಿ 10 ರಂದು ಕೊನೆ ದಿನವಾಗಿದೆ. ವೈದ್ಯಕೀಯ ಪ್ರಮಾಣಪತ್ರ, ಅಂಗವಿಕಲರ ಗುರುತಿನಚೀಟಿ, ನಿವಾಸಿ ದೃಢೀಕರಣ ಪತ್ರ, ಆದಾಯ,ಜಾತಿ ಪ್ರಮಾಣಪತ್ರ, ಆಧಾರ್‍ಕಾರ್ಡ್, ಚುನಾವಣಾ ಗುರುತಿನಚೀಟಿ, ಪಡಿತರಚೀಟಿ, ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯದೇ ಇರುವ ಬಗ್ಗೆ ದೃಢೀಕರಣಪತ್ರ, ಸೇವಾ ದೃಢೀಕರಣ ಪತ್ರ, ಫೋಟೋಗಳೊಂದಿಗೆ ದ್ವಿಪ್ರತಿಯಲ್ಲಿ ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಕೇಂದ್ರದ ದೂರವಾಣಿ ನಂ.08194-235286 ನ್ನು ಹಾಗೂ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ(ಎಂ.ಆರ್.ಡಬ್ಲ್ಯೂ)ರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401