ದಿನದ ಸುದ್ದಿ
ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್
ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು.
ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.
ಭಾರತದ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನರಾಮ್ ಅವರ ಪಾತ್ರ ಪ್ರಮುಖವಾದದ್ದು. ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಸ್ಪøಶ್ಯ- ಅಸ್ಪøಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನರಾಮ್ ಒಬ್ಬರು.
1908 ಏಪ್ರಿಲ್ 5 ರಂದು ಬಿಹಾರದ ‘ಆರಾ’ ಜಿಲ್ಲೆಯ ಚಾಂದ್ವಾ ಗ್ರಾಮದಲ್ಲಿ ಜನಿಸಿದ ಬಾಬು ಜಗಜೀವನರಾಮ್ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಕಷ್ಟು ನಿಂಧನೆ, ಅಪಮಾನ ಹಾಗೂ ನೋವುಗಳನ್ನು ಅನುಭವಿಸಿದ್ದರು. ತಂದೆ ಶೋಭಿರಾಮ್ ಬ್ರಿಟಿಷರ ಭಾರತೀಯ ಸೈನ್ಯದಲ್ಲಿದ್ದು, ಹಲವು ಕಡೆ ಕೆಲಸ ಮಾಡಿ, ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟು ಆರಾ ಪಟ್ಟಣದ ಸಮೀಪದ ಚಾಂದ್ವಾ ಗ್ರಾಮದಲ್ಲಿ ಭೂಮಿಯನ್ನು ಕೊಂಡು ಕೃಷಿಯನ್ನು ಆರಂಭಿಸಿದರು.
ಸಣ್ಣ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಜಗಜೀವನ್ ರಾಮ್ ತಾಯಿ ವಾಸಂತಿ ದೇವಿಯವರ ಆರೈಕೆಯಲ್ಲಿ ಬೆಳೆದರು. ಬಾಲಕ ರಾಮ್ ಆರಾದಲ್ಲಿನ ಮಾಧ್ಯಮಿಕ ಶಾಲೆಯಲ್ಲಿದ್ದಾಗ ಅಲ್ಲಿ ಎರಡು ಪ್ರತ್ಯೇಕ ಕುಡಿಯುವ ನೀರಿನ ಮಡಕೆಗಳನ್ನು ಇಡಲಾಗಿತ್ತು. ಒಂದು ಮಡಕೆ ನೀರು ಹಿಂದು ಮಕ್ಕಳಿಗೆ, ಮತ್ತೊಂದು ಮುಸ್ಲಿಂ ಮಕ್ಕಳಿಗಾಗಿ. ರಾಮ್ ಹಿಂದು ಮಡಕೆಯ ನೀರನ್ನು ಕುಡಿದಾಗ, ಶಾಲಾ ಪ್ರಾಂಶುಪಾಲರವರೆಗೆ ದೂರು ಹೋಯಿತು. ಆಗ ಪ್ರಾಂಶುಪಾಲರು ಮೂರನೆಯ ಮಡಕೆಯನ್ನು ಇರಿಸಿ, ಅದು ಅಸ್ಪøಶ್ಯ ಮಕ್ಕಳಿಗೆ ಎಂದು ಹೇಳಿದರು.
ಮೊದಲ ಬಾರಿಗೆ ಅಸ್ಪøಶ್ಯತೆಯ ಅಪಮಾನ ರಾಮ್ ಅವರನ್ನು ಬಹುವಾಗಿ ಕಾಡಿತು. ಇದರಿಂದ ಸಿಟ್ಟಿಗೆದ್ದ ಬಾಲಕ ರಾಮ್ ಎರಡು ಬಾರಿ ಆ ಮಡಕೆಗಳನ್ನು ಒಡೆದುಹಾಕಿ ತಮ್ಮ ಕೋಪವನ್ನು ಪ್ರದರ್ಶಿಸಿದರು. ಪ್ರಾಂಶುಪಾಲರೇನೋ ಆ ಮೂರನೇ ಮಡಿಕೆ ತೆಗೆಸಿದರು. ಆದರೆ ಈ ಜಾತಿ ಪದ್ಧತಿಯ ಅಪಮಾನದ ಗಾಯ ಬಾಲಕ ರಾಮ್ ಅವರ ಎದೆಯೊಕ್ಕಿತು. ಮುಂದೆ ಜೀವನದ ಉದ್ದಕ್ಕೂ ರಾಮ್ ನಡೆಸಿದ ಎಲ್ಲ ಚಟುವಟಿಕೆಗಳ ಹಿಂದೆ ಈ ನೋವು ಉಳಿದುಕೊಂಡೇ ಇತ್ತು . ಇಂತಹ ಅಪಮಾನದಿಂದ ದಲಿತರನ್ನು ಪಾರು ಮಾಡುವ ಆಶಯವೇ ರಾಮ್ ಅವರ ಎಲ್ಲ ಚಟವಟಿಕೆಗಳ ಪ್ರಧಾನ ಅಂಶವಾಗಿ ಮಾರ್ಪಟ್ಟಿತ್ತು.
ಮುಂದೆ ದಲಿತ ನಾಯಕರಾಗಿ ರೂಪುಗೊಂಡ ಜಗಜೀವನ ರಾಮ್ ಅವರಿಗೆ ಬಿಹಾರ ಕಾರ್ಯಕ್ಷೇತ್ರವಾಯಿತು. ಗಾಂಧೀಜಿಯವರು ಆರಂಭಿಸಿದ್ದ ಅಸ್ಪøಶ್ಯತೆಯ ವಿರುದ್ದದ ಹೋರಾಟದಲ್ಲಿ ರಾಮ್ ಪಾಲ್ಗೊಂಡರು. 1935ರಲ್ಲಿ ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ “ಅಖಿಲ ಭಾರತ ದಮಮನಿತ ವರ್ಗಗಳ ಒಕ್ಕೂಟ”ವನ್ನು ಸ್ಥಾಪಿಸುವಲ್ಲಿ ಜಗಜೀವನ್‍ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು.
ಬಾಬು ಜಗಜೀವನರಾಮ್ 1937 ರಲ್ಲಿ ಬಿಹಾರದ ವಿಧಾನ ಸಭೆಗೆ ಆಯ್ಕೆಯಾಗಿ, 1946ರಲ್ಲಿ ಜವಹರಲಾಲ್ ನೆಹರು ಅವರ ನೇತೃತ್ವದಲ್ಲಿ ಪ್ರಥಮ ಹಂಗಾಮಿ ಸರ್ಕಾರ ರಚನೆಯಾದಾಗ ಸಂಪುಟದ ಅತ್ಯಂತ ಕಿರಿಯ ಸಚಿವರಾಗಿ ಕಾರ್ಮಿಕ ಖಾತೆಯನ್ನು ನೀಡಲಾಗಿತ್ತು. ಮುಂದೆ ಬಾಬುಜೀ ಅವರು ತಮ್ಮ ರಾಜಕೀಯ ಪಯಣದಲ್ಲಿ ಹಿಂದುರುಗಿ ನೋಡಿದ್ದೇ ಇಲ್ಲ. ಹಲವಾರು ಖಾತೆಗಳ ಸಚಿವ ಸ್ಥಾನಗಳನ್ನು ನಿರ್ವಹಿಸಿದರು. ಈ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ ಹೊಸ-ಹೊಸ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಮಿಕ ಖಾತೆಗಳ ಶಿಲ್ಪಿ ಎಂದು ಕರೆಯಲ್ಪಟ್ಟರು. ಭಾರತದಲ್ಲಿ ಪ್ರಪ್ರಥಮ ಬಾರಿಗೆ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಾನೂನು ರಚಿಸಿದ್ದು ಬಾಬುಜೀ ಅವರ ಹೆಗ್ಗಳಿಕೆ.
1971 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆದಾಗ (ಬಾಂಗ್ಲಾ ಪ್ರತ್ಯೇಕ ರಾಷ್ಟ್ರವಾಗಿ ಉದಯವಾದದ್ದು ಈ ಯುದ್ಧದ ಫಲಶೃತಿ) ಜಗಜೀವನ ರಾಮ್ ಕೇಂದ್ರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದರು. ರಾಮ್ ಅವರು ಕೃಷಿ ಸಚಿವರಾಗಿದ್ದಾಗ ಭಾರತೀಯ ಕೃಷಿ ಆಧುನೀಕರಣಗೊಂಡಿತು ಮತ್ತು ಭಾರತದಲ್ಲಿ ಹಸಿರು ಕ್ರಾಂತಿ ನಡೆಯಿತು. 1974ರಲ್ಲಿ ದೇಶ ಬರಗಾಲವನ್ನು ಎದುರಿಸಿದಾಗ ಆಹಾರದ ಬಿಕ್ಕಟ್ಟನ್ನು ನಿಭಾಯಿಸುವ ಹೊಣೆಯನ್ನು ಹೊತ್ತು, ಆಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಿದರು.
1975ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಜಗಜೀವನರಾಮ್ ಅವರು ಬೆಂಬಲಿಸಿದರು. 1977 ರಲ್ಲಿ ಕಾಂಗ್ರೆಸ್ ತೊರೆದು “ಕಾಂಗ್ರೆಸ್ ಫಾರ್ ಡೆಮಾಕ್ರಸಿ” ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಜನತಾ ಪಕ್ಷದ ಮೈತ್ರಿಯನ್ನು ಸೇರಿದರು. ನಂತರ ಅವರು ಭಾರತದ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು (1977-79).
