ದಿನದ ಸುದ್ದಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಇ/ಎಂ.ಟೆಕ್(ಮೆಕ್ಯಾನಿಕಲ್) ಕೈಗಾರಿಕಾ ಕ್ಷೇತ್ರದಲ್ಲಿ /ಕ್ಯಾಡ್ ಮತ್ತು ಕ್ಯಾಮ್‍ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುವುದು ಅಥವಾ ತಿರಸ್ಕರಿಸುವುದು ಆಡಳಿತ ಮಂಡಳಿಯ ಪರಿಮಿತಿಗೆ ಒಳಪಟ್ಟಿರುತ್ತದೆ.

ಅರ್ಜಿ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222, ದೂರವಾಣಿ ಸಂಖ್ಯೆ: 08182-246054 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version