ದಿನದ ಸುದ್ದಿ
ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ : ಎಚ್.ಡಿ.ಕೆ ಕಿಡಿ
ಸುದ್ದಿದಿನ,ಬೆಂಗಳೂರು : ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401