ಜಗಜೀವನ್‍ರಾಮ್ ಅವರು ‘ದೀರ್ಘಕಾಲ ಸೇವೆ ಸಲ್ಲಿಸಿದ ಕ್ಯಾಬಿನೆಟ್ ಮಂತ್ರಿ’ ಎಂಬ ದಾಖಲೆಯನ್ನು ಹೊಂದಿದ್ದಾರೆ. 1952ರಲ್ಲಿ ನಡೆದ ಮೊದಲ ಚುನಾವಣೆಯಿಂದ ಹಿಡಿದು 34 ವರ್ಷಗಳ ಕಾಲ ನಿರಂತರ ಸಂಸದರಾಗಿ ಸೇವೆ ಸಲ್ಲಿಸಿದರು. 1986ರಲ್ಲಿ ಅವರು ಮರಣ ಹೊಂದುವವರೆಗೂ ಸಂಸತ್ತಿನಲ್ಲಿ ಸದಸ್ಯರಾಗಿದ್ದರು.
ಬಾಬುಜೀ ಅವರು ಅಲಂಕರಿಸಿದ ಪ್ರಮುಖ ಸಚಿವಾಲಯಗಳೆಂದರೆ, ಕೇಂದ್ರ ಕಾರ್ಮಿಕ ಮಂತ್ರಿ(1946-52), ಕೇಂದ್ರ ಸಂಪರ್ಕ ಸಚಿವರು(1952-56), ಕೇಂದ್ರ ಸಾರಿಗೆ ಮತ್ತು ರೈಲ್ವೇ ಸಚಿವರು(1956-62), ಕೇಂದ್ರ ಸಾರಿಗೆ ಮತ್ತು ಸಂಪರ್ಕ ಸಚಿವರು(1962-63), ಕಾರ್ಮಿಕ, ಉದ್ಯೋಗ ಮತ್ತು ಪುನರ್ವಸತಿ ಕೇಂದ್ರ ಸಚಿವರು(1966-67), ಕೇಂದ್ರ ಆಹಾರ ಮತ್ತುಕೃಷಿ ಸಚಿವರು(1967-70), ಕೇಂದ್ರ ರಕ್ಷಣ ಸಚಿವರು (1970-74, 1977-79), ಕೇಂದ್ರ ಕೃಷಿ ಮತ್ತು ನೀರಾವರಿ ಸಚಿವರು (1974-77).
ದಲಿತ ಸಮುದಾಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಬಾಬುಜೀ ಅವರು 1986 ಜುಲೈ 6 ರಂದು ಕೊನೆಯುಸಿರೆಳೆದರು. ಅವರ ಸಮಾದಿ ಸ್ಥಳವನ್ನು “ತನ್ಮಯಿ” ಸ್ಮಾರಕವಾಗಿ ಪರಿವರ್ತಿಸಲಾಗಿದೆ. ಮತ್ತು ಬಾಬುಜೀ ಅವರ ಜನ್ಮ ದಿನವನ್ನು ಭಾರತದಲ್ಲಿ ತನ್ಮಯಿ ದಿನ (ಸಮಾನತೆ ದಿನ) ಎಂದು ಆಚರಿಸಲಾಗುತ್ತಿದೆ.
ದಲಿತರ ಕುರಿತು ತೀವ್ರ ಸಹಾನುಭೂತಿ ಹೊಂದಿದ್ದ ಬಾಬುಜಿ ತಮ್ಮ ಜ್ಞಾನ ಮತ್ತು ವ್ಯಾಪಕ ದೃಷ್ಟಿಕೋನದಿಂದ ದೇಶ ಸೇವೆ ಮಾಡಿದರು. ಸರ್ವ ಜನರ ಕಲ್ಯಾಣದ ಕನಸು ಕಂಡಿದ್ದರು.
–ವರದಿ : ರಿಥೇಶ ನಾಯ್ಕ್
ಅಪ್ರೆಂಟಿಸ್, ವಾರ್ತಾ ಇಲಾಖೆ, ಶಿವಮೊಗ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.
ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.
ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.
ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ6 days ago
ಮಾಯಕೊಂಡ ಗುಡ್ಡದಹಳ್ಳಿಗೆ ಕೆ.ಎಸ್.ಆರ್.ಟಿ.ಸಿ.ಬಸ್ ಸೌಕರ್ಯ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ7 days ago
ಆತ್ಮಕತೆ | ನಮ್ಮ ಬಿಆರ್ಪಿ ಸ್ನಾತಕೋತ್ತರ ಕೇಂದ್ರ
-
ದಿನದ ಸುದ್ದಿ6 days ago
ಸಮಾಜ ಕಲ್ಯಾಣ ಇಲಾಖೆ : ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ನ್ಯಾಮತಿ | ತೂಕ ವಂಚನೆ ; ನ್ಯಾಯಬೆಲೆ ಅಂಗಡಿ ಅಮಾನತಿಗೆ ಡಿಸಿ ಆದೇಶ
-
ದಿನದ ಸುದ್ದಿ6 days ago
ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಬಾಲ್ಯ ವಿವಾಹ ತಡೆಗೆ ನೂತನ ಕಾಯ್ದೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್
-
ದಿನದ ಸುದ್ದಿ6 days ago
KPSC | ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