ಸಿನಿ ಸುದ್ದಿ
“ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು..!”
- ಇರ್ಫಾನ್ ಖಾನ್, ಬಾಲಿವುಡ್ ನಟ/ ಕನ್ನಡಕ್ಕೆ : ವೇಣುಗೋಪಾಲ ಶೆಟ್ಟಿ
ಇರ್ಫಾನ್ ಖಾನ್ ನೆನಪಲ್ಲಿ, ಅವರದ್ದೇ ಬರಹ ಇಲ್ಲಿದೆ ಓದಿ
‘‘ ನ್ಯೂರೋನ್ ಎಂಡೊಕ್ರೈನ್ ಕ್ಯಾನ್ಸರ್ ” ನನ್ನ ಆವರಿಸಿದೆ. ಈ ಹೆಸರೇ ನನ್ನ ಶಬ್ದಕೋಶಕ್ಕೆ ಹೊಸತು. ಇದು ತೀರಾ ಅಪರೂಪದ ಕ್ಯಾನ್ಸರ್ ರೋಗ. ಇದರ ಬಗ್ಗೆ ನಡೆದ ಅಧ್ಯಯನಗಳೂ ಕಡಿಮೆ. ಹೀಗಾಗಿ ನಿಶ್ಚಿತವಾದ ಔಷಧಿ ಇಲ್ಲ. ಹೀಗಾಗಿ, ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು.
ಅಸಲಿಗೆ ನಾನೊಂದು ಭಿನ್ನ ಆಟದಲ್ಲಿದ್ದೆ… ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಕನಸುಗಳು, ಯೋಜನೆಗಳು, ಆಕಾಂಕ್ಷೆಗಳು, ಗುರಿಗಳು ಈ ಎಲ್ಲವೂಗಳಲ್ಲಿ ನಾನು ಎಂಗೇಜ್ ಆಗಿದ್ದೆ. ಥಟ್ಟನೆ ಯಾರೋ ಭಜ ತಟ್ಟಿದ ಹಾಗಾಯ್ತು. ತಿರುಗಿ ನೋಡಿದರೆ ಟಿಸಿ ನಿಂತಿದ್ದರು. ‘‘ನೀವು ತಲುಪಬೇಕಾದ ಸ್ಥಳ ಬಂದಿದೆ.. ಪ್ಲೀಸ್ ಇಳಿದು ಬಿಡಿ..’’ ಅಂದಾಗ ನನಗೆ ಗೊಂದಲ: ಇಲ್ಲ.. ಇಲ್ಲ.. ನಾನು ತಲುಪಬೇಕಾದ ಸ್ಥಳ ಇನ್ನೂ ಬಂದಿಲ್ಲ’ ಎಂದೆ. ‘‘ಇಲ್ಲ, ಅದೇ ಇದು.. ಕೆಲಮೊಮ್ಮೆ ಹಾಗೆಯೇ ಆಗುತ್ತೆ. ”
ನನಗೆ ಈಗ ಅರ್ಥವಾಗಿದ್ದು ಇಷ್ಟೇ; ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲು ಅಸಾಧ್ಯವಾಗುತ್ತದೆ ಹಾಗೂ ಅವುಗಳನ್ನು ನಿಯಂತ್ರಿಸಲು ನೀವು ಹತಾಶರಾಗಿ ಪ್ರಯತ್ನಿಸುತ್ತೀರಿ. ಇಂಥದೊಂದು ಗಾಬರಿ, ಆತಂಕ, ಭಯ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ನಾನು, ನನ್ನ ಮಗನ ಬಳಿ ಹೇಳಿಕೊಂಡೆ: ‘‘ನನ್ನಿಂದ ನಾನು ನಿರೀಕ್ಷಿಸುವುದು ಇಷ್ಟೇ. ಈ ಪರಿಸ್ಥಿತಿಯನ್ನು ಮತ್ತೆ ಎಂದಿಗೂ ನಾನು ಎದುರಿಸಬಾರದು. ನನ್ನ ಕಾಲ ಮೇಲೆ ನಾನು ನಿಲ್ಲಬೇಕಿದೆ. ಭೀತಿ ಮತ್ತು ಭಯ ನನ್ನ ಆಕ್ರಮಿಸಿಕೊಳ್ಳಬಾರದು’’.”
ನೋವಿನ ಅರಿವು ನಿಮಗೆ ತಿಳಿದಿದ್ದರೆ, ನನ್ನ ಈಗಿನ ಸ್ವರೂಪ ಮತ್ತು ತೀವ್ರತೆಯ ಅನುಭವ ನಿಮಗೂ ಇರುತ್ತದೆ. ಯಾವುದೇ ಸಮಾಧಾನ, ಪ್ರೇರಣೆ ಕೆಲಸ ಮಾಡುತ್ತಿಲ್ಲ. ಬರೀ ನೋವು, ಮತ್ತು ಈ ನೋವು ದೇವರಿಗಿಂತಲೂ ಅಗಾಧವಾದದ್ದು ಅನಿಸುತ್ತಿದೆ.”
ದುಗುಡ, ದಣಿವಿನಿಂದ ಲಂಡನ್ ಆಸ್ಪತ್ರೆ ಪ್ರವೇಶಿಸಿದಾಗ ಆಸ್ಪತ್ರೆಯ ಮುಂಭಾಗದಲ್ಲಿ ಲಾರ್ಡ್ಸ್ ಸ್ಟೇಡಿಯಂ ಇರೋದು ಅರಿವಾಯ್ತು. ಇದು ನನ್ನ ಬಾಲ್ಯದ ಕನಸಿನ ಮೆಕ್ಕಾ. ನೋವಿನ ಮಧ್ಯೆಯೂ ನಾನು ಅಲ್ಲಿ ನಗುತ್ತಿರುವ ವಿವಿಯನ್ ರಿಚರ್ಡ್ಸ್ ಅವರ ಪೋಸ್ಟರ್ ಕಂಡೆ. ನಾನು ಈ ಜಗತ್ತಿನಲ್ಲಿ ಇಲ್ಲದಿದ್ದರೂ ಈ ಪ್ರಪಂಚದಲ್ಲಿ ಏನೂ ಸಂಭವಿಸುವುದಿಲ್ಲ. ಎಲ್ಲವೂ ಹಾಗೆಯೇ ಇರುತ್ತದೆ.
ನನ್ನ ಕೊಠಡಿಯ ಬಲಭಾಗದಲ್ಲಿ ಕೋಮಾದಲ್ಲಿ ಇರುವವರ ವಾರ್ಡ್ ಇದೆ. ಒಂದೊಮ್ಮೆ ನಾನು ಆಸ್ಪತ್ರೆಯ ಬಾಲ್ಕನಿಯಲ್ಲಿ ನಿಂತು ದೂರಕ್ಕೆ ದೃಷ್ಟಿ ಹರಿಸಿದೆ. ತಕ್ಷಣ ವಿಲಕ್ಷಣವಾದ ಭಾವವೊಂದು ನನ್ನನ್ನು ಕಾಡಿತು. ಜೀವನ ಆಟ ಮತ್ತು ಸಾವಿನ ಆಟದ ನಡುವೆ ಒಂದು ಕೇವಲ ಒಂದು ರಸ್ತೆ ಮಾತ್ರ ಅಲ್ಲಿತ್ತು. ಒಂದು ಕಡೆ ಕ್ರೀಡಾಂಗಣ… ಮತ್ತೊಂದು ಕಡೆ ಆಸ್ಪತ್ರೆ ಇತ್ತು. ಆದರೆ ನಾವು ಇವೆರಡರಲ್ಲಿ ಒಂದರ ಭಾಗವಾಗಿದ್ದೇವೆ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ. ಕ್ರೀಡಾಂಗಣಕ್ಕೂ ಸೇರಿದವರಲ್ಲ, ಆಸ್ಪತ್ರೆಗೂ ಸೇರಿದವರಲ್ಲ. ಈ ಸತ್ಯ ನನ್ನನ್ನು ಬಹಳವಾಗಿ ಕಾಡಿತು.
ಈ ಬ್ರಹ್ಮಾಂಡಕ್ಕೆ ಅದೆಂಥಾ ಅಭೂತ ಪೂರ್ವ ಶಕ್ತಿ ಇದೆ ಎಂಬುದು ಗೊತ್ತಾಯಿತು. ನನ್ನ ಆಸ್ಪತ್ರೆ ಇರುವ ಸ್ಥಳದ ಈ ಒಂದು ವಿಚಿತ್ರ ಘಟ್ಟ ನನ್ನನ್ನು ಬಹುವಾಗಿ ಕಾಡಿತು. ನನ್ನಲ್ಲೀಗ ಅನಿಶ್ಚಿತತೆ ಮನೆ ಮಾಡಿದೆ. ನಾನೀಗ ಮಾಡಲು ಸಾಧ್ಯವಿರುವುದು ಒಂದನ್ನೇ.. ನನ್ನ ಸಾಮರ್ಥ್ಯವನ್ನು ಅರಿತುಕೊಂಡು, ನನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡೋದು.
