ದಿನದ ಸುದ್ದಿ
“ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅತ್ಯಗತ್ಯ” ಕಾರ್ಯಗಾರ
ಸುದ್ದಿದಿನ,ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಇಂದು ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಒಂದು ದಿನದ ತಾಂತ್ರಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಪೃತ್ವಿ ಪ್ರತಿಷ್ಠಾನ, ಮಳೆ ಆಶ್ರಿತ ಕೃಷಿ ಪುನರುಜ್ಜೀವನ ಜಾಲ ಹಾಗೂ ಪರ್ಯಾಯ ಕಾನೂನು ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ “ರೈತರ ಹಿತ ರಕ್ಷಣೆಗೆ ಸರ್ಕಾರದ ಮಧ್ಯ ಪ್ರವೇಶ ಅತ್ಯಗತ್ಯ” ಕಾರ್ಯಗಾರದಲ್ಲಿ ಕೃಷಿ ಆರ್ಥಿಕ ತಜ್ಞರಾದ ಡಾ. ಪ್ರಕಾಶ್ ಕಮ್ಮರಡಿ, ಕಾನೂನು ತಜ್ಞ ವಿನಯ್ ಶ್ರೀನಿವಾಸ್, ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಗ್ರೇಸಿ ಸಿ.ಪಿ ಹಾಗೂ ರೈತ ಮುಖಂಡರಾದ ಕುರಬೂರು ಶಾಂತಕುಮಾರ್ ಮುಂತಾದವರು ಕಳೆದ ದಶಕಗಳಲ್ಲಿ ಕೃಷಿ ಕ್ಷೇತ್ರದಲ್ಲಾದ ಏರಿಳಿತಗಳು ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ | ಫೆ.28ಕ್ಕೆ ಎಫ್ ಡಿ ಎ ಪರೀಕ್ಷೆ | ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಮೊದಲಿಗೆ ಕಾರ್ಯಗಾರದ ಪ್ರಸ್ತಾವನೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಟಿ. ಎನ್ ಪ್ರಕಾಶ್ ಕಮ್ಮರಡಿ. ಬೆಳೆಗೆ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಬೇಕು. ಅವತ್ತಿನ ಕಾಲಕ್ಕೆ ಬೆಳೆ ಬೆಳಡಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು. ಆಗ ಕಾಫಿ ಬೋರ್ಡ್, ಟೀ ಬೋರ್ಡ್ ಗಳು ಸಮೃದ್ಧವಾಗಿ, ಸಮರ್ಥವಾಗಿದ್ದವು. ಆದರೆ ಈಗ ಕೃಷಿಯಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲದೆ ಈ ಎಲ್ಲ ನಿಗಮಗಳು ದುರ್ಬಲವಾಗಿವೆ. ರೈತರ ವಿಚಾರದಲ್ಲಿ ತನ್ನ ಜವಾಬ್ದಾರಿಗಳಿಂದ ಜಾರಿಕೊಳ್ಳುವ ಸಲುವಾಗಿ ಸರ್ಕಾರ ಈ ಕಾಯ್ದೆಗಳನ್ನು ತರಲು ಹೊರಟಿದೆ ಎಂದರು.
ಇನ್ನು ತೋಟಗಾರಿಕಾ ಬೆಳೆಗಳು ಸೇರಿದಂತೆ ಇತರ ಪ್ರಮುಖ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂಬುದರ ಬಗ್ಗೆ ಮಾತನಾಡಿದ ತಜ್ಞರು. ಕನಿಷ್ಟ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಿ ಲಾಭದಾಯಕ ಧಾರಣೆ ಖಾತರಿಗೊಳಿಸುವುದು ಕೂಡ ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಏರ್ಪಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು.
Courtesy : Mass Media Foundation, New Delhi
ಸುದ್ದಿದಿನ.ಕಾಂ|ವಾಟ್ಸಾಪ್|9980346243