Connect with us

ಸಿನಿ ಸುದ್ದಿ

ಭೈರವ ಧನಂಜಯ್ ಗೆ ಇರಾ ಜೋಡಿ !

Published

on

ಸುದ್ದಿದಿನ ಡೆಸ್ಕ್: ರಾಮ್ ಗೋಪಾಲ್ ವರ್ಮಾ ನಿರ್ಮಾಣದ, ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಭೈರವ ಗೀತಾ ಸಿನಿಮಾಕ್ಕೆ ಇರಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಇರಾ ಕನ್ನಡಕ್ಕೆ ಹೊಸ ಮುಖವಾಗಿದ್ದು, ಮನೋಜ್ಞ ಅಭಿನಯದ ಹಿನ್ನೆಲೆಯಲ್ಲಿ ಈ ಚಿತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿದೆ. ಇನ್ನು ಭೈರವ ಗೀತಾ ಸಿನೆಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿದೆ. ಹೊಸ ನಿರ್ದೇಶಕ ಸಿದ್ದಾರ್ಥ ನಿರ್ದೇಶಿಸಿದ್ದಾರೆ. ಚಿತ್ರದ ಚಿತ್ರೀಕರಣವು ಹೈದರಾಬಾದ್ ನಲ್ಲಿ ಭರದಿಂದ ಸಾಗುತ್ತಿದೆ. ರಾಮ್ ಗೋಪಾಲ್ ವರ್ಮಾ, ಭಾಸ್ಕರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕನ್ನಡದ ಡಾಲಿ ಧನಂಜಯ ಹಾಗೂ ನಾಯಕಿ ಇರಾ ಅವರಿಗೆ ದೊಡ್ಡ ವೇದಿಕೆಯಾಗಿದೆ.

Irra-select-rgvs-bhairava-geetha-film

ದಿನದ ಸುದ್ದಿ

ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್

Published

on

ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.

ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.

ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.

ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.

ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.

ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗನ್‌ ಮಿಸ್‌ ಫೈರ್‌ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

Published

on

ಸುದ್ದಿದಿನ,ಮುಂಬೈ:ಗನ್‌ ಮಿಸ್‌ ಫೈರ್‌ ಆದ ಕಾರಣ ಬಾಲಿವುಡ್‌ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್‌ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ12 hours ago

ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ

ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ...

ದಿನದ ಸುದ್ದಿ13 hours ago

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ...

ದಿನದ ಸುದ್ದಿ13 hours ago

ವಸತಿ ಯೋಜನೆ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ...

ದಿನದ ಸುದ್ದಿ13 hours ago

ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ...

ದಿನದ ಸುದ್ದಿ14 hours ago

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು...

ದಿನದ ಸುದ್ದಿ2 days ago

ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ...

ದಿನದ ಸುದ್ದಿ2 days ago

ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ...

ದಿನದ ಸುದ್ದಿ3 days ago

ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ

ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ...

ದಿನದ ಸುದ್ದಿ4 days ago

ದಾವಣಗೆರೆ | ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ, ನಗರದ ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ದಾವಣಗೆರೆ:ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ನಾಳೆ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ...

Trending