Connect with us

ದಿನದ ಸುದ್ದಿ

ಮಹಿಳಾ ಬೀದಿನಾಟಕ, ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾತಂಡಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಓರ್ವ ಕಲಾವಿರನ್ನು ಹೊಂದಿರಬೇಕು. ಸಂಗೀತ ತಂಡದಲ್ಲಿ ಮೂರು ಜನ ಮಹಿಳಾ ಕಲಾವಿದರು ಇರಬೇಕು. ಈ ಪೈಕಿ ಓರ್ವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ತಂಡದ ಎಲ್ಲಾ ಕಲಾವಿದರು ಬ್ಯಾಂಕ್ ಖಾತೆ, ಪಾನ್ ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ಕಲಾವಿದರ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ ಖಾತೆ, ಪಾನ್‍ಕಾರ್ಡ್ ಝೆರಾಕ್ಸ್ ಪ್ರತಿಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ತಂಡವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತಮ್ಮ ಪ್ರದರ್ಶನದ ಸಾಮಥ್ರ್ಯದ ಆಧಾರದ ಮೇಲೆ ಸಮಿತಿ ಆಯ್ಕೆ ಮಾಡುತ್ತದೆ. ಆಯ್ಕೆಯಾದ ತಂಡಗಳಿಗೆ ವಿಭಾಗ ಮಟ್ಟದಲ್ಲಿ ತರಬೇತಿ ನೀಡಲಾಗುವುದು. ಅರ್ಜಿಯನ್ನು ಜೂನ್ 06ರ ಸಂಜೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಸ್ವ-ಕೈಬರಹದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಡಿ.ಸಿ.ಕಾಂಪೌಂಡ್, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-278638ನ್ನು ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ4 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ1 day ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ2 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ2 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ3 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ6 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ6 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ7 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending