Connect with us

ದಿನದ ಸುದ್ದಿ

ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿ‌ : ಡಾ. ಎಲ್.ಡಿ. ವೆಂಕಟೇಶ್

Published

on

ಸುದ್ದಿದಿನ,ದಾವಣಗೆರೆ : ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯ ಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆ ಅವಶ್ಯಕವಾಗಿರುತ್ತದೆ, ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿಯಾಗುವುದಲ್ಲದೆ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ, ತಾಲ್ಲೂಕು ಆಡಳಿತದ ಸಹಯೋಗದಲ್ಲಿ ತಹಸಿಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಅಯೋಡಿನ್ ಸಪ್ತಾಹ ಮತ್ತು ಕೋವಿಡ್-19 ಲಸಿಕೆ ಕುರಿತ ತಾಲ್ಲೂಕು ಮಟ್ಟದ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯ ಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆ ಬೇಕು. ಹಾಲು, ಸಮುದ್ರದ ಮೀನು, ಅಯೋಡಿನ್ ಇರುವಂತಹ ತರಕಾರಿಗಳನ್ನು ತಿನ್ನುವುದರಿಂದ ಈ ಪೋಷಕಾಂಶ ಪಡೆಯಬಹುದು. ಅಯೋಡಿನ್ ಕೊರತೆಯಾದರೆ ಮಹಿಳೆಯರಲ್ಲಿ ಪದೆ ಪದೇ ಗರ್ಭಪಾತವಾಗುತ್ತದೆ. ನಿಶಕ್ತಿ, ಬುದ್ಧಿ ಮಾಂಧ್ಯತೆ, ಕಿವುಡುತನ, ಮಂಕುತನದಿಂದ ಬಳಲುತ್ತಾರೆ.

ಸಾಮಾನ್ಯವಾಗಿ ಅಯೋಡಿನ್ ಕೊರತೆಯಿಂದ ಉಂಟಾಗುವ ಸಮಸ್ಯೆಗಳು ಮಕ್ಕಳು, ವಯಸ್ಕರರು, ಗರ್ಭಿಯರಿಗೆ ಬರುತ್ತದೆ. ಗಳಗಂಡ ರೋಗವು ಮನುಷ್ಯನಿಗೆ ಕುತ್ತಿಗೆ ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ. ಅಯೋಡಿನ್‍ಯುಕ್ತ ಉಪ್ಪಿನಲ್ಲಿ 15 ರಿಂದ 30ಪಿಪಿಎಂ ಪ್ರಮಾಣದಷ್ಟು ಅಯೋಡಿನ್ ಇರಬೇಕು. ವಯಸ್ಕರಿಗೆ 150ಮೈಕ್ರೋಗ್ರಾಂ, ಗರ್ಭಿಣಿಯರಿಗೆ 200 ಮೈಕ್ರೋಗ್ರಾಂ, ಮಕ್ಕಳಿಗೆ 120ಮೈಕ್ರೋಗ್ರಾಂ ನಷ್ಟು ಅಯೋಡಿನ್‍ಯುಕ್ತ ಉಪ್ಪು ಬಳಸಬೇಕು.

ಇದನ್ನು ನಾವು ನಮ್ಮ ಮನೆಯಲ್ಲಿಯೇ ಪರೀಕ್ಷಿಸಬಹುದು. ಮನೆಯಲ್ಲಿರುವ ಉಪ್ಪಿನ ಮೇಲೆ ಅಕ್ಕಿಗಂಜಿ ಅಥವಾ ನಿಂಬೆರಸ ಹಾಕಿದರೆ ನೀಲಿ ಬಣ್ಣಕ್ಕೆ ತಿರುಗಿದರೆ ಅದರಲ್ಲಿ ಅಯೋಡಿನ್ ಅಂಶ ಇದೆ ಎಂದು ತಿಳಿಯಬೇಕು.ಇಲಾಖೆಯಿಂದಲೇ ಅಯೋಡಿನ್ ಕಿಟ್‍ನೀಡಿ ಪ್ರತೀ ಮನೆ ಮತ್ತು ಹಾಸ್ಟೆಲ್, ಅಂಗನವಾಡಿ ಕೇಂದ್ರಗಳಲ್ಲಿ ಇದನ್ನು ಪರೀಕ್ಷಿಸಲಾಗುತ್ತದೆ ಎಂದರು.

ಕೋವಿಡ್-19 ಲಸಿಕೆ ಕಾರ್ಯಕ್ರಮವು ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯವರಿಗೆ ನೀಡಲಾಗುತ್ತದೆ. ನಂತರದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆಯನ್ನು ಶೀತಲ ಸರಪಳಿಯಲ್ಲಿ ಶೇಖರಣೆ ಮಾಡಿ ಇಡಲಾಗುತ್ತದೆ. ಈಗಾಗಲೇ ತಾಲ್ಲೂಕು ಮತ್ತು ಜಿಲ್ಲೆಯ ಬೇಡಿಕೆಯನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗಿದೆ.

