Connect with us

ದಿನದ ಸುದ್ದಿ

ಐಟಿಐ ಕಾಲೇಜು ಅಭಿವೃದ್ಧಿಗೆ 5 ಸಾವಿರ ಕೋಟಿ..!

Published

on

ಸುದ್ದಿದಿನ, ದಾವಣಗೆರೆ:ಐಟಿಐ ಕೋರ್ಸ್‍ಗೆ 150 ಕಾಲೇಜು ಆಯ್ಕೆ ಮಾಡಿದ್ದು, ಒದೊಂದು ಕಾಲೇಜಿಗೆ 30 ರಿಂದ 33 ಕೋಟಿ ಖರ್ಚು ಮಾಡಲಾಗುತ್ತಿದ್ದು, ಒಟ್ಟು 5 ಸಾವಿರ ಕೋಟಿ ಕೇವಲ ಐಟಿಐ ಕಾಲೇಜು ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ. ಜೊತೆಗೆ ಡಿಪ್ಲೋಮಾ ಕಾಲೇಜಿಗೆ ಬಹಳಷ್ಟು ವಿದ್ಯಾರ್ಥಿಗಳು ಸೇರಬಯುಸುತ್ತಾರೆ. ಪಾಲಿಟೆಕ್ನಿಕ್‍ಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಇವತ್ತು ಏನಾದರೂ ಉತ್ತಮವಾದ ಉದ್ಯೋಗ ಅವಕಾಶವಿದೆ ಎಂದರೆ ಅದು ಪಾಲಿಟೆಕ್ನಿಕ್ ಕಾಲೇಜಿನಿಂದ. ಈ ಹಿನ್ನೆಲೆಯಲ್ಲಿ ಪಾಲಿಟೆಕ್ನಿಕ್ ಕಾಲೇಜಿಗಾಗಿ ಬಹಳಷ್ಟು ಸುಧಾರಣೆ ತರಲಾಗುತ್ತಿದೆ. ಸಿಲ್‍ಬಸ್ ಸರಳ ಮಾಡಲಾಗುತ್ತಿದೆ. ವಿಶ್ವವ್ಯಾಪ್ತಿಯಲ್ಲಿ ಅಭಿವೃದ್ಧಿ ಹೊಂದುವಂತಹ ಸಿಲಬಸ್ ತರಲಾಗುತ್ತಿದ್ದು, ನೂರರಷ್ಟು ಉದ್ಯೋಗಾವಕಾಶ ಸಿಗುವಂತೆ ಮಾಡಲಾಗುತ್ತಿದೆ. ಒಂದು ಪದವಿಯಲ್ಲಿ ವಿವಿಧೆತೆ ಕೊಟ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲಿಕ್ಕೆ ಬೇಕಾದಂತಹ ಅವಶ್ಯಕತೆ ಇರುವಂತಹ ತರಬೇತಿ ನೀಡಲಾಗುತ್ತಿದೆ ಎಂದರು.

ಮಾದರಿಯಾಗಿ ಶಿಕ್ಷಣ ನೀತಿ ಅನುಷ್ಠಾನ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರಲು ನೀತಿ ರೂಪಿಸಿದ್ದು, ಕಾರ್ಯರೂಪಕ್ಕೆ ತರುವ ದೊಡ್ಡ ಜವಾಬ್ದಾರಿ ನಮ್ಮ ರಾಜ್ಯದ ಮೇಲಿದೆ. ದೇಶದ ಎಲ್ಲ ರಾಜ್ಯದವರು ನಮ್ಮ ರಾಜ್ಯದ ಕಡೆ ನೋಡುತ್ತಿದ್ದಾರೆ. ಈ ಮೂಲಕ ಮಾದರಿಯಾಗಿ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಬೇಕಿದೆ. ಸಮಾಜದಲ್ಲಿ ಎಲ್ಲ ಕ್ಷೇತ್ರದಲ್ಲಿನ ವೃತ್ತಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ. ರಾಜ್ಯದ ಪ್ರತಿಯೊಬ್ಬ ಯುವಕರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇದೊಂದು ದೊಡ್ಡ ಪರ್ಯಾಯವಾಗಲಿದೆ ಎಂದರು.

ನ್ಯಾಮತಿ ಪದವಿ ಕಾಲೇಜಿಗೆ ಡಿಜಿಟಲ್ ಲರ್ನಿಂಗ್ ಮ್ಯಾನೇಜ್ಮೆಂಟ್ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಶಿಕ್ಷಣ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿಯೊಂದು ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending