ಕ್ರೀಡೆ
ಐಪಿಎಲ್ ಸುದ್ದಿ : ಇಂದು ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ
ಸುದ್ದಿದಿನ ಡೆಸ್ಕ್ : ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಕಳೆದ ರಾತ್ರಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೈಟನ್ಸ್ ತಂಡ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಹಾರ್ಧಿಕ್ ಪಾಂಡ್ಯ ಅಜೇಯ 62 ಹಾಗೂ ಮಿಲ್ಲರ್ 34 ರನ್ ಗಳಿಸಿದರು.
ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ170 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಜಯದೊಂದಿಗೆ ಆರ್.ಸಿ.ಬಿ ಫೇ ಆಫ್ ಹಂತಕ್ಕೇರುವ ಆಸೆ ಜೀವಂತವಾಗಿರಿಸಿಕೊಂಡಿದೆ.
ಇಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243