ಅದರಂತೆ ದಾವಣಗೆರೆ ತಾಲ್ಲೂಕಿನ ಸರ್ಕಾರಿ 2095, ಖಾಸಗಿ 2121 ಡೋಸ್ ಬೇಕಾಗುತ್ತದೆ ಅದರಂತೆ ಖಾಸಗಿ ಮತ್ತು ಸರ್ಕಾರಿ ಕರ್ತವ್ಯ ನಿರ್ವಹಿಸುವ ಆರೋಗ್ಯ ಸಿಬ್ಬಂದಿಯವರಿಗೂ, ಅಂಗನವಾಡಿ ಕಾರ್ಯಕರ್ತರಿಗೂ, ಆಶಾ ಕಾರ್ಯಕರ್ತರಿಗೂ ಹಾಗೂ ಸಾರ್ವಜನಿಕರಿಗೂ ಕ್ರಮವಾಗಿ ನೀಡಲಾಗುತ್ತದೆ.

ಇದೇ ಡಿಸೆಂಬರ್ 01 ರಿಂದ 30ರ ವರೆಗೆ ಸಕ್ರಿಯ ಕ್ಷಯ ರೋಗ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಅಂದೋಲನಾ ಕಾರ್ಯಕ್ರಮ ನಡೆಯುತ್ತಿದ್ದು, 2025 ರೊಳಗೆ ನಾವು ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿಯೊಬ್ಬ ನಾಗರೀಕರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಡಾ. ವೆಂಕಟೇಶ್ ತಿಳಿಸಿದರು.

ತಹಶೀಲ್ದಾರ್ ಬಿ.ಎನ್ ಗಿರೀಶ್ ಮಾತನಾಡಿ, ಯಾವುದೇ ಕಾರ್ಯಕ್ರಮಗಳು ಯಶಸ್ವಿ ಆಗಬೇಕಾದರೆ ವಿವಿಧ ಇಲಾಖೆಗಳ ಸಹಕಾರ ಅತೀ ಮುಖ್ಯವಾಗಿ ಬೇಕು. ಕೋವಿಡ್-19 ಲಸಿಕೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಬೆಂಬಲ ನೀಡುವುದರ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಅದೇ ರೀತಿ ಯಾವುದೇ ಕಾರಣಕ್ಕೂ ಬಂಡಿಗಳಲ್ಲಿ ಬರುವ ಚೀಲದಲ್ಲಿ ಮಾರುವಂತಹ ಅಗ್ಗದ ಉಪ್ಪನ್ನು ಬಳಸಬಾರದು, ಅಯೋಡೈಸ್ಡ್ ಸಾಲ್ಟ್ ಎಂದು ನಮೂದಿಸಿದ ಸೂರ್ಯನ ಮಾರ್ಕ್ ಇರುವಂತಹ ಉಪ್ಪನ್ನು ಮತ್ತು ತರಕಾರಿಗಳನ್ನು ಅಂಗನವಾಡಿ ಕೇಂದ್ರ ಮತ್ತು ಹಾಸ್ಟೆಲ್‍ಗಳಲ್ಲಿ ಉಪಯೋಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್ ಉಮಾಪತಿ, ಆಹಾರ ಇಲಾಖೆ ಉಪನಿರ್ದೇಶಕ ಪ್ರಕಾಶ್, ತಾಲ್ಲೂಕು ಹಿರಿಯ ಪುರುಷ ಆರೋಗ್ಯ ಸಹಾಯಕ ವೆಂಕಟಾಚಲ ಕುಮಾರ್, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪಿ.ವಿ ರವಿ, ತಾಲ್ಲೂಕಿನ ಎಲ್ಲಾ ವಿವಿಧ ಇಲಾಖೆಯ ಅಧಿಕಾರಿಗಳು, ನಗರ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು, ಆರ್.ಬಿ.ಎಸ್.ಕೆ ತಂಡದ ವೈದ್ಯರು ಮತ್ತು ಸಿಬ್ಬಂದಿಯವರು, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕಛೇರಿಯ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಶ್ವ ಅಯೋಡಿನ್ ಸಪ್ತಾಹ ಅಂಗವಾಗಿ ಇಲಾಖೆಯಿಂದ ಸಿದ್ಧಪಡಿಸಿರುವ ಪ್ರಚಾರ ಸಾಮಗ್ರಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending