ದಿನದ ಸುದ್ದಿ
ಭೂಮಿ ಮಾರಾಟ ಮಾಡಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಮಾರಾಟ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ.ಜಾತಿ, ಪ.ವರ್ಗದವರನ್ನು ಹೊರತುಪಡಿಸಿದ ಭೂಮಾಲೀಕರು ಪ.ಪಂಗಡದ ಫಲಾಪೇಕ್ಷಿಗಳಿಗೆ ಭೂಮಿ ಮಾರಾಟ ಮಾಡಲು ಇಚ್ಚಿಸಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಿ, ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ಹಾಗೂ ಒಪ್ಪಿಗೆ ಪತ್ರವನ್ನು ಜನವರಿ 15, 2026 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಗ್ಲಾಸ್‌ಹೌಸ್ ಪಕ್ಕ, ಶಾಬನೂರು ರಸ್ತೆ, ದಾವಣಗೆರೆ. ದೂ.ಸಂ : 08192-233309 ನ್ನು ಸಂಪರ್ಕಿಸಬಹುದೆAದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243