ದಿನದ ಸುದ್ದಿ
ಐಟಿಐ ಕಾಲೇಜು ಅಭಿವೃದ್ಧಿಗೆ 5 ಸಾವಿರ ಕೋಟಿ..!
ಸುದ್ದಿದಿನ, ದಾವಣಗೆರೆ:ಐಟಿಐ ಕೋರ್ಸ್‍ಗೆ 150 ಕಾಲೇಜು ಆಯ್ಕೆ ಮಾಡಿದ್ದು, ಒದೊಂದು ಕಾಲೇಜಿಗೆ 30 ರಿಂದ 33 ಕೋಟಿ ಖರ್ಚು ಮಾಡಲಾಗುತ್ತಿದ್ದು, ಒಟ್ಟು 5 ಸಾವಿರ ಕೋಟಿ ಕೇವಲ ಐಟಿಐ ಕಾಲೇಜು ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ. ಜೊತೆಗೆ ಡಿಪ್ಲೋಮಾ ಕಾಲೇಜಿಗೆ ಬಹಳಷ್ಟು ವಿದ್ಯಾರ್ಥಿಗಳು ಸೇರಬಯುಸುತ್ತಾರೆ. ಪಾಲಿಟೆಕ್ನಿಕ್‍ಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಇವತ್ತು ಏನಾದರೂ ಉತ್ತಮವಾದ ಉದ್ಯೋಗ ಅವಕಾಶವಿದೆ ಎಂದರೆ ಅದು ಪಾಲಿಟೆಕ್ನಿಕ್ ಕಾಲೇಜಿನಿಂದ. ಈ ಹಿನ್ನೆಲೆಯಲ್ಲಿ ಪಾಲಿಟೆಕ್ನಿಕ್ ಕಾಲೇಜಿಗಾಗಿ ಬಹಳಷ್ಟು ಸುಧಾರಣೆ ತರಲಾಗುತ್ತಿದೆ. ಸಿಲ್‍ಬಸ್ ಸರಳ ಮಾಡಲಾಗುತ್ತಿದೆ. ವಿಶ್ವವ್ಯಾಪ್ತಿಯಲ್ಲಿ ಅಭಿವೃದ್ಧಿ ಹೊಂದುವಂತಹ ಸಿಲಬಸ್ ತರಲಾಗುತ್ತಿದ್ದು, ನೂರರಷ್ಟು ಉದ್ಯೋಗಾವಕಾಶ ಸಿಗುವಂತೆ ಮಾಡಲಾಗುತ್ತಿದೆ. ಒಂದು ಪದವಿಯಲ್ಲಿ ವಿವಿಧೆತೆ ಕೊಟ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲಿಕ್ಕೆ ಬೇಕಾದಂತಹ ಅವಶ್ಯಕತೆ ಇರುವಂತಹ ತರಬೇತಿ ನೀಡಲಾಗುತ್ತಿದೆ ಎಂದರು.
ಮಾದರಿಯಾಗಿ ಶಿಕ್ಷಣ ನೀತಿ ಅನುಷ್ಠಾನ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರಲು ನೀತಿ ರೂಪಿಸಿದ್ದು, ಕಾರ್ಯರೂಪಕ್ಕೆ ತರುವ ದೊಡ್ಡ ಜವಾಬ್ದಾರಿ ನಮ್ಮ ರಾಜ್ಯದ ಮೇಲಿದೆ. ದೇಶದ ಎಲ್ಲ ರಾಜ್ಯದವರು ನಮ್ಮ ರಾಜ್ಯದ ಕಡೆ ನೋಡುತ್ತಿದ್ದಾರೆ. ಈ ಮೂಲಕ ಮಾದರಿಯಾಗಿ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಬೇಕಿದೆ. ಸಮಾಜದಲ್ಲಿ ಎಲ್ಲ ಕ್ಷೇತ್ರದಲ್ಲಿನ ವೃತ್ತಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ. ರಾಜ್ಯದ ಪ್ರತಿಯೊಬ್ಬ ಯುವಕರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇದೊಂದು ದೊಡ್ಡ ಪರ್ಯಾಯವಾಗಲಿದೆ ಎಂದರು.
ನ್ಯಾಮತಿ ಪದವಿ ಕಾಲೇಜಿಗೆ ಡಿಜಿಟಲ್ ಲರ್ನಿಂಗ್ ಮ್ಯಾನೇಜ್ಮೆಂಟ್ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಶಿಕ್ಷಣ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿಯೊಂದು ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243