Connect with us

ಕ್ರೀಡೆ

ಒಂದು ಪಂದ್ಯ ನೋಡಿ ಜಡ್ಜ್ ಮಾಡುವುದು ಸರಿಯಲ್ಲ | ವಿರಾಟ್ ಕೊಹ್ಲಿ

Published

on

ಸುದ್ದಿದಿನ ಡೆಸ್ಕ್ | ನಮ್ಮ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇವಲ ಒಂದು ಪಂದ್ಯ ನೋಡಿ ಜಡ್ಡ್ ಮೆಂಟ್ ಕೊಡೋದು ಸರಿಯಲ್ಲ ಎಂದಯ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಭಿಮಾಗಳ ಟೀಕೆಗೆ ಪ್ರತ್ಯುತ್ತರ ನೀಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಡಿಯಾ 31 ರನ್‌ಗಳ ಅಂತರದಿಂದ ಸೂಲುಂಡಿತ್ತು. ಈ ಬಗ್ಗೆ ಬೇಕಾಬಿಟ್ಟಿ ಅಭಿಮಾನಿಗಳು ಟೀಕೆಗಳ ಸುರಿಮಳೆ ಗೈದಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ನಾಯಕ ಕೊಹ್ಲಿ ಬೇಸರದಿಂದ ಉತ್ತರಿಸಿದ್ದಾರೆ.

ಅಭಿಮಾನಿಗಳು ಕೊಂಚ ತಾಳ್ಮೆಯಿಂದಿರ ಬೇಕು. ನಾವು ಪಂದ್ಯದಲ್ಲಿ ಹೇಗೆ ಸೋತೆವು ಎಂಬುದನ್ನು ನೋಡೋದಿಲ್ಲ. ನಮ್ಮ ವೈಫಲ್ಯ ತಾಂತ್ರಿಕ ಕಾರಣದಿಂದಲ್ಲ ಎಂದು ತಿಳಿಸಿದ್ದಾರೆ.

ಹೊರಗಿನಿಂದ ನಮ್ಮ ಪಂದ್ಯ ವೀಕ್ಷಿಸುವವರಿಗೆ ನಮ್ಮ ತಂಡ ಕೆಟ್ಟದಾಗಿ ಕಾಣುತ್ತೆ. ನಾವು ಆಂಗ್ಲರ ನಾಡಲ್ಲಿ ಇದ್ದೇವೆ‌. ಇಲ್ಲಿ ಆಟವಾಡುದು ತುಂಬಾ ಕಷ್ಟ. ಆದರೆ ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ಪಂದ್ಯಗಳಲ್ಲಿ ಚೆನ್ನಾಗಿ ಆಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ20 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ...

ದಿನದ ಸುದ್ದಿ5 days ago

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು...

ದಿನದ ಸುದ್ದಿ7 days ago

ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ...

ದಿನದ ಸುದ್ದಿ1 week ago

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್...

ದಿನದ ಸುದ್ದಿ1 week ago

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ...

ಕ್ರೀಡೆ2 weeks ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ...

ಕ್ರೀಡೆ2 weeks ago

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ...

ಕ್ರೀಡೆ2 weeks ago

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ...

ದಿನದ ಸುದ್ದಿ2 weeks ago

ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ....

ದಿನದ ಸುದ್ದಿ2 weeks ago

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100...

Trending