ದಿನದ ಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವಂತೆ ಕರೆ

Published

on

ಸುದ್ದಿದಿನ,ದಾವಣಗೆರೆ : ಭಾರತವು ವಿಶ್ವಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದು, ಇವುಗಳಲ್ಲಿ ನಮ್ಮ ಪುರಾತನ ಸಾಂಸ್ಕøತಿಕ ಯೋಗ ಪ್ರಮುಖವಾದದ್ದು, ಯೋಗದ ಮಹತ್ವವನ್ನರಿತ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಜೂ.21ರಂದು ವಿಶ್ವಾದಾದ್ಯಂತ ಯೋಗ ದಿನವನ್ನಾಗಿ ಘೋಷಿಸಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯೋಗ ದಿನ ಆಚರಿಸಲು ಮಾರ್ಗಸೂಚಿಯನ್ನು ಹೊರಡಿಸಿದ್ದು, ಕಾಯಾರ್ಂಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರು ಹಾಗೂ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಪಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version