ಲೈಫ್ ಸ್ಟೈಲ್
ಇದು ಚಿತ್ರ ವಿಚಿತ್ರ ಫ್ಯಾಷನ್ ಕಾಲ..!
ಹೆಣ್ಣು ಮಕ್ಕಳು ತಲೆಗೂದಲಿಗೆ ಜಡೆ ಹಾಕುವುದು ಸಾಮಾನ್ಯ. ಆದ್ರೆ ಇಲ್ಲಿ ಹುಬ್ಬಿಗೂ ಜಡೆ ಹಾಕುತ್ತಿದ್ದಾರೆ! ಹೆಣ್ಣು ಮಕ್ಕಳು ಕಿವಿ-ಮೂಗು ಚುಚ್ಚಿಸಿಕೊಳ್ಳುವುದು ಸಾಮಾನ್ಯ. ಈಗಂತೂ ಗಂಡು ಹೈಕಳು ಹಾಗೂ ಹೆಣ್ಣುಮಕ್ಕಳಿಬ್ಬರೂ ಕಿವಿ ತುಂಬಾ ಓಲೆ ಹಾಕಿಕೊಂಡು ಓಡಾಡುತ್ತಿರುವುದು ಸಾಮಾನ್ಯ. ಇತ್ತೀಚೆಗೆ ಸ್ಟೈಲ್ -ಫ್ಯಾಷನ್ ಹೆಸರಲ್ಲಿ ಹಲವಾರು ಚಿತ್ರ-ವಿಚಿತ್ರ ಎನಿಸುವ ಟ್ರೆಂಡ್ ಗಳು ಫ್ಯಾಷನ್ ದುನಿಯಾದಲ್ಲಿ ವೈರಲ್ ಆಗುತ್ತಿದೆ. ಅಂತಹದೇ ಸಾಲಿಗೆ ಸೇರಿದ ಟಾಪ್ ತ್ರೀ ಫ್ಯಾಷನ್ ವಿಚಿತ್ರ ಇಲ್ಲಿದೆ ನೋಡಿ…
1. ನಾಲಿಗೆಗೂ ಬಂತು ಆಭರಣ !
ಹಿಂದೆ ಜನ ಕಿವಿ-ಮೂಗು ಚುಚ್ಚಿಸಿಕೊಳ್ಳುವುದು ಸಾಮಾನ್ಯವಾಗಿದ್ದು ಇಂದಿಗೂ ಈ ರೂಢಿ ಮುಂದುವರೆದಿದೆ. ಬುಡಕಟ್ಟು ಜನಾಂಗಗಳಲ್ಲಿ ಪ್ರಚಲಿತ ವಾಗಿದ್ದ ಹಲವಾರು ಸಾಂಪ್ರದಾಯಿಕ ಆಭರಣಗಳು ಇಂದು ಫ್ಯಾಷನ್ ರೂಪ ತಾಳಿದೆ.
ಕಿವಿ ತುಂಬಾ ರಂಧ್ರ ಮಾಡಿ ಐದಾರು ಓಲೆ ಹಾಕುತ್ತಿದ್ದ ಮಹಿಳೆಯರು ಈಗ ಅದು ಸಾಲದು ಎಂಬಂತೆ ನಾಲಿಗೆ ಚುಚ್ಚಿಸಿಕೊಳ್ಳುವುದು.. ನಾಲಿಗೆ ಆಭರಣ ತೊಟ್ಟು ಫ್ಯಾಷನ್ ಎನ್ನುತ್ತಿದ್ದಾರೆ! ಈಗಾಗಲೇ ಪಾಶ್ಚಾತ್ಯ ದೇಶಗಳಲ್ಲಿ ಬಹಳ ವರ್ಷಗಳಿಂದಲೂ ಚಾಲ್ತಿಯಲ್ಲಿರುವ ಈ ಟ್ರೆಂಡ್ ಈಗ ಭಾರತಕ್ಕೂ ಕಾಲಿಟ್ಟಿದೆ.
2. ಕಿವಿಗೆ ಬಂತು ಲವ್ ಲಾಕ್ !
ಈಗಂತೂ ದಿನಕ್ಕೆ ಒಂದು ಟ್ರೆಂಡ್ ಹುಟ್ಟುತ್ತದೆ. ನಾಲಿಗೆ ಆಭರಣ ವಾಯಿತು..ಈಗ ಕಿವಿಗೂ ಲವ್ ಲಾಕ್ ಬಂದಿದೆ ನೋಡಿ..ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ಸಕ್ಕತ್ ಸದ್ದು ಮಾಡುತ್ತಿದೆ ಈ ಹಾರ್ಟ್ ಶೇಪ್ ಇಯರಿಂಗ್.. ಅದರಲ್ಲೇನು ವಿಶೇಷ ಅನ್ನುತ್ತೀರಾ… ಈ ಚಿತ್ರ ಇನ್ನೊಮ್ಮೆ ನೋಡಿ.
ಲವ್ ಲಾಕ್ ಆಗಿರುವುದು ಕಿವಿಯ ಒಳಗೆ! ಅಂದಹಾಗೆ ಇದು ಯುವಪೀಳಿಗೆಯ ಹೊಸಾ ಫ್ಯಾಷನ್ ಟ್ರೆಂಡ್!
3. ತರಾವರಿ ಐ-ಬ್ರೋ!
ಹೆಣ್ಣು ಮಕ್ಕಳು ಮೇಕಪ್ ಮಾಡಿಕೊಳ್ಳದಿದ್ರೂ ಐ-ಬ್ರೋ ಮಾಡಿಸಿದಿರಿ ಸಾಕು ಮಖದಲ್ಲಿ ಕಳೆ-ಲಕ್ಷಣ ಹೆಚ್ಚಾಗುತ್ತದೆ.
ಸೊಟ್ಟಗಿರುವ ಹುಬ್ಬನ್ನು ನೆಟ್ಟಗೆ ತಿದ್ದಿ-ತೀಡಿ ಕಾಮನಬಿಲ್ಲಿನಲ್ಲಿ ಆಕಾರದ ನೀಡುತ್ತಾರೆ. ಇದಕ್ಕೆ ವ್ಯತಿರಿಕ್ತ ಎಂಬಂತೆ ಬಂದಿದೆ ಹೊಸಾ ಐ-ಬ್ರೋ ಟ್ರೆಂಡ್!ಫಿಶ್ ಟೇಲ್ ಐ-ಬ್ರೋ!, ಮಿಕ್ಕಿ- ಬೋ ಐ-ಬ್ರೋ,ಬ್ರೈಡ್ ಐ-ಬ್ರೋ!…
ಇವುಗಳ ಝಲಕ್ ಇಲ್ಲಿದೆ ನೋಡಿ…

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ17 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ17 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ17 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ17 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