ಕ್ರೀಡೆ
ಐಪಿಎಲ್ ಸುದ್ದಿ
ಸುದ್ದಿದಿನ ಡೆಸ್ಕ್ : ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು sಪರಾಭವಗೊಳಿಸಿದೆ.
ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 217ರನ್ ಕಲೆಹಾಕಿತು. ರಾಜಸ್ಥಾನ ರಾಯಲ್ಸ್ ಪರ ಜೋಸ್ ಬಟ್ಲರ್ 61ಎಸೆತಗಳಲ್ಲಿ 103ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 38, ಶಿಮ್ರಾನ್ ಹೆಟ್ಮಿಯರ್ 26ರನ್ ಕಲೆಹಾಕಿದರು.
ಕೆಕೆಆರ್ ಪರ ಸುನಿಲ್ ನರೈನ್ 2ಹಾಗೂ ಆಂಡ್ರೆ ರಸೆಲ್ , ಶಿವಂ ಮಾವಿ ತಲಾ ಒಂದೊಂದು ವಿಕೆಟ್ ಪಡೆದರು. 217 ರನ್ ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ 19.4 ಓವರ್ಗಳಲ್ಲಿ 210 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ ಪರ ಶ್ರೇಯಸ್ ಅಯ್ಯರ್85 , ಆರೋನ್ ಫಿಂಚ್58 , ಉಮೇಶ್ ಯಾದವ್ 21ರನ್ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ಯಜ್ವೇಂದ್ರ ಚಹಲ್ 5, ಒಬೆಡ್ ಮೆಕಾಯ್ 2,ಆರ್ ಅಶ್ವಿನ್ 1 ವಿಕೆಟ್ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243