Connect with us

ಕ್ರೀಡೆ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಐವರ ಬಂಧನ, ನಗದು, ಮೊಬೈಲ್ ವಶ

Published

on

ಸುದ್ದಿದಿನ,ಗದಗ : ನಗರದ ರಿಂಗ್ ರಸ್ತೆ ಬಾಲಾಜಿ ನಗರ ಕ್ರಾಸ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಂಡಿದ್ದ ಐವರನ್ನು ಸೆ.30 ರಂದು ಗದಗ ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1.55 ಲಕ್ಷ ರೂ. ನಗದು ಹಾಗೂ ಆರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಲಾಜಿ ನಗರದ ಶ್ರೀನಿವಾಸ ವಿಶ್ವನಾಥಸಾ ಹಬೀಬ, ಕೇಶವ ನಗರದ ಅಲ್ತಾಫ್ ಮಾಬುಸಾಬ ತಹಶೀಲ್ದಾರ, ಕಿಲ್ಲಾ ಓಣಿಯ ಸಾಗರ ನಾರಾಯಣಸಾ ಪವಾರ, ದಾಸರ ಓಣಿಯ ವಿನಾಯಕ ಭೀಮಸೇನಸಾ ಶಿದ್ಲಿಂಗ್, ಒಕ್ಕಲಗೇರಿ ಓಣಿಯ ಪ್ರಕಾಶ ಲಕ್ಷö್ಮಣಸಾ ಬದಿ ಬಂಧಿತ ಆರೋಪಿಗಳು.

ಬಂಧಿತರು ಸೆ.30 ರಂದು ಸಂಜೆ ನಡೆದ ರಾಜಸ್ತಾನ ರಾಯಲ್ಸ್ ಹಾಗೂ ಕೆಕೆಆರ್ ತಂಡಗಳ ನಡುವಿನ ಐಪಿಎಲ್ ಪಂದ್ಯದ ಸ್ಕೋರ್ ಮತ್ತು ಫಲಿತಾಂಶದ ಮೇಲೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಡಿಎಸ್‌ಪಿ ಪ್ರಲ್ಹಾದ ಎಸ್.ಕೆ. ಮಾರ್ಗದರ್ಶನದಲ್ಲಿ ಗದಗ ಶಹರ ಸಿಪಿಐ ಪಿ.ವ್ಹಿ.ಸಾಲಿಮಠ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ನಗದು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಅಲ್ಲದೇ, ಸಿಬ್ಬಂದಿಗಳ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ

ದಲಿತ ಯುವತಿ ಅತ್ಯಾಚಾರ-ಕೊಲೆ | ಹೊಳಲ್ಕೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ

http://suddidina.com/daily-news/protest-in-holalkere/

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ಕ್ರೀಡೆ

ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

Published

on

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.

ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.

ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್  188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ‌ ಎಂದು ವರದಿ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ..!

Published

on

ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಾಗಿದೆ. ಮಾಜಿ ನಾಯಕ ಕಪಿಲ್ ದೇವ್ ಅವರು 1983ರಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ತಂದು ಕೊಟ್ಟಿದ್ದರು. ಕಪಿಲ್ ದೇವ್ 131 ಟೆಸ್ಟ್ ಪಂದ್ಯದಲ್ಲಿ 434 ವಿಕೆಟ್ ಪಡೆದ ಭಾರತದ ಕ್ರಿಕೆಟ್ ತಂಡದ ಮುಖ್ಯ ವೇಗಿಯಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್ ಸಿ ಬಿ ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

Published

on

ಸುದ್ದಿದಿನ,ಅಬುಧಾಬಿ: 2020 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗ 3ನೇ ಭರ್ಜರಿ ಗೆಲುವು ಸಾಧಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‍ಗಳ ಭರ್ಜರಿ ಗೆಲುವು ಪಡೆದಿದ್ದು, ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6 ಪಾಯಿಂಟ್ ಗಳಿಸಿ ಮೊದಲ‌ ಸ್ಥಾನಕ್ಕೆ ಏರಿದೆ.

ಪಡಿಕ್ಕಲ್ (63 ರನ್), ವಿರಾಟ್ ಕೊಹ್ಲಿ (72 ರನ್) ಅರ್ಧ ಶತಕದ ನೆರವಿನಿಂದ 155 ರನ್‍ಗಳ ಗುರಿಯನ್ನು 5 ಎಸೆತ ಬಾಕಿ ಇರುವಂತೆಯೇ ಆರ್‌ಸಿಬಿ ಗುರಿ ಮುಟ್ಟಿತು. 19.1 ಓವರ್ ನಲ್ಲಿ ಕೊಹ್ಲಿ ಪಡೆ 2 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending