ದಿನದ ಸುದ್ದಿ
ಜೈನ್ ವಿವಿಯಲ್ಲಿ ಅಂಬೇಡ್ಕರ್ ಗೆ ಅವಮಾನ ; ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಲು ಒತ್ತಾಯ
ಸುದ್ದಿದಿನ,ಬೆಂಗಳೂರು : ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ ಮಾಡಿದ ಘಟನೆಯನ್ನು ಗಂಬೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾದೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ಬೆಂಗಳೂರು ವಿವಿಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಬುಧವಾರ ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಕಿರು ಚಿತ್ರವನ್ನು ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ದೇಶಕ್ಕೆ ಸಂವಿಧಾನವನ್ನು ರಚನೆ ಮಾಡಿದ ಅಂಬೇಡ್ಕರ್ ಅವರಿಗೆ ಇತ್ತೀಚೆಗೆ ಉದ್ದೇಶಪೂರ್ವಕವಾಗಿ ಅವಮಾನವನ್ನು ಮಾಡಲಾಗುತ್ತಿದೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದೇ ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿದೆ. ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.
ಕಿರು ನಾಟಕವೊಂದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಬೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದ್ದು, ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವನ್ನು ಮಾಡಿದವರ ವಿರುದ್ಧ ಹೋರಾಟ ಮಾಡುವಂತೆ ಮಾಡಿದೆ.
ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದ್ದು, ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವನ್ನು ಮಾಡಿದವರ ವಿರುದ್ಧ ಹೋರಾಟ ಮಾಡುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಜೈನ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆ 1989ರ ಅಡಿಯಲ್ಲಿ ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ಕಾನೂನಿನ ಅನುಸಾರ ಕ್ರಮವನ್ನು ಕೈಗೊಳ್ಳಬೇಕು. ದೇಶದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಸರಕಾರ ಎಚ್ಚರಿಕೆಯನ್ನು ವಹಿಸಬೇಕು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಉರಿಲಿಂಗಿ ಪೆದ್ದಿ ಮಠದ. ಜ್ಞಾನ ಪ್ರಕಾಶ್ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ. ಗೋಪಾಲ್, ಡಾ. ರಾಮಕೃಷ್ಣಯ್ಯ,
ಪ್ರೊ. ಹೊನ್ನು ಸಿದ್ದಾರ್ಥ, ಟಿ.ಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹಾ.ರಾ. ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ಸಂಶೋಧನಾ ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನವೀನ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಾಕ್, ರಾಜೇಶ್, ಭಾಗ್ಯ, ಸೌಂದರ್ಯ, ಸಾಹನಾ, ಸುಕನ್ಯಾ, ಸೃಜನ್, ಶ್ರೀಧರ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಜೊತೆಗೆ ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


