ದಿನದ ಸುದ್ದಿ
ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡಲು ಸ್ಕೆಚ್ ಹಾಕಿದ್ದ ಐಸಿಸ್ ಉಗ್ರರು
ಸುದ್ದಿದಿನ ಡೆಸ್ಕ್ : ಕಾಶ್ಮೀರದಲ್ಲಿ ಶುಕ್ರವಾರ ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತರಾದ ಕಾಶ್ಮೀರ ಐಸಿಸ್ ಮುಖ್ಯಸ್ಥ ದಾವೂದ್ ಅಹ್ಮದ್ ಸೋಫಿ ಸೇರಿದಂತೆ ಮೂವರು ಉಗ್ರರು ಅಮರನಾಥ ಯಾತ್ರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸ್ಕೆಚ್ ಹಾಕಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.
ಕಾಶ್ಮೀರದ ಯುವಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಹ್ರಿಕ್ ಉಲ್ ಮಜಾಹಿದ್ದೀನ್ ಸಂಘಟನೆಯು ತನ್ನ ಹೆಸರನ್ನು ಐಎಸ್ಕೆಜೆ ಎಂದು ಬದಲಾಯಿಸಿಕೊಂಡು ಕಾರ್ಯ ನಿರ್ವಹಿಸುತ್ತಿತ್ತು 1990ರಿಂದಲೂ ಕಣಿವೆ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಈ ಉಗ್ರರು ಕಣಿವೆ ರಾಜ್ಯದಲ್ಲಿ ನಡೆದ ಹಲವು ಹಿಂಸಾತ್ಮಕ ಕೃತ್ಯಗಳನ್ನು ಎಸಗಿವೆ ಎಂದು ತಿಳಿದುಬಂದಿದೆ.
21 ಉಗ್ರರು ಕಣಿವೆಯಲ್ಲಿ
ಭಾರತೀಯ ಭದ್ರತಾಪಡೆಯ ಹಿಟ್ಲಿಸ್ಟ್ನಲ್ಲಿರುವ 21 ಉಗ್ರರು ಕಾಶ್ಮೀರದಲ್ಲಿ ಅವಿತುಕೊಂಡಿದ್ದಾರೆ. ಅವರನ್ನೆಲ್ಲ ಒಂದೇ ಕಾರ್ಯಾಚರಣೆಯಲ್ಲಿ ಮುಗಿಸಬೇಕೆಂಬುದು ಸೇನೆ ಮುಂದಿರುವ ಸವಾಲು.
ತೆಹ್ರಿಕ್ ಉಲ್ ಮುಜಾಹಿದೀನ್ ಸಂಘಟನೆಯ ಅನೇಕ ಉಗ್ರರು ಸೇನಾಪಡೆಯಿಂದ ಶಸ್ತ್ರಾಸ್ತ್ರಗಳನ್ನುಕಸಿದ ಹಾಗೂ ವಿವಿಧ ಉಗ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅಂದಹಾಗೆ ಈ ಪೈಕಿ ಆರು ಮಂದಿ ಎ+++ ವರ್ಗಕ್ಕೆ ಸೇರಿದವರಾಗಿದ್ದಾರೆ. ಎ+++ ವರ್ಗಕ್ಕೆ ಸೇರಿದ ಉಗ್ರರು ಸಂಘಟನೆಯ ಉನ್ನತ ಸ್ಥಾನದಲ್ಲಿರುತ್ತಾರೆ. ಅವರ ಬಗ್ಗೆ ಮಾಹಿತಿ ನೀಡಿದವರಿಗೆ 12 ಲಕ್ಷ ರೂ. ಇನಾಮು ನೀಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಆಸಕ್ತ ಮತ್ತು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ಶೇ.90 ರಷ್ಟು ಸಹಾಯಧನ ಲಭ್ಯವಿದ್ದು ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು.
ಇದನ್ನೂ ಓದಿ | Breaking | ಕೇರಳ ರೈಲು ಪ್ರಯಾಣಿಕರಿಂದ 100 ಕ್ಕೂ ಹೆಚ್ಚು ಜೆಲಾಟಿನ್ ಸ್ಟಿಕ್ಗಳು, 350 ಡಿಟೋನೇಟರ್ಗಳನ್ನು ವಶಕ್ಕೆ ಪಡೆದ ಪೊಲೀಸ್
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Breaking | ಕೇರಳ ರೈಲು ಪ್ರಯಾಣಿಕರಿಂದ 100 ಕ್ಕೂ ಹೆಚ್ಚು ಜೆಲೆಟಿನ್ ಸ್ಟಿಕ್ಗಳು, 350 ಡಿಟೋನೇಟರ್ಗಳನ್ನು ವಶಕ್ಕೆ ಪಡೆದ ಪೊಲೀಸ್

ಸುದ್ದಿದಿನ ಡೆಸ್ಕ್ : ಕೇರಳದ ಕೋಜಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಂದ 100 ಕ್ಕೂ ಹೆಚ್ಚು ಜೆಲೆಟಿನ್ ಸ್ಟಿಕ್ಗಳು ಮತ್ತು 350 ಡಿಟೋನೇಟರ್ಗಳನ್ನು ಹಾಗೂ ಹೆಚ್ಚಿನ ಸಂಖ್ಯೆಯ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಎನ್ಐ ತಿಳಿಸಿದೆ. ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಮಹಿಳೆಯನ್ನು ವಶಕ್ಕೆ ತೆಗೆದುಕೊಂಡಿದೆ.
Kerala: Railway Protection Force (RPF) seizes more than 100 gelatin sticks and 350 detonators from a woman passenger at Kozhikode Railway Station; takes her into custody. pic.twitter.com/tNnn8ZfE8A
— ANI (@ANI) February 26, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಲ್ಲು ಕ್ವಾರಿ ವಿರುದ್ದ ಎಫ್ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಖನಿಜ ಪ್ರತಿಷ್ಟಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ಗಳು ಒಂದೂವರೆ ತಿಂಗಳು ಸ್ಟೋರೇಜ್ ಇರುವ ಸಿಸಿ ಕ್ಯಾಮೆರಾ ಅಳವಡಿಸಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು. ಪೊಲೀಸರು ಟಾಸ್ಕ್ಪೋರ್ಸ್ ಸಮಿತಿಗೆ ಈ ಕುರಿತು ವರದಿ ಮಾಡಬೇಕೆಂದರು.
ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ.ತಾಮ್ರಧ್ವಜ ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ ಸಿಸಿ ಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನೆಟ್ವರ್ಕ್ ವಿಡಿಯೋ ರೆಕಾರ್ಡಿಂಗ್(ಎನ್ವಿಆರ್)ವ್ಯವಸ್ಥೆ ಮೂಲಕ ಕೂತಿರುವಲ್ಲೇ ಸ್ಥಳದ ಘಟನಾವಳಿಯನ್ನು ವೀಕ್ಷಿಸಬಹುದಾಗಿದೆ ಎಂದರು.
ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ, ಚಿಕ್ಕಬಿದರಿ, ಅಚ್ಯುತಪುರ, ಹಿರೇಬಾಸೂರು, ರಾಂಪುರ, ಕುರುಡಿಹಳ್ಳಿ ಇತರೆಡೆ ಹಾಗೂ ಹರಿಹರ ತಾಲ್ಲೂಕಿನ ಸಾರತಿ, ರಾಜನಹಳ್ಳಿ, ಬಿಳಸನೂರು ಸೇರಿದಂತೆ ಅಧಿಕೃತ ಮರಳು ಬ್ಲಾಕ್ಗಳು ಇರುವೆಡೆ ಟಾಸ್ಕ್ಫೋರ್ಸ್ ಸಮಿತಿಯ ಅಧಿಕಾರಿಗಳು ರಾತ್ರಿ ವೇಳೆ ಓಡಾಡಿ, ಪರಿಶೀಲನೆ ನಡೆಸಬೇಕು. ಅನಧಿಕೃತ ಚಟುವಟಿಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ | ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ
ಪರ್ಮಿಟ್ ಇಲ್ಲದೇ ಮರಳು ಸಾಗಿಸುವುದು, ಸಂಗ್ರಹಿಸುವುದರ ವಿರುದ್ದ ದಂಡ ಹಾಕಬೇಕು. ಬಂಡಿಗಳಲ್ಲಿ ಮನೆ ಉದ್ದೇಶಕ್ಕೆ ಮರಳು ಉಪಯೋಗಿಸಬಹುದು. ಆದರೆ ವ್ಯವಹಾರಕ್ಕೆ ಬಳಸಿಕೊಳ್ಳಬಾರದು. ಚಕ್ಕಡಿ ಸೇರಿದಂತೆ ಇತರೆ ದೊಡ್ಡ ವಾಹನಗಳು ಒಂದು ಪರ್ಮಿಟ್ ಪಡೆದು ಅನಧಿಕೃತವಾಗಿ ಬಹಳಷ್ಟು ಮರಳು ಹೊಡೆದು ಸರ್ಕಾರಕ್ಕೆ ರಾಜಧನ ನೀಡದೇ ಹಾನಿ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು ಇಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತ ಚಟುವಟಿಕೆಯನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗೂ ನಿಯಮಾನುಸಾರ ದಂಡ ಸಂಗ್ರಹ ಮಾಡುವಂತೆ ಸೂಚನೆ ನೀಡಿದರು.
ಅಕ್ರಮ ಮರಳು ಬಳಕೆ ತಡೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸ್ಕ್ವಾಡ್ ತಂಡಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಎಸಿಯವರು ಈ ಬಗ್ಗೆ ಸಭೆ ಕರೆದು ಸೂಚನೆಗಳನ್ನು ನೀಡಬೇಕೆಂದರು.
ಆರ್ಟಿಓ ಶ್ರೀಧರ್ ಮಲ್ಲಾಡ್ ಮಾತನಾಡಿ, ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲರ್ ಮತ್ತು ಜಲ್ಲಿ ಮತ್ತು ಮರಳು ಗಾಡಿಗಳಿಂದ ಹಿಂದಿನ ಗಾಡಿಗಳಿಗೆ ಜಲ್ಲಿ ಮರಳು ಸಿಡಿದು ಹಾನಿಯಾಗುವುದನ್ನು ತಪ್ಪಿಸಲು ಟಾರ್ಪಲಿನ್ ಕವರ್ ಮಾಡಿಕೊಂಡು ಹೋಗುವ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಲೋಡ್ ಆದ ವಾಹನಗಳು ಸೇರಿದಂತೆ ಇತರೆ ವಾಹನಗಳಿಗೂ ಸ್ಪೀಡ್ ಕಂಟ್ರೋಲರ್ ಅಳವಡಿಸಲು ಆರ್ಟಿಓ ಕ್ರಮ ವಹಿಸುವಂತೆ ಹಾಗೂ ಟಾರ್ಪಲಿನ್ ಕವರ್ ಮಾಡದಿದ್ದರೆ ದಂಡ ಹಾಕುವಂತೆ ಜೊತೆಗೆ ಟಾರ್ಪಲಿನ್ ಕವರ್ ಮಾಡುವ ಮೂಲಕ ಇತರೆ ವಾಹನಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಲ್ಲು ಕ್ವಾರೆ ನಿರ್ವಹಣೆ ಬಗ್ಗೆ ಸೂಚನೆ
ನಿಯಮ ಮೀರಿ ಯಾವುದೇ ರೀತಿಯ ಕಾನೂನು ಬಾಹಿರ ಕಲ್ಲುಕ್ವಾರೆ ಮಾಡುವಂತಿಲ್ಲ. ಲೈಸನ್ಸ್ನಲ್ಲಿ ಇರುವ ಷರತ್ತು ಮತ್ತು ನಿಯಮಗಳಿಗೆ ಅನುಗುಣವಾಗಿ ಕಲ್ಲು ಕ್ವಾರೆ ನಡೆಸಬೇಕು. ಸ್ಪೋಟಕವಾಗುವ ಸ್ಥಳದ 15 ಮೀಟರ್ ಒಳಗೆ ಧೂಮಪಾನ ನಿಷೇಧ. 24 ಗಂಟೆ ಭದ್ರತಾ ಸಿಬ್ಬಂದಿ ನೇಮಕ, ಸ್ಪೋಟಕ ವ್ಯಾನ್ ಹೆಚ್ಚಿನ ಸಮಯದವರೆಗೆ ಸಾರಿಗೆ ರಸ್ತೆಯಲ್ಲಿ ನಿಲ್ಲಿಸಬಾರದು.
ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೆ ಸ್ಪೋಟಕಗಳನ್ನು ಸಾಗಿಸಬಾರದು. ಸಿಸಿ ಕ್ಯಾಮೆರಾ ನಿರಂತರ ನಿರ್ವಹಿಸುವಂತೆ ಕ್ರಮ ಸೇರಿದಂತೆ ಇನ್ನಿತರೆ ಮುಖ್ಯವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.
