ಕ್ರೀಡೆ
ಐಪಿಎಲ್ ಸುದ್ದಿ
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್ ರೈಸರ್‍ಸ್ ಹೈದ್ರಾಬಾದ್ ತಂಡವನ್ನು 21 ರನ್‌ಗಳಿಂದ ಮಣಿಸಿದೆ.
ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 207ಗಳಿಸಿತು. ನಂತರ ಬ್ಯಾಟಿಂಗ್ ಆರಂಭಿಸಿದ ಸನ್ ರೈಸರ್‍ಸ್ 20ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ186 ರನ್‌ಗಳಷ್ಟೇ ಕಲೆಹಾಕಲು ಸಾಧ್ಯವಾಯಿತು.
ಈ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 5ನೇ ಜಯ ಇದಾಗಿದ್ದು, ಸನ್ ರೈಸ್‌ರ್‍ಸ್‌ಗೆ ಪಂದ್ಯಾವಳಿಯಲ್ಲಿ 5ನೇ ಬಾರಿ ಸೋಲುಂಟಾಗಿದೆ. ಅಂಕ ಪಟ್ಟಿಯಲ್ಲಿ ಎರಡೂ ತಂಡಗಳು ತಲಾ 10 ಅಂಕಗಳಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ರನ್ ರೇಟ್ ಹೊಂದಿರುವ ಕಾರಣ 5ನೇ ಸ್ಥಾನದಲ್ಲಿದೆ.
ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243