ಕ್ರೀಡೆ

ಐಪಿಎಲ್ ಪ್ರಮುಖ ಸುದ್ದಿ

Published

on

ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೇಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಸನ್‌ರೈಸರ‍್ಸ್ ಹೈದರಾಬಾದ್ ತಂಡ 9 ವಿಕೆಟ್‌ಗಳಿಂದ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡದ ವಿರುದ್ಧ ನಿರಾಯಾಸ ಗೆಲುವು ದಾಖಲಿಸಿತು.

ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ 16.1ಓವರುಗಳಲ್ಲಿ ಕೇವಲ 68ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟಾಯಿತು. ಉತ್ತರವಾಗಿ 69ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಸನ್‌ರೈಸರ‍್ಸ್ ಹೈದರಾಬಾದ್ ತಂಡ ಕೇವಲ 8ಓವರುಗಳಲ್ಲಿ 1 ವಿಕೆಟ್ ಕಳೆದುಕೊಂಡು ವಿಜಯೋತ್ಸವ ಆಚರಿಸಿತು.

ನಿನ್ನೆ ನವೀ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 8 ರನ್‌ಗಳಿಂದ ಕೋಲ್ಕೊತಾ ನೈಟ್ ರೈಡರ‍್ಸ್ ತಂಡದ ವಿರುದ್ಧ ಜಯಗಳಿಸಿತು. ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಿ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಉತ್ತರವಾಗಿ ಕೋಲ್ಕೊತಾ ನೈಟ್ ರೈಡರ‍್ಸ್ ತಂಡಕ್ಕೆ 8ವಿಕೆಟ್ ನಷ್ಟಕ್ಕೆ 148ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರಾತ್ರಿ7.30 ಕ್ಕೆ ನಡೆಯಲಿರುವ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version