Connect with us

ದಿನದ ಸುದ್ದಿ

ಶಂಕರ್ ನಾಗ್ ಇದೇ 39ನೇ ವಯಸ್ಸಿಗೆ ಕಾಲವಾದರು, ಆ ಸಾಲಿಗೆ ಚಿರು ಸೇರಿಬಿಟ್ಟನೆ..! : ನಟ ಜಗ್ಗೇಶ್ ಕಂಬನಿ

Published

on

ಅಕಾಲ ಮರಣಕ್ಕೆ ತುತ್ತಾದ ನಟ ಚಿರಂಜೀವಿ ಸರ್ಜಾರನ್ನು ನೆನೆಯುತ್ತಾ, ಕಂಬನಿ ಮಿಡಿದಿರುವ ಹಿರಿಯ ನಟ ಜಗ್ಗೇಶ್ ಸರ್ಜಾರೊಂದಿಗಿನ ಹಳೆಯ ಮಧುರ ನೆನಪನ್ನು ಹೀಗೆ ಹಂಚಿಕೊಂಡಿದ್ದಾರೆ. ಓದಿ.

ಚಿರಂಜೀವಿ ಸರ್ಜಾ ನೆನಪಲ್ಲಿ ಜಗ್ಗೇಶ್ ಪತ್ರ

  • ಜಗ್ಗೇಶ್, ನಟ, ಬೆಂಗಳೂರು

ಒಂದು ದಿನ ರಾತ್ರಿ 11ಗಂಟೆಗೆ ನನಗೆ ಕರೆಬಂತು.! ಸಿಟ್ಟಿನಿಂದ ಯಾರು ಅಂದೆ..? ನಾನು ಮಾಮ ಚಿರು ಅಂದ.! ಯಾರೋ ನನ್ನ ನಂಬರ್ ನಿನಗೆ ಕೊಟ್ಟಿದ್ದು ಅಂದೆ.! ನಕ್ಕು Pls ಮಾಮ Forget.! ಅಂದ.

ವಿಷಯ ನಾನು ಮೇಘನ ಮದುವೆ ಆಗಬೇಕು, ನಿಮ್ಮ ಆಶೀರ್ವಾದ ಬೇಕು.! ಜೊತೆಗೆ ನೀವೇ ಅವಳ ಅಪ್ಪ ಅಮ್ಮನ ಜೊತೆ ಮಾತಾಡಬೇಕು ಅಂದ.! ಸುಂದರ್ ಮನೆಗೆ ಹೋಗಿ ಇದರ ಬಗ್ಗೆ ಮಾತಾಡಿ ನನ್ನ ಸ್ನೇಹಿತರಾದ ಜೋತಿಷಿ #ಪ್ರಕಾಶಅಮ್ಮಣ್ಯರ ಬಳಿ ಇಬ್ಬರ ಜಾತಕ ಕೊಟ್ಟು ಚರ್ಚಿಸಿದೆ.. ಆಗ ಅವರು ಹೇಳಿದ್ದು “ಜಗ್ಗೇಶ್, ಅಷ್ಟಮಕುಜ ದೋಷ, ಅದಕ್ಕೆ ಕೆಲ ಪೂಜೆ ಮುಖ್ಯ.. ಅದಮಾಡಿ ಮುಂದುವರೆಯಿರಿ” ಎಂದರು.. ನಂತರ ಆ ಪೂಜೆ ಬಗ್ಗೆ ನನಗೆ ಮಾಹಿತಿ ಇಲ್ಲ.. ಮದುವೆ ನಿಶ್ಚಯ ಆಯಿತು.

ಗಣೇಶನ ಜೊತೆ ಒಂದು Guest Roll ಭಟ್ರ Combo ಮಾಡಿದೆ.. ಆ ಚಿತ್ರಿಕರಣ ಮೇಘನ ಮನೆ ಮುಂದೆಯೇ ಇತ್ತು.! ಚಿತ್ರಿಕರಣ ಮುಗಿಸಿ ಅವರ ಮನೆಗೆ ಹೋಗಿ ಕಾಫಿ ಕುಡಿದು ಅವರ ಮದುವೆಯ ವಿಷಯ ಮಾತಾಡಿ fix ಆಗಿ ಮೇಘನ ಹಾಗು ಚಿರು ಜೊತೆ ಮಾತಾಡಿ ಸಂತೋಷವಾಗಿ ಮನೆಗೆ ಬಂದು ನಾನು ಪರಿಮಳ ಈ ವಿಷಯ ಪ್ರಸ್ತಾಪ ಮಾಡಿದೆವು.. ದೇವರ ದಯೆಯಿಂದ ಮದುವೆಯು ಮುಗಿಯಿತು..

ನಂತರ ಚಿರು ಅನೇಕ ಬಾರಿ ಕರೆಮಾಡಿ “ಮಾಮ Pls ಅಜ್ಜಿಯ ಕೈ ರುಚಿ ಸವಿಯಲು ಮನೆಗೆ ಬನ್ನಿ” ಎಂದು ಕರೆಯುತ್ತಿದ್ದ.! ನನ್ನದು ವಿಚಿತ್ರ ಜನ್ಮ, ಹೂಂ ಎನ್ನುತ್ತಿದ್ದೆ ಆದರೆ ಹೋಗಲಿಲ್ಲ.. ಯಾಕೋ ಇಂದು ನಾನು ಪರಿಮಳ ಚಿರು ಬಗ್ಗೆ ಮಾತಾಡುತ್ತಾ “ಏನ್ ಹುಡುಗರೋ, ಮದುವೆ ಆದಮೇಲೆ ಯಾಕೆ Gap.? ಇಷ್ಟೊತ್ತಿಗೆ Good News ಬೇಕಿತ್ತು” ಎಂದು ಮಾತಾಡಿಕೊಂಡೆವು.! ಮಧ್ಯಾಹ್ನ ಊಟ ಮಾಡಿ ಮಲಗಿದೆ..

ಚಾಲಕ ಪದ್ದು ಕರೆಮಾಡಿ, Boss TV ನೋಡಿದ್ರಾ..? ಚಿರು ಹೋಗಿಬಿಟ್ಟಾ ಎಂದ.. ಕೇಳಿ ಹುಚ್ಚನಂತೆ ಅತ್ತುಬಿಟ್ಟೆ.. ಇಷ್ಟೇನಾ ಬದುಕು.? ಇದಕ್ಕಾ ನಮ್ಮ ಹೋರಾಟ..? ನಮ್ಮಂಥ ಹಿರಿಯರು ನಮ್ಮ ಕಣ್ಣ ಮುಂದಿನ ಕಿರಿಯರ ಸಾವು ನೋಡಬೇಕೆ.? ಎಂಥ ದೌರ್ಭಾಗ್ಯ..! ಶಂಕರ್ ನಾಗ್ ಇದೇ 39ನೇ ವಯಸ್ಸಿಗೆ ಕಾಲವಾದರು.. ಆ ಸಾಲಿಗೆ ಚಿರು ಸೇರಿಬಿಟ್ಟನೆ..!

ಹುಟ್ಟಿಗೆ ಸಾವು ಖಚಿತ.. ಆದರೆ ಇಷ್ಟು ಬೇಗವೇ.!? ಓ ದೇವರೆ ಈ ಸಾವು ನ್ಯಾಯವೆ.!? ದುಃಖದಿಂದ ವಿದಾಯ ಕಲಾಬಂಧುವಿಗೆ.. ಓಂಶಾಂತಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.

ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending