ಕ್ರೀಡೆ

ಐಪಿಎಲ್ ಟಿ 20 ಕ್ರಿಕೆಟ್ : ಇಂದು ಚೆನ್ನೈ ಸೂಪರ್ ಕಿಂಗ್ಸ್ -ಮುಂಬೈ ಇಂಡಿಯನ್ಸ್ ಮುಖಾಮುಖಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಂಬೈನ ಡಾ. ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್20-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ರಾಜಸ್ತಾನ್ ರಾಯಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದೆ.

ರಾಜಸ್ತಾನ್ ಒಡ್ಡಿದ್ದ 162 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 18.1ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161ರನ್‌ಗಳನ್ನು ಗಳಿಸಿತು. ಇದಕ್ಕೂ ಮುನ್ನ, ರಾಜಸ್ತಾನ್ ರಾಯಲ್ಸ್ ತಂಡ ನಿಗದಿತ 20ಓವರ್‌ಗಳಲ್ಲಿ 6ವಿಕೆಟ್ ನಷ್ಟಕ್ಕೆ 160ರನ್ ಮಾಡಿತ್ತು. ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಮುಂಬೈ ಇಂಡಿಯನ್ಸ್ ತಂಡದೊಂದಿಗೆ ಸೆಣಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version