ದಿನದ ಸುದ್ದಿ

ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಹಾವೇರಿ: ದೇವಗಿರಿ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿ ವತಿಯಿಂದ ಜಿಲ್ಲೆಯ ನಿರೂದ್ಯೋಗಿ ಯುವಕ / ಯುವತಿಯರಿಗೆ 10 ದಿನಗಳ “ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ” ತರಬೇತಿ ಹಮ್ಮಿಕೊಳ್ಳಲಾಗಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷದೊಳಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿಯೊಂದಿಗೆ ಉಚಿತ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ, ಬ್ಯಾಂಕ ಪಾಸ ಬುಕ್, ರೇಶನ ಕಾರ್ಡ, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ. ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ ದೇವಗಿರಿ, ಹಾವೇರಿ. ದೂರವಾಣಿ ಸಂಖ್ಯೆ : 08375-249160 ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version