ಎಫ್ಐಆರ್ ದಾಖಲು
ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಮಾತನಾಡಿ, ಕಲ್ಲುಕ್ವಾರಿಯಲ್ಲಿ ಅನಧಿಕೃತ ಎಲೆಕ್ಟ್ರಿಕ್ ಡಿಟೋನೇಷನ್ ಇರುವ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿರುವ ಬಗ್ಗೆ ಮಾತನಾಡಿ, ಈ ಸಂಬಂಧ ಎಫ್ಐಆರ್ ದಾಖಲು ಮಾಡಲಾಗಿದೆ. ಎಕ್ಸ್ಪ್ಲೊಸಿವ್ ಸಬ್ಸ್ಟೆನ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನೆಗಳೂರಿನ ಲಿಂಗನಗೌಡ ಎಂಬುವವರು ಆಲೂರುಹಟ್ಟಿ ಗ್ರಾಮದ ಕುಮಾರನಾಯ್ಕ ಎಂಬುವವರ ಕಲ್ಲು ಕ್ವಾರಿಯ ಬಗ್ಗೆ ನೀಡಲಾದ ದೂರಿನನ್ವಯ ಪೋಲೀಸ್ ಉಪಾಧೀಕ್ಷಕರು, ಪಿಎಸ್ಐ, ಭೂವಿಜ್ಞಾನಿಗಳು, ಬ್ಲಾಸ್ಟಿಂಗ್ ತಜ್ಞರು ಸ್ಥಳ ಪರಿಶೀಲನೆ ನಡೆಸಿದಾಗ ಕಲ್ಲು ಕ್ವಾರಿಯನ್ನು ನಡೆಸುತ್ತಿರುವ ಆಲೂರು ಗ್ರಾಮದ ಸರ್ವೇ ನಂ.68/9 ರಲ್ಲಿ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು ಪಂಚನಾಮೆಯನ್ನು ಜರುಗಿಸಿ ಡಿಟೋನೇಟರ್ನ್ನು ಅಮಾನತ್ತುಪಡಿಸಿಕೊಂಡು ಅದನ್ನು ಸುರಕ್ಷತೆ ದೃಷ್ಟಿಯಿಂದ ಕಾಡಜ್ಜಿ ಗ್ರಾಮದಲ್ಲಿರುವ ಮ್ಯಾಗ್ಜಿನ್ನಲ್ಲಿ ಇಡಲು ಕ್ರಮ ವಹಿಸಲಾಗಿದೆ. ಹಾಗೂ ಈ ದೂರಿನನ್ವಯ ಸೂಕ್ತ ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಡಿಸಿ ಯವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಇಓ, ಟಿಹೆಚ್ಓ ಮತ್ತು ತಹಶೀಲ್ದಾರರು ನಿಯಮಿತವಾಗಿ ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಬೇಕು. ಕೋವಿಡ್ ಎರಡನೇ ಅಲೆ ಬಾರದಿರಲಿ. ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಅತಿ ಮುಖ್ಯ ಎಂದು ಸೂಚಿಸಿದರು.
ಶಿಷ್ಟಾಚಾರ ಪಾಲಿಸುವಂತೆ ಸೂಚನೆ
ಸರ್ಕಾರದ ಕಾರ್ಯದರ್ಶಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಕಡ್ಡಾಯವಾಗಿ ಶಿಷ್ಚಾಚಾರ ಪಾಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಒಳಗೊಂಡಂತೆ ಸರ್ಕಾರದ ಆ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗದಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸತಕ್ಕದ್ದು. ಸರ್ಕಾರಿ ಕಾರ್ಯಕ್ರಮ ನಡೆಸಲು ಕನಿಷ್ಟ ಪಕ್ಷ 7 ದಿನಗಳ ಸಮಯಾವಕಾಶವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೋರಬೇಕು ಎಂದು ತಿಳಿಸಿರುತ್ತಾರೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹಿರಿಯ ಭೂವಿಜ್ಞಾನಿ ಕೋದಂಡರಾಮ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಡಿಹೆಚ್ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ವಿಜಯಕುಮಾರ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ಭಾವ ಭೈರಾಗಿ6 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ6 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ದಿನದ ಸುದ್ದಿ6 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಲೈಫ್ ಸ್ಟೈಲ್5 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ5 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್5 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ5 days ago
ಕವಿತೆ | ಅವಳು