ಕ್ರೀಡೆ

ಐಪಿಎಲ್ ಸುದ್ದಿ

Published

on

ಸುದ್ದಿದಿನ ಡೆಸ್ಕ್ : ಪುಣೆಯಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ 75 ರನ್ ಗಳಿಂದ ಕೋಲ್ಕೊತಾ ನೈಟ್ ರೈಡರ‍್ಸ್ ತಂಡದ ವಿರುದ್ಧ ಸುಲಭ ಜಯ ದಾಖಲಿಸಿತು.

ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡ 20ಓವರುಗಳಲ್ಲಿ 7ವಿಕೆಟ್ ನಷ್ಟಕ್ಕೆ 176ರನ್ ಗಳಿಸಿತು. ಈ ಗುರಿ ಬೆಂಬತ್ತಿದ ಕೋಲ್ಕೊತಾ ನೈಟ್ ರೈಡರ‍್ಸ್ ತಂಡ 14.3ಓವರುಗಳಲ್ಲಿ ಕೇವಲ 101ರನ್ ಗಳಿಗೆ ಆಲೌಟಾಯಿತು.

ನಿನ್ನೆಯೇ ನಡೆದ ಮತ್ತೊಂದು ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್‌ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿತು. ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟ್ ಮಾಡಿ 5ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಉತ್ತರವಾಗಿ ರಾಜಸ್ಥಾನ ರಾಯಲ್ಸ್ 19.4ಓವರುಗಳಲ್ಲಿ 4ವಿಕೆಟ್ ಕಳೆದುಕೊಂಡು 190 ರನ್ ಗಳಿಸಿ ಭರ್ಜರಿ ವಿಜಯೋತ್ಸವ ಆಚರಿಸಿತು.

ಇಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಮತ್ತು ಸನ್‌ರೈಸರ‍್ಸ್ ಹೈದರಾಬಾದ್ ಹಾಗೂ ರಾತ್ರಿ 7.30ಕ್ಕೆ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version