ದಿನದ ಸುದ್ದಿ

ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಅಸ್ಸಾಂ ರೆಜಿಮೆಂಟ್‍ನ ಹಿರಿಯ ಅಭಿಲೇಖಾಲಯ ಕಛೇರಿ ಅವರು ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿಯನ್ನು ಜು. 20 ರ ಒಳಗೆ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.joinindianarmy.nic.in ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version