ಫಲಿತಾಂಶ ಏನಾಗಬಹುದೆಂದು ಯೋಚಿಸಿದೆ, ಇದು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದೆಂದೂ ಯೋಚಿಸಿದೆ. ಈಗಿನಿಂದ ನಾಲ್ಕು ಎಂಟು ತಿಂಗಳು ಅಥವಾ ಎರಡು ವರ್ಷವಾಗಲಿ, ಫಲಿತಾಂಶ ಏನೇ ಬರಲಿ. ನಾನು ನಂಬಿಕೆ ಕಳೆದುಕೊಳ್ಳಬಾರದು ಎಂದು ನಿರ್ಧರಿಸಿದ್ದೇನೆ.
ಆಸ್ಪತ್ರೆಯ ಚಿಕಿತ್ಸೆ ಪಡೆಯುವಾಗ ಮೊದಲ ಬಾರಿಗೆ ಸ್ವಾತಂತ್ರ್ಯ ಎನ್ನುವ ಪದದ ನಿಜವಾದ ಅರ್ಥ ಮನವರಿಕೆಯಾಗಿದೆ. ಜೀವನದ ಮ್ಯಾಜಿಕನ್ನು ಮೊದಲ ಬಾರಿಗೆ ಪರೀಕ್ಷಿಸುತ್ತಿದ್ದೇನೆ. ಫಲಿತಾಂಶ ಏನಾಗಲಿದೆ ಎಂಬುದನ್ನು ಕಾಯುತ್ತಿದ್ದೇನೆ. ನನ್ನ ಪ್ರತಿಯೊಂದು ಕಣಕಣದಲ್ಲೂ ವಿಶ್ವಾಸವಿದೆ. ಅದು ಉಳಿಯುವುದೇ ಎನ್ನುವುದನ್ನು ಸಮಯವೇ ಹೇಳಲಿದೆ. ”
ನನ್ನ ಜೀವನದ ಪ್ರಯಾಣದುದ್ದಕ್ಕೂ ಜಗತ್ತಿನಾದ್ಯಂತ ಜನ ನನಗಾಗಿ ಪ್ರಾರ್ಥಿಸಿಸುತ್ತಿದ್ದಾರೆ… ಶುಭ ಕೋರಿದ್ದಾರೆ. ನನಗೆ ತಿಳಿದಿರುವ, ತಿಳಿಯದೆ ಇರುವ ಜನರು ವಿಶ್ವದ ವಿವಿಧೆಡೆಯಿಂದ ನನಗಾಗಿ ಪ್ರಾರ್ಥಿಸುತ್ತಿದ್ದಾರೆ. ಬೇರೆ ಬೇರೆ ಜಾಗದಲ್ಲಿ ಬೇರೆ ಬೇರೆ ಕಾಲಮಾನದಲ್ಲಿ ಮಾಡಿದ ಈ ಪ್ರಾರ್ಥನೆ ಒಂದಾಗಿ ನನಗೆ ಸ್ಫೂರ್ತಿ ನೀಡುತ್ತಿದೆ. ನನ್ನ ಶಕ್ತಿಯ ಕಿರೀಟವಾಗಿದೆ.
ಈ ವಿಶ್ವಾಸ ನಿಧಾನವಾಗಿ ಮೊಗ್ಗಾಗಿ, ಎಲೆಯಾಗಿ, ರೆಂಬೆವಾಗಿ ಬೆಳೆಯುತ್ತಿದೆ. ನಾನು ಈ ಪ್ರಾರ್ಥನೆಯನ್ನು ನೋಡುತ್ತ ತೃಪ್ತಿಪಡುತ್ತಿದ್ದೇನೆ. ಪ್ರತಿ ಹೂವು, ಪ್ರತಿ ರೆಂಬೆಯೂ ಸಾಮೂಹಿಕ ಪ್ರಾರ್ಥನೆಯ ಮೂಲಕ ನನ್ನನ್ನು ತಲುಪಿ ಅಚ್ಚರಿ, ಸಂತೋಷ ಮತ್ತು ಕುತೂಹಲ ಮೂಡಿಸಿದೆ. ಒಂದು ಪ್ರವಾಹವನ್ನು ತಡೆಯಲು ಮುಚ್ಚಳದ ಅಗತ್ಯವಿಲ್ಲ ಎನ್ನುವುದು ಮನವರಿಕೆಯಾಗಿದೆ. ಬಹುಶಃ ಪ್ರಕೃತಿ ನನಗೆ ಸಣ್ಣ ಆಘಾತ ನೀಡಿದೆಯಷ್ಟೆ.
ಪೋಸ್ಟ್ ಕೃಪೆ : ಸಾಕಿಯ ಮಧುಶಾಲೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243