ಕ್ರೀಡೆ

ಐಪಿಎಲ್ ಸುದ್ದಿ

Published

on

ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯಗಳಿಸಿತು.

ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್, ನಿಗದಿತ 20 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 150ರನ್ ಗಳಿಸಿತು. ಶತಕ ವಂಚಿತರಾದ ಮೊಯಿನ್ ಅಲಿ ಆಕರ್ಷಕ 93 ರನ್ ಗಳಿಸಿ ಚೆನ್ನೈ ತಂಡದ ಪೈಪೋಟಿ ಮೊತ್ತಕ್ಕೆ ಕಾರಣರಾದರು.

ಉತ್ತರವಾಗಿ 152 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 19.4ಓವರುಗಳಲ್ಲಿ 5ವಿಕೆಟ್ ಕಳೆದುಕೊಂಡು ಜಯಗಳಿಸಿತು. ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 59ರನ್ ಮತ್ತು ಆರ್. ಅಶ್ವಿನ್ ಅಜೇಯ 40ರನ್ ಗಳಿಸಿ, ತಮ್ಮ ತಂಡಕ್ಕೆ ನಿರೀಕ್ಷಿತ ಗೆಲುವು ತಂದುಕೊಟ್ಟರು.

ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version